ಚೆನ್ನೈ: ಭಾರತ-ಬಾಂಗ್ಲಾದೇಶ ನಡುವಿನ ಮೊದಲ ಕ್ರಿಕೆಟ್ ಟೆಸ್ಟ್ ಪಂದ್ಯ ಆರಂಭವಾಗಿದೆ. ಚೆನ್ನೈನ ಚೆಪಾಕ್ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ಬಾಂಗ್ಲಾ ಕ್ಷೇತ್ರ ರಕ್ಷಣೆ ಆಯ್ಕೆ ಮಾಡಿಕೊಂಡು ರೋಹಿತ್ ಬಳಗವನ್ನು ಬ್ಯಾಟಿಂಗ್ಗೆ ಆಹ್ವಾನಿಸಿದೆ. ಇತ್ತಂಡಗಳ ಆಡುವ 11ರ ಬಳಗ ಘೋಷಣೆಯಾಗಿದೆ. ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಇಬ್ಬರು ಸ್ಪಿನ್ನರ್‌ಗಳನ್ನೊಳಗೊಂಡಂತೆ ಮೂವರು ವೇಗದ ಬೌಲರ್‌ಗಳನ್ನು ಕಣಕ್ಕಿಳಿಸಿದ್ದಾರೆ.
3⃣,2⃣, 1⃣ & Let's GO! 👍 👍
— BCCI (@BCCI) September 19, 2024
Follow The Match ▶️ https://t.co/jV4wK7BOKA#TeamIndia | #INDvBAN | @IDFCFIRSTBank pic.twitter.com/eT3RIF1Gds
ಹೆಡ್ ಟು ಹೆಡ್: ಭಾರತ-ಬಾಂಗ್ಲಾದೇಶ ನಡುವೆ 14ನೇ ಟೆಸ್ಟ್ ಪಂದ್ಯ ನಡೆಯುತ್ತಿದೆ. ಇದುವರೆಗೆ ಉಭಯ ತಂಡಗಳ ನಡುವೆ 13 ಟೆಸ್ಟ್ ಪಂದ್ಯಗಳು ನಡೆದಿವೆ. ಈ ಪೈಕಿ ಟೀಂ ಇಂಡಿಯಾ 11 ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. 2 ಪಂದ್ಯಗಳು ಡ್ರಾನಲ್ಲಿ ಕೊನೆಗೊಂಡಿವೆ. ಬಾಂಗ್ಲಾ ಇಲ್ಲಿಯವರೆಗೂ ಭಾರತದ ವಿರುದ್ಧ ಯಾವುದೇ ಟೆಸ್ಟ್ ಪಂದ್ಯ ಗೆದ್ದಿಲ್ಲ.
ಭಾರತ ತಂಡ: ರೋಹಿತ್ ಶರ್ಮಾ(ನಾಯಕ) ಯಶಸ್ವಿ ಜೈಸ್ವಾಲ್, ಶುಭ್‌ಮನ್ ಗಿಲ್, ವಿರಾಟ್ ಕೊಹ್ಲಿ, ಕೆ.ಎಲ್.ರಾಹುಲ್, ರಿಷಭ್ ಪಂತ್(ವಿ.ಕೀ), ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಜಸ್ಪ್ರೀತ್ ಬುಮ್ರಾ, ಆಕಾಶ್ ದೀಪ್ ಮತ್ತು ಮೊಹಮ್ಮದ್ ಸಿರಾಜ್
ಬಾಂಗ್ಲಾದೇಶ: ಶಾಡ್ಮನ್ ಇಸ್ಲಾಂ, ಜಾಕಿರ್ ಹಸನ್, ನಜ್ಮುಲ್ ಹೊಸೈನ್ ಶಾಂಟೊ(ನಾಯಕ), ಮೊಮಿನುಲ್ ಹಕ್, ಮುಶ್ಫಿಕರ್ ರಹೀಮ್, ಶಕೀಬ್ ಅಲ್ ಹಸನ್, ಲಿಟ್ಟನ್ ದಾಸ್(ವಿ,ಕೀ), ಮೆಹಿದಿ ಹಸನ್ ಮಿರಾಜ್, ತಸ್ಕಿನ್ ಅಹ್ಮದ್, ಹಸನ್ ಮಹಮೂದ್ ಮತ್ತು ನಹಿದ್ ರಾಣಾ