BBMP Issue Notice to Virat Kohli: ಟೀಂ ಇಂಡಿಯಾದ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಸಹ ಮಾಲೀಕತ್ವದ ಒನ್8 ಕಮ್ಯೂನ್ ಪಬ್ಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ನೋಟಿಸ್ ಜಾರಿ ಮಾಡಿದೆ.
ಕಳೆದ ವರ್ಷ ಚಿನ್ನಸ್ವಾಮಿ ಕ್ರೀಡಾಂಗಣ ಬಳಿಯ ಕಸ್ತೂರಬಾ ರಸ್ತೆಯ ರತ್ನಾಮ್ ಕಾಂಪ್ಲೆಕ್ಸ್‌ನ ಆರನೇ ಮಹಡಿಯಲ್ಲಿ ಈ ಪಬ್ ಅನ್ನು ಪ್ರಾರಂಭಿಸಲಾಗಿತ್ತು. ಸಾಮಾನ್ಯವಾಗಿ ಯಾವುದೇ ಪಬ್ ಅನ್ನು ಸ್ಥಾಪಿಸಲು ಬಯಸಿದರೆ, ಅಗ್ನಿಶಾಮಕ ಸುರಕ್ಷಾತ ಅಧಿಕಾರಿಗಳಿಂದ ನಿರಾಕ್ಷೇಪಣಾ ಪ್ರಮಾಣಪತ್ರವನ್ನು ಪಡೆಯಬೇಕು. ಸುರಕ್ಷತಾ ಮಾನದಂಡಗಳನ್ನು ಪರಿಶೀಲಿಸಿದ ನಂತರ ಸಂಬಂಧಪಟ್ಟ ಅಧಿಕಾರಿಗಳು ಈ ಪ್ರಮಾಣಪತ್ರವನ್ನು ನೀಡುತ್ತಾರೆ. ಆದರೆ ಅಂತಹ ಯಾವುದೇ ಪ್ರಮಾಣಪತ್ರ ಇಲ್ಲದೇ ಈ ಪಬ್ ನಡೆಸುತ್ತಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತ ವೆಂಕಟೇಶ್ ಅಧಿಕಾರಿಗಳಿಗೆ ದೂರು ನೀಡಿದ್ದಾರೆ.
ಈ ಬಗ್ಗೆ ತನಿಖೆ ನಡೆಸಿದ ಬಿಬಿಎಂಪಿ ಅಧಿಕಾರಿಗಳು ವಾರದೊಳಗೆ ಪ್ರಮಾಣಪತ್ರ ಸಲ್ಲಿಸಲು ಗಡುವು ನೀಡಿದ್ದಾರೆ. ಗಡುವಿನೊಳಗೆ ಪ್ರಮಾಣ ಪತ್ರ ಸಲ್ಲಿಸದಿದ್ದರೆ ಕಾನೂನು ಕ್ರಮ ಜರುಗಿಸುವುದಾಗಿಯೂ ಎಚ್ಚರಿಕೆ ನೀಡಿದ್ದಾರೆ.
ಕೊಹ್ಲಿ ಒಡೆತನದ ಪಬ್ ಸಂಕಷ್ಟಕ್ಕೆ ಸಿಲುಕಿರುವುದು ಇದೇ ಮೊದಲಲ್ಲ. ಈ ಹಿಂದೆಯೂ ಒನ್8 ಕಮ್ಯೂನ್ ಪಬ್ ಮೇಲೆ ಆರೋಪಗಳು ಕೇಳಿ ಬಂದಿದ್ದವು. ಕಳೆದ ಜೂನ್ನಲ್ಲಿ ಪೊಲೀಸರು ಪಬ್ ವಿರುದ್ಧ ಎಫ್ಐಆರ್ ಕೂಡ ದಾಖಲಿಸಿದ್ದರು.
ನಿಗದಿತ ಸಮಯ ಮೀರಿ ಪಬ್ ನಡೆಸಿದ್ದಕ್ಕಾಗಿ ಪೊಲೀಸರು ದಾಳಿ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದರು. ವಾಸ್ತವವಾಗಿ, ಯಾವುದೇ ಪಬ್ಗಳನ್ನು 1 ಗಂಟೆಯವರೆಗೆ ಮಾತ್ರ ನಡೆಸಲು ಅನುಮತಿ ನೀಡಲಾಗಿದೆ. ಆದರೆ, ರಾತ್ರಿ 1.30ರ ನಂತರವೂ ಪಬ್ ಮುಚ್ಚದೆ ಜೋರಾಗಿ ಸಂಗೀತ ನುಡಿಸುತ್ತಿರುವ ಬಗ್ಗೆ ಜನರು ನೀಡಿದ್ದ ದೂರುಗಳ ಆಧಾರದ ಮೇಲೆ ಪೊಲೀಸರು ದಾಳಿ ನಡೆಸಿ ಪ್ರಕರಣ ದಾಖಸಿದ್ದರು. ಕೊಹ್ಲಿ ಮಾಲಿಕತ್ವದ ಒನ್8 ಪಬ್ ಕೋಲ್ಕತ್ತಾ, ಮುಂಬೈ, ದೆಹಲಿ ಮತ್ತು ಪುಣೆಯಲ್ಲಿ ಶಾಖೆಗಳನ್ನು ಹೊಂದಿದೆ.
One8 Communeನ ಬೆಂಗಳೂರು ಶಾಖೆಯನ್ನು 2023ರ ಡಿಸೆಂಬರ್ ತಿಂಗಳಲ್ಲಿ ಉದ್ಘಾಟಿಸಲಾಗಿತ್ತು. ಈ ಒನ್8 ಕಮ್ಯೂನ್ ದೆಹಲಿ, ಮುಂಬೈ, ಪುಣೆ ಮತ್ತು ಕೋಲ್ಕತ್ತಾದಂತಹ ಇತರ ಪ್ರಮುಖ ನಗರಗಳಲ್ಲಿ ಶಾಖೆಗಳನ್ನು ಹೊಂದಿದೆ.
ಆಸ್ಟ್ರೇಲಿಯಾ ಪ್ರವಾಸದಲ್ಲಿ ವಿರಾಟ್
ವಿರಾಟ್ ಕೊಹ್ಲಿ ಸದ್ಯ ಆಸ್ಟ್ರೇಲಿಯಾ ಪ್ರವಾಸದಲ್ಲಿದ್ದಾರೆ. ಅವರು ಬಾರ್ಡರ್ ಗವಾಸ್ಕರ್ ಟ್ರೋಫಿ ಭಾಗವಾಗಿ ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ 5 ಪಂದ್ಯಗಳ ಟೆಸ್ಟ್ ಸರಣಿ ಆಡುತ್ತಿದ್ದಾರೆ. ಈ ಸರಣಿಯ ಮೂರು ಪಂದ್ಯಗಳು ಈಗಾಗಲೇ ಮುಗಿದಿದ್ದು, ಡಿ.26ಕ್ಕೆ ನಾಲ್ಕನೇ ಟೆಸ್ಟ್ ಪಂದ್ಯ ನಡೆಯಲಿದೆ. ಇದಕ್ಕಾಗಿ ಸಧ್ಯ ಮೆಲ್ಬೋರ್ನ್ನಲ್ಲಿ ತಂಗಿದ್ದಾರೆ. ಕೊಹ್ಲಿ ಈ ಸರಣಿಯಲ್ಲಿ ಮೂರು ಮಂದ್ಯಗಳನ್ನು ಆಡಿ ಒಂದು ಶತಕ ಬಾರಿಸಿದ್ದಾರೆ.
ಇದನ್ನೂ ಓದಿ: WWE ಸೂಪರ್ ಸ್ಟಾರ್ ರೇ ಮಿಸ್ಟೀರಿಯೊ ಸೀನಿಯರ್ ನಿಧನ!