ವಿಶಾಖಪಟ್ಟಣಂ: ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡಿದೆ. ಆಂಧ್ರಪ್ರದೇಶದ ವಿಶಾಖಪಟ್ಟಣಂ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಉಭಯ ತಂಡಗಳು ಮತ್ತೊಂದು ಗೆಲುವಿನ ಕಾತುರದಲ್ಲಿವೆ.
ಕಳೆದ ಪಂದ್ಯದಲ್ಲಿ ಬೆಂಗಳೂರು ರಾಯಲ್ ಚಾಲೆಂಜರ್ಸ್ ತಂಡವನ್ನು ಅದರದ್ದೇ ನೆಲದಲ್ಲಿ ಕೆಕೆಆರ್ ಹೊಸಕಿ ಹಾಕಿತ್ತು. ಇತ್ತ ಡೆಲ್ಲಿ ಕ್ಯಾಪಿಟಲ್ಸ್, ಐಪಿಎಲ್ನ ಶ್ರೇಷ್ಠ ತಂಡಗಳಲ್ಲಿ ಒಂದಾದ ಸಿಎಸ್ಕೆ ವಿರುದ್ಧ ಭರ್ಜರಿ ಗೆಲುವು ಕಂಡಿತ್ತು. ಇದನ್ನು ಮುಂದುವರಿಸಿಕೊಂಡು ಹೋಗುವ ಇರಾದೆಯಲ್ಲಿ ರಿಷಬ್ ಪಂತ್ ನೇತೃತ್ವದ ತಂಡವಿದೆ.
ಇತ್ತಂಡಗಳಲ್ಲಿ ಒಂದು ಬದಲಾವಣೆ ಮಾಡಲಾಗಿದೆ. ಡೆಲ್ಲಿ ತಂಡದ ಬೌಲರ್ ಮುಕೇಶ್ ಕುಮಾರ್ ಗಾಯಗೊಂಡಿದ್ದು, ಬದಲಿಗೆ ಸುಮಿತ್ ಕುಮಾರ್ಗೆ ಅವಕಾಶ ನೀಡಲಾಗಿದೆ. ಕೋಲ್ಕತ್ತಾದಲ್ಲಿ ಕಳೆದ ಪಂದ್ಯದಲ್ಲಿ ಉತ್ತಮ ಪ್ರದರ್ಶನ ತೋರಿದ್ದ ಆಂಕ್ರಿಶ್ ರಘುವಂಶಿಗೆ ಸ್ಥಾನ ನೀಡಲಾಗಿದೆ.
ಡೆಲ್ಲಿ ಕ್ಯಾಪಿಟಲ್ಸ್: ಪೃಥ್ವಿ ಶಾ, ಡೇವಿಡ್ ವಾರ್ನರ್, ಮಿಚೆಲ್ ಮಾರ್ಷ್, ರಿಷಭ್ ಪಂತ್(ನಾಯಕ), ಟ್ರಿಸ್ಟಾನ್ ಸ್ಟಬ್ಸ್, ಅಕ್ಷರ್ ಪಟೇಲ್, ಸುಮಿತ್ ಕುಮಾರ್, ರಸಿಖ್ ದಾರ್ ಸಲಾಂ, ಅನ್ರಿಚ್ ನೋಕಿಯಾ, ಇಶಾಂತ್ ಶರ್ಮಾ, ಖಲೀಲ್ ಅಹ್ಮದ್.
ಕೋಲ್ಕತ್ತಾ ನೈಟ್ ರೈಡರ್ಸ್: ಫಿಲಿಪ್ ಸಾಲ್ಟ್, ಸುನಿಲ್ ನರೈನ್, ವೆಂಕಟೇಶ್ ಅಯ್ಯರ್, ಶ್ರೇಯಸ್ ಅಯ್ಯರ್ (ನಾಯಕ), ರಿಂಕು ಸಿಂಗ್, ಆಂಕ್ರಿಶ್ ರಘುವಂಶಿ, ಆಂಡ್ರೆ ರಸೆಲ್, ರಮಣದೀಪ್ ಸಿಂಗ್, ಮಿಚೆಲ್ ಸ್ಟಾರ್ಕ್, ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ.
ಇದನ್ನೂ ಓದಿ: 'ಟಿ20 ವಿಶ್ವಕಪ್ ತಂಡದಲ್ಲಿ ಮಯಾಂಕ್ ಆಡಬೇಕು': ಅಭಿಮಾನಿಗಳ ಒತ್ತಾಯ - Mayank Yadav