Vinod Kambli: ಭಾರತದ ಮಾಜಿ ದಿಗ್ಗಜ ಕ್ರಿಕೆಟಿಗ ವಿನೋದ್ ಕಾಂಬ್ಳಿ(52) ಅವರ ಆರೋಗ್ಯ ಮತ್ತೆ ಹದಗೆಟ್ಟಿದೆ. ಇಂದು ಅವರನ್ನು ಕುಟುಂಬಸ್ಥರು ಮಹಾರಾಷ್ಟ್ರದ ಥಾಣೆಯ ಆಕೃತಿ ಆಸ್ಪತ್ರೆಗೆ ದಾಖಲಿಸಲಿದ್ದಾರೆ.
ವಿನೋದ್ ಕಾಂಬ್ಳಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಫೋಟೋಗಳು ಮತ್ತು ವೀಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ. ಇದನ್ನು ಕಂಡ ಅಭಿಮಾನಿಗಳು ಕಾಂಬ್ಳಿ ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತಿದ್ದಾರೆ.
VIDEO | Former Indian cricketer Vinod Kambli was admitted to Akruti Hospital, a private facility in Thane, Maharashtra, on Saturday, December 21, after his health condition deteriorated.
— Press Trust of India (@PTI_News) December 23, 2024
The 52-year-old was brought to the hospital by one of his fans who also owns the hospital in… pic.twitter.com/128LnbYkcu
ಇತ್ತೀಚೆಗೆ ಮುಂಬೈನ ಶಿವಾಜಿ ಪಾರ್ಕ್ನಲ್ಲಿ ಕಾಂಬ್ಳಿ ಅವರ ಬಾಲ್ಯದ ಕೋಚ್ ರಮಾಕಾಂತ್ ಅಚ್ರೇಕರ್ ಸ್ಮರಣಾರ್ಥವಾಗಿ ಸ್ಮಾರಕ ಉದ್ಘಾಟನೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಇದರಲ್ಲಿ ಅಚ್ರೇಕರ್ ಶಿಷ್ಯರಾದ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಮತ್ತು ವಿನೋದ್ ಕಾಂಬ್ಳಿ ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಕಾಂಬ್ಳಿ ಸ್ಥಿತಿ ಕಂಡು ಅನೇಕರು ಬೆರಗಾಗಿದ್ದರು. ಎದ್ದು ನಿಲ್ಲಲೂ ಕೂಡಾ ಕಾಂಬ್ಳಿ ಕಷ್ಟಪಡುತ್ತಿದ್ದರು. ಇದನ್ನು ಗಮನಿಸಿದ ಮಾಜಿ ಕ್ರಿಕೆಟಿಗ ಕಪಿಲ್ ದೇವ್, ಸಹಾಯ ಮಾಡುವುದಾಗಿ ತಿಳಿಸಿದ್ದರು.
ಕಾಂಬ್ಳಿ ದೀರ್ಘ ಸಮಯದಿಂದ ಹೃದಯ ಸೇರಿದಂತೆ ಹಲವು ಕಾಯಿಲೆಗಳಿಂದ ಬಳಲುತ್ತಿದ್ದಾರೆ. ಈ ಹಿಂದೆಯೂ ಅವರ ಆರೋಗ್ಯ ಹದಗೆಟ್ಟಿತ್ತು.
ಆರೋಗ್ಯ ಸ್ಥಿತಿಯನ್ನು ವೈದ್ಯರ ತಂಡ ನಿರಂತರವಾಗಿ ಗಮನಿಸುತ್ತಿದ್ದು ಅಗತ್ಯವಿರುವ ಎಲ್ಲಾ ಪರೀಕ್ಷೆಗಳನ್ನು ಮಾಡಲಾಗುತ್ತಿದೆ. ಕಾಂಬ್ಳಿ ಚಿಕಿತ್ಸೆಗೆ ಸಂಪೂರ್ಣ ಸಹಕರಿಸುತ್ತಿದ್ದಾರೆ ಎಂದು ಆಸ್ಪತ್ರೆ ಮೂಲಗಳಿಂದ ತಿಳಿದುಬಂದಿದೆ.
ಇದನ್ನೂ ಓದಿ: ಟಿ20 ಕ್ರಿಕೆಟ್‌ನಲ್ಲಿ ದ್ವಿಶತಕ ಸಿಡಿಸಿದ್ದು ನಾಲ್ವರು ಮಾತ್ರ: ಇದರಲ್ಲಿಬ್ಬರು ಭಾರತೀಯರು!