ನವದೆಹಲಿ: ಭಾರತ ತಂಡದ ಮಾಜಿ ಆರಂಭಿಕ ಬ್ಯಾಟರ್ ಮತ್ತು ಪ್ರಸ್ತುತ ಟೀಂ ಇಂಡಿಯಾದ ಮುಖ್ಯ ಕೋಚ್ ಆಗಿರುವ ಗೌತಮ್ ಗಂಭೀರ್ ಇಂದು 43ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. 2003ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ ಗೌತಿ, ಎಲ್ಲಾ ಮೂರು ಸ್ವರೂಪಗಳಲ್ಲಿ ಆಡಿ ಯಶಸ್ವಿ ಆಟಗಾರನಾದರು. ಅಲ್ಲದೇ ಅನೇಕ ಬಾರಿ ಪ್ರಮುಖ ಪಂದ್ಯಗಳನ್ನು ಗೆಲ್ಲಲು ಸಹಾಯ ಮಾಡಿದ್ದಾರೆ.
ಅದರಲ್ಲೂ 2007ರ T20 ವಿಶ್ವಕಪ್ ಮತ್ತು 2011 ODI ವಿಶ್ವಕಪ್ ಗೆದ್ದ ಭಾರತ ತಂಡದ ಭಾಗವಾಗಿದ್ದರು. ಗಂಭೀರ್ 2007ರ ಟಿ20 ವಿಶ್ವಕಪ್‌ನ ಫೈನಲ್‌ನಲ್ಲಿ ಪಾಕಿಸ್ತಾನದ ವಿರುದ್ಧ 75 ರನ್‌ಗಳ ಅದ್ಭುತ ಇನ್ನಿಂಗ್ಸ್ ಗಳಿಸಿದರೆ, 2011ರ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾವನ್ನು ಎರಡನೇ ಬಾರಿಗೆ ವಿಶ್ವ ಚಾಂಪಿಯನ್ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಆ ಪಂದ್ಯದಲ್ಲಿ ಗಂಭೀರ್ 97 ರನ್‌ಗಳ ಇನ್ನಿಂಗ್ಸ್ ಆಡಿದ್ದರು. ಇಷ್ಟೆಲ್ಲ ಅದ್ಭುತ ಪ್ರದರ್ಶನ ತೋರಿರುವ ಗಂಭೀರ್ ತಮ್ಮ ಹೆಸರಲ್ಲಿ ಯಾರು ಅಳಿಸಲಾಗದಂತಹ ದಾಖಲೆಯೊಂದನ್ನು ಹೊಂದಿದ್ದಾರೆ.
2⃣4⃣2⃣ international matches
— BCCI (@BCCI) October 14, 2024
1⃣0⃣3⃣2⃣4⃣ international runs 💪
2007 World T20 winner 🏆
2011 World Cup winner 🏆
Here's wishing #TeamIndia Head Coach @GautamGambhir a very Happy Birthday 🎂👏 pic.twitter.com/fYirNWAZ4w
ವಾಸ್ತವವಾಗಿ, ಮಾಜಿ ಬ್ಯಾಟರ್ ಗೌತಮ್ ಗಂಭೀರ್ ಟೆಸ್ಟ್‌ನಲ್ಲಿ ಇಂತಹ ಸಾಧನೆಯನ್ನು ಮಾಡಿದ್ದಾರೆ. ಗಂಭೀರ್ ಸತತ ಐದು ಟೆಸ್ಟ್ ಪಂದ್ಯಗಳಲ್ಲಿ ಶತಕ ಸಿಡಿಸಿದ ವಿಶ್ವದ ಏಕೈಕ ಎಡಗೈ ಬ್ಯಾಟ್ಸ್‌ಮನ್ ಮತ್ತು ಮೊದಲ ಭಾರತೀಯರಾಗಿದ್ದಾರೆ. 2009-10 ರಲ್ಲಿ ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಗಂಭೀರ್ ಈ ಸಾಧನೆಯನ್ನು ಮಾಡಿದ್ದರು. ಇದಲ್ಲದೇ ಆಸ್ಟ್ರೇಲಿಯಾದ ಮಾಜಿ ಬ್ಯಾಟ್ಸ್‌ಮನ್ ಸರ್ ಡಾನ್ ಬ್ರಾಡ್‌ಮನ್ ಸತತ 6 ಟೆಸ್ಟ್ ಪಂದ್ಯಗಳಲ್ಲಿ ಗಂಭೀರ್‌ಗಿಂತ ಹೆಚ್ಚು ಶತಕಗಳನ್ನು ಗಳಿಸಿದ್ದಾರೆ. ಮೊಹಮ್ಮದ್ ಯೂಸುಫ್ ಅವರು ಸತತ ಐದು ಟೆಸ್ಟ್ ಪಂದ್ಯಗಳಲ್ಲಿ ಐದು ಶತಕಗಳನ್ನು ಗಳಿಸಿದ್ದಾರೆ. ಆದರೆ ಇವರು ಬಲಗೈ ಬ್ಯಾಟರ್ ಆಗಿ ಈ ದಾಖಲೆ ಬರೆದಿದ್ದಾರೆ.
ಇದನ್ನೂ ಓದಿ: ಕ್ರಿಕೆಟ್ ಪಂದ್ಯ ರದ್ದಾದರೆ ಟಿಕೆಟ್ ಹಣ ವಾಪಸ್ ಪಡೆಯುವುದು ಹೇಗೆ: ಅದಕ್ಕಿರುವ ನಿಯಮಗಳೇನು?