ETV Bharat / sports

ಗುಜರಾತ್ ಟೈಟಾನ್ಸ್ vs ಚೆನ್ನೈ ಸೂಪರ್ ಕಿಂಗ್ಸ್:  ಗಿಲ್ - ಸುದರ್ಶನ್ ಸ್ಫೋಟಕ ಶತಕದಾಟ , ಸಿಎಸ್​ಕೆಗೆ 232 ರನ್​ಗಳ ಬಿಗ್​ ಟಾರ್ಗೆಟ್​ - gt titans vs csk match

ಗುಜರಾತ್‌ ಟೈಟನ್ಸ್‌ ತಂಡ 3 ವಿಕೆಟ್‌ ನಷ್ಟಕ್ಕೆ 231 ರನ್ ಗಳಿಸಿದ್ದು, ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ 232 ರನ್‌ಗಳ ಗುರಿ ನೀಡಿದೆ.

ಗುಜರಾತ್ ಟೈಟಾನ್ಸ್ vs ಚೆನ್ನೈ ಸೂಪರ್ ಕಿಂಗ್ಸ್
ಗುಜರಾತ್ ಟೈಟಾನ್ಸ್ vs ಚೆನ್ನೈ ಸೂಪರ್ ಕಿಂಗ್ಸ್ (File: Shubman Gill (right), Ruturaj Gaikwad (left)(AP))
author img

By ETV Bharat Karnataka Team

Published : May 10, 2024, 7:38 PM IST

Updated : May 10, 2024, 10:09 PM IST

ಅಹಮದಾಬಾದ್​ (ಗುಜರಾತ್): ಇಲ್ಲಿ ನಡೆಯುತ್ತಿರುವ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 59ನೇ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ತಂಡವು ಆರಂಭಿಕ ಬ್ಯಾಟರ್‌ಗಳ ಸ್ಫೋಟಕ ಆಟದ ನೆರವಿನಿಂದ ಚೆನ್ನೈ ಸೂಪರ್ ಕಿಂಗ್ಸ್ ತಂಡದ ವಿರುದ್ಧ ಭಾರಿ ಸ್ಕೋರ್​ ಕಲೆಹಾಕಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ಟೈಟನ್ಸ್​ಗೆ ಭರ್ಜರಿ ಆರಂಭ ದೊರೆಯಿತು. ಸಾಯಿ ಸುದರ್ಶನ್ ಮತ್ತು ನಾಯಕ ಶುಭ್ಮನ್ ಗಿಲ್ ಅವರ ಭರ್ಜರಿ ಶತಕಗಳ ಸಹಾಯದಿಂದ ನಿಗದಿತ 20 ಓವರ್‌ಗಳಲ್ಲಿ 3 ವಿಕೆಟ್‌ ನಷ್ಟಕ್ಕೆ 231 ರನ್ ಗಳಿಸಿದ್ದು, ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ 232 ರನ್‌ಗಳ ಬೃಹತ್ ಗುರಿ ನೀಡಿದೆ.

ಟೈಟನ್ಸ್ ಪರ ಸಾಯಿ ಸುದರ್ಶನ್ 51 ಎಸೆತಗಳಲ್ಲಿ 5 ಬೌಂಡರಿ ಹಾಗೂ 7 ಭರ್ಜರಿ ಸಿಕ್ಸರ್‌ಗಳ ಮೂಲಕ 103 ರನ್ ಗಳಿಸಿ ಔಟಾದರೆ, ಶುಭ್ಮನ್ ಗಿಲ್ 55 ಎಸೆತಗಳನ್ನು ಎದುರಿಸಿ 9 ಬೌಂಡರಿ ಹಾಗೂ 6 ಸಿಕ್ಸರ್‌ಗಳ ಸಮೇತ 104 ರನ್ ಬಾರಿಸಿ ಪೆವಿಲಿಯನ್‌ಗೆ ಮರಳಿದರು. ಇಬ್ಬರೂ ಒಂದೇ ಓವರ್‌ನಲ್ಲಿ ತುಷಾರ್‌ ದೇಶಪಾಂಡೆಗೆ ವಿಕೆಟ್ ಒಪ್ಪಿಸಿದರು. ಮೂರನೇ ಕ್ರಮಾಂಕದಲ್ಲಿ ಬಂದ ಡೇವಿಡ್ ಮಿಲ್ಲರ್‌ 11 ಎಸೆತಗಳಲ್ಲಿ 16 ರನ್‌ ಗಳಿಸಿದರು. ಶಾರುಖ್ 2 ರನ್‌ ಗಳಿಸಿ ಕೊನೆ ಎಸೆತದಲ್ಲಿ ರನೌಟ್ ಆದರು. ಇನ್ನು ಬೌಲಿಂಗ್‌ನಲ್ಲಿ ಸಿಎಸ್‌ಕೆ ತಂಡದ ಪರ ತುಷಾರ್ ದೇಶಪಾಂಡೆ 4 ಓವರ್‌ಗಳಲ್ಲಿ 33 ರನ್ ನೀಡಿ 2 ವಿಕೆಟ್ ಪಡೆದರೆ, ಉಳಿದ ಬೌಲರ್‌ಗಳು ದುಬಾರಿಯಾದರು.

ಗುಜರಾತ್ ಟೈಟಾನ್ಸ್ (ಪ್ಲೇಯಿಂಗ್ XI): ಶುಬ್ಮನ್ ಗಿಲ್ (ನಾಯಕ), ಸಾಯಿ ಸುದರ್ಶನ್, ಶಾರುಖ್ ಖಾನ್, ಡೇವಿಡ್ ಮಿಲ್ಲರ್, ಮ್ಯಾಥ್ಯೂ ವೇಡ್ (ವಿಕೆಟ್ ಕೀಪರ್), ರಾಹುಲ್ ತೆವಾಟಿಯಾ, ರಶೀದ್ ಖಾನ್, ನೂರ್ ಅಹ್ಮದ್, ಉಮೇಶ್ ಯಾದವ್, ಮೋಹಿತ್ ಶರ್ಮಾ, ಕಾರ್ತಿಕ್ ತ್ಯಾಗಿ

ಚೆನ್ನೈ ಸೂಪರ್ ಕಿಂಗ್ಸ್ (ಪ್ಲೇಯಿಂಗ್ XI): ರುತುರಾಜ್ ಗಾಯಕ್ವಾಡ್ (ನಾಯಕ), ರಚಿನ್ ರವೀಂದ್ರ, ಡೇರಿಲ್ ಮಿಚೆಲ್, ಶಿವಂ ದುಬೆ, ಮೊಯೀನ್ ಅಲಿ, ರವೀಂದ್ರ ಜಡೇಜಾ, ಎಂಎಸ್ ಧೋನಿ (ವಿಕೆಟ್ ಕೀಪರ್), ಮಿಚೆಲ್ ಸ್ಯಾಂಟ್ನರ್, ಶಾರ್ದೂಲ್ ಠಾಕೂರ್, ತುಷಾರ್ ದೇಶಪಾಂಡೆ, ಸಿಮರ್ಜೀತ್ ಸಿಂಗ್

ಇಂಪ್ಯಾಕ್ಟ್ ಆಟಗಾರರು: ಗುಜರಾತ್ ಟೈಟಾನ್ಸ್: ಅಭಿನವ್ ಮನೋಹರ್, ಸಂದೀಪ್ ವಾರಿಯರ್, ಬಿಆರ್ ಶರತ್, ದರ್ಶನ್ ನಲ್ಕಂಡೆ, ಜಯಂತ್ ಯಾದವ್

ಚೆನ್ನೈ ಸೂಪರ್ ಕಿಂಗ್ಸ್: ಅಜಿಂಕ್ಯ ರಹಾನೆ, ಶೇಕ್ ರಶೀದ್, ಅರವೆಲ್ಲಿ ಅವನೀಶ್, ಸಮೀರ್ ರಿಜ್ವಿ, ಮುಖೇಶ್ ಚೌಧರಿ

ಇದನ್ನೂ ಓದಿ: ಕೊಹ್ಲಿ, ಪಾಟಿದಾರ್ ಅಬ್ಬರದ ಆಟಕ್ಕೆ ನಲುಗಿದ ಪಂಜಾಬ್: ಆರ್​ಸಿಬಿ ಪ್ಲೇಆಫ್ ಭರವಸೆ ಇನ್ನೂ ಜೀವಂತ - IPL 2024 RCB beat PBKS

Last Updated : May 10, 2024, 10:09 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.