ETV Bharat / sports

ಕೊಹ್ಲಿ ದಾಖಲೆ ಮುರಿದು ಸಂಚಲನ ಸೃಷ್ಟಿಸಿದ ಪಾಂಡ್ಯ: ಈ ಸಾಧನೆ ಮಾಡಿದ ಮೊದಲ ಭಾರತೀಯ!

ಭಾನುವಾರ ನಡೆದ ಬಾಂಗ್ಲಾದೇಶ ವಿರುದ್ಧದ ಟಿ20 ಪಂದ್ಯದಲ್ಲಿ ಭಾರತದ ಸ್ಟಾರ್​ ಆಲ್​ರೌಂಡರ್​ ಹಾರ್ದಿಕ್​ ಪಾಂಡ್ಯ ವಿಶೇಷ ದಾಖಲೆಯೊಂದನ್ನು ಬರೆದಿದ್ದಾರೆ.

ಹಾರ್ದಿಕ್​ ಪಾಂಡ್ಯ
ಹಾರ್ದಿಕ್​ ಪಾಂಡ್ಯ (IANS)
author img

By ETV Bharat Sports Team

Published : Oct 7, 2024, 8:26 PM IST

ಹೈದರಾಬಾದ್​: ಬಾಂಗ್ಲಾದೇಶ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭಾರತ ತಂಡದ ಸ್ಟಾರ್ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಅತ್ಯುತ್ತಮ ಪ್ರದರ್ಶನ ತೋರಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು. ಅವರು ಟೀಂ​ ಇಂಡಿಯಾ ಪಂದ್ಯವನ್ನು ಗೆಲ್ಲುವಂತೆ ಮಾಡಿದ್ದು ಮಾತ್ರವಲ್ಲದೆ, ವಿರಾಟ್​ ಕೊಹ್ಲಿ ದಾಖಲೆ ಮುರಿದರು.

ಟಿ20 ಸ್ವರೂಪದಲ್ಲಿ ಐದನೇ ಬಾರಿಗೆ ಸಿಕ್ಸರ್ ಬಾರಿಸುವ ಮೂಲಕ ಪಂದ್ಯವನ್ನು ಅವರು ಅಂತ್ಯಗೊಳಿಸಿದರು. ಇದಕ್ಕೂ ಮುನ್ನ ಈ ದಾಖಲೆ ವಿರಾಟ್ ಕೊಹ್ಲಿ ಹೆಸರಿನಲ್ಲಿತ್ತು. ಅವರು ನಾಲ್ಕು ಬಾರಿ ಸಿಕ್ಸರ್ ಬಾರಿಸಿ ಪಂದ್ಯ ಮುಗಿಸಿದ್ದರು. 2022ರ ಏಷ್ಯಾಕಪ್‌ನಲ್ಲಿ ಪಾಕಿಸ್ತಾನ ವಿರುದ್ಧದ ಪಂದ್ಯವನ್ನು ಪಾಂಡ್ಯ ಕೊನೆಯ ಎಸೆತದಲ್ಲಿ ಸಿಕ್ಸರ್ ಬಾರಿಸುವ ಮೂಲಕ ಮುಗಿಸಿದ್ದರು. ಇದಲ್ಲದೆ, 2020ರಲ್ಲಿ ಸಿಡ್ನಿಯಲ್ಲಿ ಆಸ್ಟ್ರೇಲಿಯಾ ವಿರುದ್ಧದ ಟಿ20ಯಲ್ಲಿ ಕೊನೆಯ ಎರಡು ಎಸೆತಗಳಲ್ಲಿ ಎರಡು ಸಿಕ್ಸರ್‌ಗಳನ್ನು ಬಾರಿಸಿದ್ದರು. ಪಾಂಡ್ಯ ಐದು ಬಾರಿ ಮತ್ತು ಕೊಹ್ಲಿ ನಾಲ್ಕು ಬಾರಿ ಈ ಸಾಧನೆ ಮಾಡುವ ಮೂಲಕ ಅಂಕಪಟ್ಟಿಯಲ್ಲಿ ಅಗ್ರ ಎರಡು ಸ್ಥಾನದಲ್ಲಿದ್ದರೆ, ರಿಷಭ್ ಪಂತ್ ಮತ್ತು ಧೋನಿ ತಲಾ ಮೂರು ಬಾರಿ ಈ ಸಾಧನೆ ಮಾಡುವ ಮೂಲಕ ಮೂರನೇ ಸ್ಥಾನದಲ್ಲಿದ್ದಾರೆ.

ಗ್ವಾಲಿಯರ್‌ನಲ್ಲಿ ನಡೆದ ಮೊದಲ ಟಿ20 ಪಂದ್ಯದಲ್ಲಿ ಭಾರತ ತಂಡ ಬಾಂಗ್ಲಾದೇಶವನ್ನು 127 ರನ್‌ಗಳಿಗೆ ಕಟ್ಟಿಹಾಕಿತು. ಅಲ್ಲದೇ ಈ ಪಂದ್ಯವನ್ನು ಏಳು ವಿಕೆಟ್‌ಗಳು ಮತ್ತು 49 ಎಸೆತಗಳು ಬಾಕಿ ಇರುವಂತೆಯೇ ಗೆದ್ದುಕೊಂಡಿತು. ಅರ್ಷದೀಪ್ ಸಿಂಗ್ ಮತ್ತು ವರುಣ್ ಚಕ್ರವರ್ತಿ ತಲಾ ಮೂರು ವಿಕೆಟ್ ಉರುಳಿಸಿದರೆ, ಹಾರ್ದಿಕ್ ಪಾಂಡ್ಯ 39 ರನ್‌ಗಳ ಅಜೇಯ ಇನ್ನಿಂಗ್ಸ್ ಆಡಿ ತಂಡವನ್ನು ಗೆಲುವಿನ ದಡ ಸೇರಿಸಿದರು. ಈ ಗೆಲುವಿನೊಂದಿಗೆ ಭಾರತ ಮೂರು ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ.

ಎರಡನೇ ಟಿ20 ಪಂದ್ಯ ಅಕ್ಟೋಬರ್ 9ರಂದು ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯಲಿದೆ.

ಇದನ್ನೂ ಓದಿ: ನಮಗೆ ಟಿ20ಯಲ್ಲಿ 180 ಸ್ಕೋರ್‌ ಮಾಡುವುದು ಹೇಗೆಂದು ತಿಳಿದಿಲ್ಲ: ಬಾಂಗ್ಲಾ ನಾಯಕ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.