Champions Trophy Live Streaming: ಬಹುನಿರೀಕ್ಷಿತ ಐಸಿಸಿ ಚಾಂಪಿಯನ್ಸ್ ಟ್ರೋಫಿ ಬುಧವಾರದಿಂದ ಪ್ರಾರಂಭವಾಗಲಿದೆ. ಪಾಕಿಸ್ತಾನ ಮತ್ತು ದುಬೈನಲ್ಲಿ 19 ದಿನಗಳ ಕಾಲ ನಡೆಯಲಿರುವ ಈ ಟೂರ್ನಿಯಲ್ಲಿ ಒಟ್ಟು 8 ತಂಡಗಳು ಬಾಗಿಯಾಗುತ್ತಿವೆ. ನಾಳೆ ನಡೆಯಲಿರುವ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಪಾಕಿಸ್ತಾನ ಮತ್ತು ನ್ಯೂಜಿಲೆಂಡ್ ತಂಡಗಳು ಮುಖಾಮುಖಿ ಆಗುತ್ತಿವೆ.
ಆದರೆ, ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು ಎಲ್ಲಿ ನೋಡಬೇಕು? ಯಾವ ಆ್ಯಪ್ನಲ್ಲಿ ಆಗಲಿವೆ ಲೈವ್ ಮ್ಯಾಚ್ ಸ್ಟ್ರೀಮಿಂಗ್ ಆಗಲಿದೆ ಎಂಬ ಮಾಹಿತಿ ಬಗ್ಗೆ ಈ ಸ್ಟೋರಿಯಲ್ಲಿ ತಿಳಿಯಿರಿ.
ಭಾರತದಲ್ಲಿ ಪಂದ್ಯಗಳ ಪ್ರಸಾರ ಎಲ್ಲಿ?: ಈ ಬಾರಿಯ ಚಾಂಪಿಯನ್ಸ್ ಟ್ರೋಫಿ ಭಾರತದಲ್ಲಿ, ಜಿಯೋ ಮತ್ತು ಹಾಟ್‌ಸ್ಟಾರ್ ನೆಟ್‌ವರ್ಕ್‌ಗಳಲ್ಲಿ ಪ್ರಸಾರ ಮಾಡಲಾಗುತ್ತದೆ. ಚಾಂಪಿಯನ್ಸ್ ಟ್ರೋಫಿ ಪಂದ್ಯಗಳನ್ನು 8 ಭಾಷೆಗಳಾದ ಕನ್ನಡ, ಇಂಗ್ಲಿಷ್, ಹಿಂದಿ, ತೆಲುಗು, ಬಂಗಾಳಿ, ಮರಾಠಿ, ಭೋಜ್‌ಪುರಿ, ತಮಿಳು ಸೇರಿದಂತೆ ಒಟ್ಟು 16 ಫೀಡ್‌ಗಳಲ್ಲಿ ಪ್ರಸಾರ ಮಾಡಲಾಗುತ್ತದೆ. ಸ್ಟಾರ್ ಸ್ಪೋರ್ಟ್ಸ್ ಮತ್ತು ಸ್ಪೋರ್ಟ್ಸ್ 18 ಚಾನೆಲ್‌ಗಳಲ್ಲಿ ಕನ್ನಡ, ಹಿಂದಿ, ತಮಿಳು ಮತ್ತು ತೆಲುಗು ಭಾಷೆಗಳಲ್ಲಿ ನೇರಪ್ರಸಾರ ಆಗಲಿದೆ.
ಪ್ರಸಾರದ ವಿವರ (ಟಿವಿ, ಡಿಜಿಟಲ್)
ಜಿಯೋಸ್ಟಾರ್ (ಜಿಯೋ ಹಾಟ್‌ಸ್ಟಾರ್, ಸ್ಟಾರ್ ಸ್ಪೋರ್ಟ್, ನೆಟ್‌ವರ್ಕ್ 18 ಚಾನೆಲ್‌ಗಳಲ್ಲಿ ನೇರಪ್ರಸಾರ) ದೂರದರ್ಶನದಲ್ಲಿ ಪಂದ್ಯಗಳು ನೇರ ಪ್ರಸಾರ ಆಗಲಿವೆ.
ಚಾಂಪಿಯನ್ಸ್ ಟ್ರೋಫಿ ಉಚಿತವಾಗಿ ನೋಡಬಹುದೆ?: ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್ ಮತ್ತು ಡಿಸ್ನಿ+ ಹಾಟ್‌ಸ್ಟಾರ್ ಭಾರತದಲ್ಲಿ ಐಸಿಸಿ ಪಂದ್ಯಾವಳಿಗಳ ಅಧಿಕೃತ ಪ್ರಸಾರಕ ಚಾನೆಲ್ಗಳಾಗಿವೆ. ಈ ಪಂದ್ಯಗಳನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್ವರ್ಕ್ನಲ್ಲಿ ನೇರ ಪ್ರಸಾರ ಮಾಡಲಾಗುತ್ತಿದೆ.
ಲೈವ್ ಸ್ಟ್ರೀಮಿಂಗ್‌ಗೆ ಸಂಬಂಧಿಸಿದಂತೆ, ಜಿಯೋಸ್ಟಾರ್ ಅಪ್ಲಿಕೇಶನ್ ಮತ್ತು ವೆಬ್‌ಸೈಟ್‌ನಲ್ಲಿ ಪಂದ್ಯಗಳನ್ನು ವೀಕ್ಷಿಸಬಹುದು. ಸದ್ಯ ಜಿಯೋ ಸಿನಿಮಾ ಮತ್ತು ಹಾಟ್‌ಸ್ಟಾರ್ ವಿಲೀನಗೊಂಡು ಈಗ ಜಿಯೋಸ್ಟಾರ್ ಆಗಿ ಮಾರ್ಪಟ್ಟಿದ್ದು ಜಿಯೋ ಸ್ಟಾರ್ ಆ್ಯಪ್ನಲ್ಲಿ ಪಂದ್ಯ ಲೈವ್ ಸ್ಟ್ರೀಮಿಂಗ್ ಆಗಲಿದೆ. ಇಲ್ಲಿ ಉಚಿತವಾಗಿ ವೀಕ್ಷಿಸಬಹುದಾಗಿದೆ.
ಚಾಂಪಿಯನ್ಸ್ ಟ್ರೋಫಿ ಭಾರತದ ಪಂದ್ಯಗಳು
ಫೆಬ್ರವರಿ 20 - vs ಬಾಂಗ್ಲಾದೇಶ
ಫೆಬ್ರವರಿ 23 - vs ಪಾಕಿಸ್ತಾನ
ಮಾರ್ಚ್ 02 - vs ನ್ಯೂಜಿಲೆಂಡ್
ಚಾಂಪಿಯನ್ಸ್ ಟ್ರೋಫಿಗೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ಶುಭಮನ್ ಗಿಲ್ (ಉಪನಾಯಕ), ಕೆಎಲ್ ರಾಹುಲ್ (ವಿಕೆಟ್ ಕೀಪರ್), ರಿಷಭ್ ಪಂತ್ (ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್, ಅಕ್ಷರ್ ಪಟೇಲ್, ಹಾರ್ದಿಕ್ ಪಾಂಡ್ಯ, ಕುಲದೀಪ್ ಯಾದವ್, ವಾಷಿಂಗ್ಟನ್ ಸುಂದರ್, ಹರ್ಷಿತ್ ರಾಣಾ, ಮೊಹಮ್ಮದ್. ಶಮಿ, ಅರ್ಷದೀಪ್ ಸಿಂಗ್, ರವೀಂದ್ರ ಜಡೇಜಾ, ವರುಣ್ ಚಕ್ರವರ್ತಿ.
ಇದನ್ನೂ ಓದಿ: ಭಾರತದ ಆ ಬೌಲರ್ ತುಂಬಾ ಡೇಂಜರ್ ಹುಷಾರ್! ಬಾಂಗ್ಲಾ ಆಟಗಾರರಿಗೆ ಎಚ್ಚರಿಕೆ