ETV Bharat / sports

ಐಸಿಸಿ ವರ್ಷದ ಅತ್ಯುತ್ತಮ ಟಿ-20 ತಂಡ ಪ್ರಕಟ: ಭಾರತೀಯನಿಗೆ ನಾಯಕ ಪಟ್ಟ! - ICC T20 TEAM OF THE YEAR

ICC T20 Team of the Year 2024: ಐಸಿಸಿ 2024ರ ವರ್ಷದ ಅತ್ಯುತ್ತಮ ಟಿ20 ತಂಡವನ್ನು ಪ್ರಕಟಿಸಿದ್ದು, ನಾಲ್ವರು ಭಾರತೀಯರು ಸ್ಥಾನ ಪಡೆದಿದ್ದಾರೆ.

ROHIT SHARMA  ICC T20 TEAM OF THE YEAR 2024  ICC T20 TEAM OF THE YEAR CAPTAIN  ARSHDEEP SINGH
ICC T20 Team of the Year 2024 (Source : Associated Press)
author img

By ETV Bharat Sports Team

Published : Jan 25, 2025, 7:42 PM IST

ICC T20 Team of the Year 2024: ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ICC) ಇಂದು 2024ರ ವರ್ಷದ ಅತ್ಯುತ್ತಮ ಟಿ20 ತಂಡವನ್ನು ಪ್ರಕಟಿಸಿದೆ. ಈ ತಂಡದಲ್ಲಿ ಭಾರತದ ನಾಲ್ವರು ಆಟಗಾರರು ಸ್ಥಾನ ಪಡೆದುಕೊಂಡಿದ್ದಾರೆ. ರೋಹಿತ್ ಶರ್ಮಾ ಜೊತೆಗೆ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ, ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಮತ್ತು ವೇಗಿ ಅರ್ಷದೀಪ್ ಸಿಂಗ್ ತಂಡದಲ್ಲಿದ್ದಾರೆ. ಉಳಿದಂತೆ ಪಾಕಿಸ್ತಾನ, ಆಸ್ಟ್ರೇಲಿಯಾ, ಅಫ್ಘಾನಿಸ್ತಾನ, ಇಂಗ್ಲೆಂಡ್, ಜಿಂಬಾಬ್ವೆ ಮತ್ತು ವೆಸ್ಟ್ ಇಂಡೀಸ್‌ನ ತಲಾ ಒಬ್ಬ ಆಟಗಾರರು ತಂಡದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ.

ವೆಸ್ಟ್ ಇಂಡೀಸ್ ನ ನಿಕೋಲಸ್ ಪೂರನ್ ವಿಕೆಟ್ ಕೀಪರ್ ಆಗಿ ಆಯ್ಕೆಯಾದರೇ, ರೋಹಿತ್ ಶರ್ಮಾ ಆರಂಭಿಕ ಆಟಗಾರನಾಗಿದ್ದಾರೆ. ಕಳೆದ ವರ್ಷ ಟಿ20 ಸ್ವರೂಪದಲ್ಲಿ ರೋಹಿತ್​ ಶರ್ಮಾ ಉತ್ತಮ ಪ್ರದರ್ಶನ ತೋರಿದ್ದರು. ಅವರು 11 ಟಿ20 ಪಂದ್ಯಗಳನ್ನು ಆಡಿ ಇದರಲ್ಲಿ 42ರ ಸರಾಸರಿಯಲ್ಲಿ 378 ರನ್ ಗಳಿಸಿದ್ದರು. ಇದರಲ್ಲಿ ಒಂದು ಶತಕವೂ ಸೇರಿದೆ.

ಅಲ್ಲದೇ ಕಳೆದ ವರ್ಷ ನಡೆದಿದ್ದ ಟಿ20 ವಿಶ್ವಕಪ್​ನಲ್ಲಿ ರೋಹಿತ್ ಶರ್ಮಾ ನಾಯಕತ್ವದಲ್ಲಿ ಭಾರತವು 11 ವರ್ಷಗಳ ಬಳಿಕ ಐಸಿಸಿ ಟ್ರೋಫಿಯನ್ನು ಗೆದ್ದುಕೊಂಡಿತ್ತು. T20 ವಿಶ್ವಕಪ್ ಗೆದ್ದ ಬಳಿಕ ನಾಯಕ ರೋಹಿತ್ ಶರ್ಮಾ ಅಂತಾರಾಷ್ಟ್ರೀಯ ಟಿ20ಗೆ ನಿವೃತ್ತಿ ಘೋಷಿಸಿದ್ದರು.

ಪ್ರಸ್ತುತ ಟೆಸ್ಟ್ ಮತ್ತು ಏಕದಿನ ತಂಡದ ನಾಯಕರಾಗಿದ್ದಾರೆ. ಮತ್ತೊಂದೆಡೆ ಬುಮ್ರಾ 2024ರಲ್ಲಿ 8 ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ 8.26ರ ಸರಾಸರಿಯಲ್ಲಿ 15 ವಿಕೆಟ್‌ಗಳನ್ನು ಪಡೆದಿದ್ದರು. ಟಿ20 ವಿಶ್ವಕಪ್‌ನಲ್ಲಿ ಭಾರತವನ್ನು ಚಾಂಪಿಯನ್ ಮಾಡುವಲ್ಲಿಯೂ ಬುಮ್ರಾ ಪ್ರಮುಖ ಪಾತ್ರ ವಹಿಸಿದ್ದರು. ಟೂರ್ನಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್‌ಗಳ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದರು.

ಆಲ್​ರೌಂಡರ್​ ಹಾರ್ದಿಕ್ ಪಾಂಡ್ಯ ಕೂಡ ಕಳೆದ ವರ್ಷ 17 ಟಿ-20 ಪಂದ್ಯಗಳನ್ನಾಡಿ 352 ರನ್ ಗಳಿಸಿದ್ದರು. ಬೌಲಿಂಗ್​ನಲ್ಲಿ 16 ವಿಕೆಟ್ ಕೂಡ ಪಡೆದಿದ್ದರು. ಟಿ20 ವಿಶ್ವಕಪ್‌ನಲ್ಲಿ ಪಾಂಡ್ಯ ಪ್ರಮುಖ ಪಾತ್ರ ವಹಿಸಿದ್ದರು. ವೇಗಿ ಅರ್ಷದೀಪ್ ಸಿಂಗ್​ 2024ರಲ್ಲಿ ಚುಟುಕು ಸ್ವರೂಪದಲ್ಲಿ ಭಾರತದ ಅತ್ಯಂತ ಯಶಸ್ವಿ ಬೌಲರ್ ಎನಿಸಿಕೊಂಡರು. ಅವರು 18 ಪಂದ್ಯಗಳಲ್ಲಿ 13.50 ಸರಾಸರಿಯಲ್ಲಿ 36 ವಿಕೆಟ್ ಪಡೆದಿದ್ದರು. ಟಿ20 ವಿಶ್ವಕಪ್‌ನಲ್ಲಿ 8 ಪಂದ್ಯಗಳಲ್ಲಿ 17 ವಿಕೆಟ್ ಉರುಳಿಸಿ ಜಂಟಿಯಾಗಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಆಗಿದ್ದರು.

2024ರ ವರ್ಷದ ಅತ್ಯುತ್ತಮ T20 ತಂಡ: ರೋಹಿತ್ ಶರ್ಮಾ (ನಾಯಕ), ಟ್ರಾವಿಸ್ ಹೆಡ್ (ಆಸ್ಟ್ರೇಲಿಯಾ), ಫಿಲ್ ಸಾಲ್ಟ್ (ಇಂಗ್ಲೆಂಡ್), ಬಾಬರ್ ಅಜಮ್ (ಪಾಕಿಸ್ತಾನ), ನಿಕೋಲಸ್ ಪೂರನ್ (ವಿಕೆಟ್ ಕೀಪರ್, ವೆಸ್ಟ್ ಇಂಡೀಸ್), ಸಿಕಂದರ್ ರಜಾ (ಜಿಂಬಾಬ್ವೆ), ಹಾರ್ದಿಕ್ ಪಾಂಡ್ಯ (ಭಾರತ), ರಶೀದ್ ಖಾನ್ (ಅಫ್ಘಾನಿಸ್ತಾನ), ವನಿಂಡೊ ಹಸ್ರಂಗ (ಶ್ರೀಲಂಕಾ), ಜಸ್ಪ್ರೀತ್ ಬುಮ್ರಾ (ಭಾರತ), ಅರ್ಷದೀಪ್ ಸಿಂಗ್ (ಭಾರತ).

ಇದನ್ನೂ ಓದಿ: 73 ವರ್ಷಗಳ ನಂತರ ಟೆಸ್ಟ್​ ಕ್ರಿಕೆಟ್​ನಲ್ಲಿ ದೊಡ್ಡ ದಾಖಲೆ ಬರೆದ ಪಾಕ್​​​ ಬೌಲರ್!

ETV Bharat Logo

Copyright © 2025 Ushodaya Enterprises Pvt. Ltd., All Rights Reserved.