India WTC Final Scenario: ಬಾರ್ಡರ್-ಗವಾಸ್ಕರ್ ಟ್ರೋಫಿ ಭಾಗವಾಗಿ ಅಡಿಲೇಡ್ನಲ್ಲಿ ನಡೆದ 2ನೇ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಟೀಂ ಇಂಡಿಯಾ ಹೀನಾಯವಾಗಿ ಸೋಲನುಭವಿಸಿದೆ. ಇದರೊಂದಿಗೆ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಅಂಕಪಟ್ಟಿಯಲ್ಲೂ ಭಾರೀ ಹಿನ್ನಡೆ ಅನುಭವಿಸಿದೆ.
ಎರಡನೇ ಪಂದ್ಯದಲ್ಲಿ ಭಾರತ ನೀಡಿದ್ದ 19 ರನ್‌ಗಳ ಗುರಿಯನ್ನು ಆತಿಥೇಯ ತಂಡ ಯಾವುದೇ ವಿಕೆಟ್ ನಷ್ಟವಿಲ್ಲದೆ ತಲುಪಿತು. ಇದರೊಂದಿಗೆ 5 ಪಂದ್ಯಗಳ ಬಾರ್ಡರ್-ಗವಾಸ್ಕರ್ ಟ್ರೋಫಿಯಲ್ಲಿ 1-1 ಅಂತರದಿಂದ ಸಮಬಲ ಸಾಧಿಸಿತು. ಜತೆಗೆ WTC ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೆ ತಲುಪಿದೆ. ಮತ್ತೊಂದೆಡೆ ಈ ಸೋಲಿನೊಂದಿಗೆ ಟೀಂ ಇಂಡಿಯಾಗೆ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ರೂಪದಲ್ಲಿ ಮತ್ತೊಂದು ಪೆಟ್ಟು ಬಿದ್ದಿದೆ.
🚨 MASSIVE CHANGE IN WTC...!!! 🚨
— Mufaddal Vohra (@mufaddal_vohra) December 8, 2024
- Australia takes the No.1 position in the WTC Points Table.
- India slips to No.3. pic.twitter.com/UOLKwOrIjN
ಈ ಪಂದ್ಯಕ್ಕೂ ಮುನ್ನ ಭಾರತ 110 ಅಂಕಗಳೊಂದಿಗೆ ಶೇ 61.11 ಅಂಕಗಳೊಂದಿಗೆ ಅಗ್ರ ಸ್ಥಾನದಲ್ಲಿತ್ತು. ಇದೀಗ ಶೇಕಡಾವಾರು ಅಂಕಗಳು 57.29ಕ್ಕೆ ಕುಸಿದು ಮೂರನೇ ಸ್ಥಾನಕ್ಕೆ ತಲುಪಿದೆ. ಈ ಗೆಲುವಿನೊಂದಿಗೆ ಆಸ್ಟ್ರೇಲಿಯಾ ಶೇ.60.71 ಅಂಕಗಳೊಂದಿಗೆ ಅಗ್ರಸ್ಥಾನಕ್ಕೇರಿದೆ. ದಕ್ಷಿಣ ಆಫ್ರಿಕಾ ಶೇ59.26 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದೆ.
Exciting changes in the standings as the race to the #WTC25 Final heats up 🤩
— ICC (@ICC) December 1, 2024
More ➡ https://t.co/5lIuiKChEe pic.twitter.com/cyWgptbq5I
ಭಾರತದ ಫೈನಲ್ ಹಾದಿ ಕಠಿಣ; ಸದ್ಯ ಭಾರತದ WTC ಫೈನಲ್ ಹಾದಿ ಮತ್ತಷ್ಟು ಕಠಿಣವಾಗಿದೆ. ವಿಶ್ವ ಟೆಸ್ಟ್ ಚಾಂಪಿಯನ್ಸ್ನಲ್ಲಿ ಫೈನಲ್ ತಲುಪಬೇಕಾದರೇ ಭಾರತ ಮುಂದಿನ ಲೆಕ್ಕಾಚಾರ ಹೇಗಿದೆ ಎಂಬುದನ್ನು ಇಲ್ಲಿ ತಿಳಿಯೋಣ.
- ಭಾರತ 3-1 ಅಂತರದಲ್ಲಿ ಗೆದ್ದರೆ: ಭಾರತವು ಬಾರ್ಡರ್-ಗವಾಸ್ಕರ್ ಟ್ರೋಫಿ ಸರಣಿಯನ್ನು 3-1ರಲ್ಲಿ ಕಳೆದುಕೊಂಡರೂ WTC ಫೈನಲ್‌ಗೆ ಅರ್ಹತೆ ಪಡೆಯಬಹುದಾಗಿದೆ. ಆದರೆ ಶ್ರೀಲಂಕಾ ವಿರುದ್ಧ ನಡೆಯುತ್ತಿರುವ ಎರಡನೇ ಟೆಸ್ಟ್ನಲ್ಲಿ ದಕ್ಷಿಣ ಆಫ್ರಿಕಾ ಸೋಲಬೇಕು. ಒಂದು ವೇಳೆ ಪಂದ್ಯ ಡ್ರಾ ಆದರೇ, ಭಾರತ ಆಸ್ಟ್ರೇಲಿಯಾ ವಿರುದ್ಧ 3-1 ಅಂತರದಿಂದ ಗೆದ್ದರೇ ಮಾತ್ರ ಫೈನಲ್‌ಗೆ ತಲುಪಲಿದೆ.
- ಭಾರತ 3-2 ಅಂತರದಿಂದ ಗೆದ್ದರೆ: ಟೀಂ ಇಂಡಿಯಾ ಈ ಸರಣಿಯನ್ನು 3-2 ಅಂತರದಿಂದ ಗೆದ್ದರೂ ಡಬ್ಲ್ಯುಟಿಸಿ ಫೈನಲ್ ತಲುಪಲಿದೆ. ಆದರೆ ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯವನ್ನು ಶ್ರೀಲಂಕಾ ಗೆಲ್ಲಲೇಬೇಕು. ಇದಲ್ಲದೇ ಆಸ್ಟ್ರೇಲಿಯಾ ವಿರುದ್ಧ ಜನವರಿ 29 ರಿಂದ ನಡೆಯಲಿರುವ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಶ್ರೀಲಂಕಾ ಒಂದು ಪಂದ್ಯವನ್ನು ಡ್ರಾ ಮಾಡಿಕೊಳ್ಳಬೇಕಾಗಿದೆ.
- 2-2 ಅಂತರದಿಂದ ಸಮಬಲ ಸಾಧಿಸಿದರೇ: ಆಸೀಸ್ ವಿರುದ್ಧದ ಐದು ಪಂದ್ಯಗಳ ಸರಣಿಯಲ್ಲಿ 2-2 ಅಂತರದಿಂದ ಸಮಬಲಗೊಂಡರೂ ಭಾರತ ವಿಶ್ವ ಟೆಸ್ಟ್ ಚಾಂಪಿಯನ್ ಷಿಪ್ ಫೈನಲ್‌ಗೆ ಪ್ರವೇಶಿಸುವ ಅವಕಾಶವಿದೆ. ಆದರೆ ಶ್ರೀಲಂಕಾ ವಿರುದ್ಧ ನಡೆಯುತ್ತಿರುವ ಸರಣಿಯನ್ನು ದಕ್ಷಿಣ ಆಫ್ರಿಕಾ 2-0 ಅಂತರದಿಂದ ಗೆಲ್ಲಬೇಕಾಗಿದೆ. ಮುಂದಿನ ತಿಂಗಳು ಆಸ್ಟ್ರೇಲಿಯಾ ವಿರುದ್ಧ ನಡೆಯಲಿರುವ 2 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಶ್ರೀಲಂಕಾ ಕನಿಷ್ಠ 1 ಪಂದ್ಯವನ್ನು ಗೆಲ್ಲಬೇಕು. ಹೀಗಾದರೇ ಮಾತ್ರ ಭಾರತ ಬಾರ್ಡರ್-ಗವಾಸ್ಕರ್ ಟ್ರೋಫಿಯನ್ನು 2-2 ರಿಂದ ಡ್ರಾ ಮಾಡಿಕೊಂಡರೂ, WTC ಫೈನಲ್‌ಗೆ ತಲುಪಬಹುದಾಗಿದೆ.
ಇದನ್ನೂ ಓದಿ: 2ನೇ ಟೆಸ್ಟ್: ಆಸ್ಟ್ರೇಲಿಯಾ ವಿರುದ್ಧ ಭಾರತಕ್ಕೆ ಹೀನಾಯ ಸೋಲು; WTC ಅಂಕಪಟ್ಟಿಯಲ್ಲಿ ಭಾರೀ ಕುಸಿತ!