IND vs ENG 1st ODI: ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿ ಇಂದಿನಿಂದ ಪ್ರಾರಂಭವಾಗಿದೆ. ಇದಕ್ಕೂ ಮೊದಲು ನಡೆದಿದ್ದ ಟಿ20 ಸರಣಿಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಟೀಂ ಇಂಡಿಯಾ ಇದೀಗ ಏಕದಿನ ಸರಣಿ ಮೇಲೆ ಕಣ್ಣಿಟ್ಟಿದೆ.
ಉಭಯ ತಂಡಗಳ ಮಧ್ಯೆ ನಡೆಯುತ್ತಿರುವ ಮೊದಲ ಪಂದ್ಯಕ್ಕೆ ನಾಗ್ಪುರದ ವಿದರ್ಭ ಕ್ರಿಕೆಟ್ ಅಸೋಸಿಯೇಷನ್ ಮೈದಾನ ಆತಿಥ್ಯ ವಹಿಸಿಕೊಂಡಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಇಂಗ್ಲೆಂಡ್ ಮೊದಲಿಗೆ ಬ್ಯಾಟಿಂಗ್ ಆಯ್ದುಕೊಂಡಿದೆ. ಟಾಸ್ಗೂ ಮೊದಲು ರೋಹಿತ್ ಶರ್ಮಾ ಟೀಂ ಇಂಡಿಯಾದ ಪ್ಲೇಯಿಂಗ್ ಇಲೆವೆನ್ ಪ್ರಕಟಿಸಿದ್ದರು. ಆದರೆ, ಮೊದಲ ಪಂದ್ಯದಿಂದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಹೊರಗುಳಿದಿದ್ದು ಅಚ್ಚರಿಗೆ ಕಾರಣವಾಗಿದೆ. ಈ ಬಗ್ಗೆ ನಾಯಕ ರೋಹಿತ್ ಶರ್ಮಾ ಸ್ಪಷ್ಟನೆ ನೀಡಿದ್ದಾರೆ.
ರೋಹಿತ್ ಶರ್ಮಾ ಹೇಳಿದ್ದೇನು: ಮೊದಲ ಪಂದ್ಯದಿಂದ ವಿರಾಟ್ ಕೊಹ್ಲಿ ಹೊರಗುಳಿದಿದ್ದಾರೆ. ಕಾರಣ ಅಭ್ಯಾಸದ ವೇಳೆ ಕೊಹ್ಲಿ ಬಲ ಮೊಣಕಾಲಿಗೆ ಗಾಯ ಮಾಡಿಕೊಂಡಿದ್ದಾರೆ. ಚಾಂಪಿಯನ್ಸ್ ಟ್ರೋಫಿ ಸಮೀಪಿಸುತ್ತಿರುವ ಕಾರಣ ಮುನ್ನೆಚ್ಚರಿಕೆ ಕ್ರಮವಾಗಿ ಕೊಹ್ಲಿಗೆ ಮೊದಲ ಪಂದ್ಯದಿಂದ ವಿಶ್ರಾಂತಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಕೊಹ್ಲಿಯ ಕಳೆದ 17 ವರ್ಷಗಳ ಏಕದಿನ ಕ್ರಿಕೆಟ್ ವೃತ್ತಿಜೀವನದಲ್ಲಿ ಗಾಯದಿಂದ ಪಂದ್ಯವನ್ನು ತಪ್ಪಿಸಿಕೊಂಡಿದ್ದು ಇದು ಎರಡನೇ ಬಾರಿಯಾಗಿದೆ. ಇದಕ್ಕೂ ಮೊದಲ 2022ರಲ್ಲಿ ಇಂಗ್ಲೆಂಡ್ ವಿರುದ್ಧ ನಡೆದಿದ್ದ ಏಕದಿನ ಪಂದ್ಯದಲ್ಲಿ ತೊಡೆಸಂದು ನೋವಿಗೆ ತುತ್ತಾಗಿ ಹೊರಗುಳಿದಿದ್ದರು.
Some international matches missed by VIRAT KOHLI due to injury in his career:
— FREE HIT (@FREEHIT06) February 6, 2025
First ODI vs England, 2025
First ODI vs England, 2022
Second Test vs South Africa, 2021/22
Third T20I vs South Africa, 2018
Fourth Test vs Australia, 2017
(C-Tracker)#ViratKohli #INDvENG #INDvsENG pic.twitter.com/b73eMnTMIE
ಈ ಪಂದ್ಯದಲ್ಲಿ ರೋಹಿತ್ ಶರ್ಮಾ ಜೊತೆಗೆ ಯಶಸ್ವಿ ಜೈಸ್ವಾಲ್ ಇನ್ನಿಂಗ್ಸ್ ಆರಂಭಿಸಲಿದ್ದಾರೆ. ಶುಭಮನ್ ಗಿಲ್ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲು ಬರಲಿದ್ದಾರೆ. ಟಿ20 ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡಿದ್ದ ವರುಣ್ ಚಕ್ರವರ್ತಿ ಅವರನ್ನು ತಂಡದಲ್ಲಿ ಸೇರಿಸಿಕೊಂಡರೂ, ಅಂತಿಮ ತಂಡದಲ್ಲಿ ಅವರಿಗೆ ಅವಕಾಶ ನೀಡಲಾಗಿಲ್ಲ. ಅರ್ಶ್‌ದೀಪ್ ಸಿಂಗ್ ಕೂಡ ಅಂತಿಮ ತಂಡದಲ್ಲಿ ಸ್ಥಾನ ಪಡೆದಿಲ್ಲ.
ಇಬ್ಬರು ಪಾದರ್ಪಣೆ: ಈ ಪಂದ್ಯದದ ಮೂಲಕ ಭಾರತ ಪರ ಇಬ್ಬರು ಆಟಗಾರರಾದ ಹರ್ಷಿತ್ ರಾಣಾ ಮತ್ತು ಯಶಸ್ವಿ ಜೈಸ್ವಾಲ್ ಏಕದಿನ ಪಂದ್ಯಕ್ಕೆ ಪಾದಾರ್ಪಣೆ ಮಾಡಿದರು. ಈ ಇಬ್ಬರು ಇಲ್ಲಿಯವರೆಗೆ ಭಾರತ ಪರ ಟಿ20 ಮತ್ತು ಟೆಸ್ಟ್ ಪಂದ್ಯಗಳನ್ನು ಮಾತ್ರ ಆಡಿದ್ದಾರೆ. ಇದೀಗ ಏಕದಿನ ಪಂದ್ಯಕ್ಕೂ ಪ್ರವೇಶಿಸಿದ್ದಾರೆ.
ತಂಡಗಳು-ಭಾರತ: ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ಹಾರ್ದಿಕ್ ಪಾಂಡ್ಯ, ಹರ್ಷಿತ್ ರಾಣಾ, ರವೀಂದ್ರ ಜಡೇಜಾ, ಕುಲದೀಪ್ ಯಾದವ್, ಮೊಹಮ್ಮದ್ ಶಮಿ.
ಇಂಗ್ಲೆಂಡ್: ಫಿಲಿಪ್ ಸಾಲ್ಟ್ (ವಿಕೆಟ್ ಕೀಪರ್), ಬೆನ್ ಡಕೆಟ್, ಹ್ಯಾರಿ ಬ್ರೂಕ್, ಜೋ ರೂಟ್, ಜೋಸ್ ಬಟ್ಲರ್ (ನಾಯಕ), ಲಿಯಾಮ್ ಲಿವಿಂಗ್‌ಸ್ಟೋನ್, ಜಾಕೋಬ್ ಬೆಥೆಲ್, ಜೋಫ್ರಾ ಆರ್ಚರ್, ಬ್ರೈಡನ್ ಕೇರ್ಸ್, ಸಾಕಿಬ್ ಮಹ್ಮದ್, ಆದಿಲ್ ರಶೀದ್.
ಇದನ್ನೂ ಓದಿ: ಚಾಂಪಿಯನ್ಸ್ ಟ್ರೋಫಿಗೂ ಮೊದಲೇ ಆಸ್ಟ್ರೇಲಿಯಾಗೆ ಬಿಗ್ ಶಾಕ್!: ಏಕದಿನ ಕ್ರಿಕೆಟ್ಗೆ ಸ್ಟಾರ್ ಪ್ಲೇಯರ್ ನಿವೃತ್ತಿ!