INDIA VS NEW ZEALAND, 1st TEST: ಭಾರತ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಐದನೇ ದಿನವಾದ ಇಂದು ನ್ಯೂಜಿಲೆಂಡ್ ಭರ್ಜರಿ ಗೆಲುವು ಸಾಧಿಸಿತು. ಭಾರತ ನೀಡಿದ್ದ 107 ರನ್‌ಗಳ ಗುರಿ ಬೆನ್ನತ್ತಿದ ಕಿವೀಸ್, ಕೇವಲ 2 ವಿಕೆಟ್ ಕಳೆದುಕೊಂಡು ಸುಲಭವಾಗಿ ಗುರಿ ತಲುಪಿತು. ಇದರೊಂದಿಗೆ 36 ವರ್ಷಗಳ ಬಳಿಕ ಭಾರತದಲ್ಲಿ ಇದೇ ಮೊದಲ ಬಾರಿಗೆ ಗೆಲುವಿನ ಸಿಹಿ ಕಂಡಿದೆ. 1988ರಲ್ಲಿ ಭಾರತದಲ್ಲಿ ನ್ಯೂಜಿಲೆಂಡ್ ಟೆಸ್ಟ್ ಪಂದ್ಯ ಗೆದ್ದಿತ್ತು.
ಪಂದ್ಯದ ವಿವರ: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡಿದ್ದ ಟೀಂ ಇಂಡಿಯಾ, ಮೊದಲ ಇನ್ನಿಂಗ್ಸ್ನಲ್ಲಿ ಕೇವಲ 46 ರನ್ಗಳಿಗೆ ಆಲೌಟ್ ಆಗಿತ್ತು. ಇದಕ್ಕೆ ಪ್ರತಿಯಾಗಿ ನ್ಯೂಜಿಲೆಂಡ್ 462 ರನ್ಗಳನ್ನು ಕಲೆಹಾಕಿ 356 ರನ್‌ಗಳ ಬೃಹತ್ ಮುನ್ನಡೆ ಸಾಧಿಸಿತ್ತು.
A memorable win for New Zealand as they take a 1-0 lead in the #WTC25 series against India 👊#INDvNZ | 📝 Scorecard: https://t.co/Ktzuqbb61r pic.twitter.com/sQI74beYr8
— ICC (@ICC) October 20, 2024
ಎರಡನೇ ಇನ್ನಿಂಗ್ಸ್ನಲ್ಲಿ ಭಾರತದ ಸರ್ಫರಾಜ್ ಖಾನ್ (150) ಮತ್ತು ರಿಷಭ್ ಪಂತ್ (99) ಬ್ಯಾಟಿಂಗ್ ನೆರವಿನಿಂದ 462 ರನ್ ದಾಖಲಿಸಿತು. ಆದರೆ, 356 ರನ್‌ಗಳ ಹಿನ್ನಡೆಯೊಂದಿಗೆ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದ ಟೀಂ ಇಂಡಿಯಾ ನ್ಯೂಜಿಲೆಂಡ್ಗೆ ಕೇವಲ 107 ರನ್‌ಗಳ ಗುರಿ ನೀಡಲಷ್ಟೇ ಶಕ್ತವಾಯಿತು.
ಇದಕ್ಕುತ್ತರವಾಗಿ, ಎರಡನೇ ಇನ್ನಿಂಗ್ಸ್ನಲ್ಲಿ ಕಿವೀಸ್ ತಂಡ ಡೆವೋನ್ ಕಾನ್ವೆ (17), ವಿಲ್ ಯಂಗ್ (37), ರಚಿನ್ ರವೀಂದ್ರ (38) ಅವರ ಬ್ಯಾಟಿಂಗ್ ನೆರವಿನಿಂದ ಭರ್ಜರಿ ಗೆಲುವು ಸಾಧಿಸಿದೆ. ಈ ಇನ್ನಿಂಗ್ಸ್ನಲ್ಲಿ ಬುಮ್ರಾ 2 ವಿಕೆಟ್ ಪಡೆದರು.
ಅ.26 ರಿಂದ ಎರಡನೇ ಟೆಸ್ಟ್: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ 2ನೇ ಟೆಸ್ಟ್ ಪಂದ್ಯ ಅ.26ರಿಂದ ಆರಂಭವಾಗಲಿದೆ. ಈ ಪಂದ್ಯಕ್ಕೆ ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂ ಆತಿಥ್ಯ ವಹಿಸಿಕೊಂಡಿದೆ.
ಇದನ್ನೂ ಓದಿ: ಡ್ಯಾಶಿಂಗ್ ಕ್ರಿಕೆಟರ್ ವೀರೇಂದ್ರ ಸೆಹ್ವಾಗ್ಗೆ 46ನೇ ಹುಟ್ಟುಹಬ್ಬ: ವೀರೂ ಬರೆದ ದಾಖಲೆಗಳಿವು!