India vs England 1st T20: ಇಂಗ್ಲೆಂಡ್ ವಿರುದ್ದ ನಡೆದ ಮೊದಲ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಭರ್ಜರಿ ಗೆಲುವು ಸಾಧಿಸಿದೆ. ಕೋಲ್ಕತ್ತಾದ ಈಡನ್ ಗಾರ್ಡನ್‌ನಲ್ಲಿ ನಡೆದಿದ್ದ ಈ ಪಂದ್ಯದಲ್ಲಿ ಭಾರತ 7 ವಿಕೆಟ್‌ಗಳಿಂದ ಜಯಭೇರಿ ಭಾರಿಸಿದೆ. ಟೀಂ ಇಂಡಿಯಾ ಪರ ಅಭಿಷೇಕ್ ಶರ್ಮಾ ಸ್ಫೋಟಕ ಬ್ಯಾಟಿಂಗ್ ಮಾಡುವ ಮೂಲಕ 79 ರನ್‌ಗಳ ಇನ್ನಿಂಗ್ಸ್ ಆಡಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು.
ಇಂಗ್ಲೆಂಡ್ ನೀಡಿದ್ದ 132 ರನ್‌ಗಳ ಗುರಿಯನ್ನು ಬೆನ್ನತ್ತಿದ್ದ ಭಾರತ ಉತ್ತಮ ಆರಂಭ ಪಡೆಯಿತು. ಆರಂಭಿಕ ಬ್ಯಾಟರ್ಗಳಾದ ಸಂಜು ಸ್ಯಾಮ್ಸನ್ ಮತ್ತು ಅಭಿಷೇಕ್ ಶರ್ಮಾ ಬಿರುಸಿನ ಬ್ಯಾಟಿಂಗ್ ಪ್ರದರ್ಶನ ತೋರಿದರು. ಸ್ಯಾಮ್ಸನ್ 26 ರನ್ಗಳಿಸಿ ಪೆವಿಲಿಯನ್ ಸೇರಿದರು. ತಮ್ಮ ಇನ್ನಿಂಗ್ಸ್ನಲ್ಲಿ 20 ಎಸೆತಗಳನ್ನು ಎದುರಿಸಿದ ಸ್ಯಾಮ್ಸನ್ 4 ಬೌಂಡರಿ ಹಾಗೂ 1 ಸಿಕ್ಸರ್ ಸಿಡಿಸಿದರು.
𝙈𝙞𝙡𝙚𝙨𝙩𝙤𝙣𝙚 𝙐𝙣𝙡𝙤𝙘𝙠𝙚𝙙 🔓
— BCCI (@BCCI) January 22, 2025
Say hello 👋 to #TeamIndia's leading wicket-taker in Men's T20Is 🔝
Well done, Arshdeep Singh 🙌 🙌
Follow The Match ▶️ https://t.co/4jwTIC5zzs#INDvENG | @IDFCFIRSTBank pic.twitter.com/K6lQF3la01
ಬಳಿಕ ಬಂದ ನಾಯಕ ಸೂರ್ಯಕುಮಾರ್ ಯಾದವ್ ಖಾತೆ ತೆರೆಯದೆ ಶೂನ್ಯಕ್ಕೆ ಪೆವಿಲಿಯನ್ ಸೇರಿದರು. ತಂಡದ ಸ್ಕೋರ್ 125ಕ್ಕೆ ತಲುಪುತ್ತಿದ್ದಂತೆ ಅಭಿಷೇಕ್ ಶರ್ಮಾ ಕೂಡ ಪೆವಿಲಿಯನ್ ಸೇರಿದರು. ನಂತರ ತಿಲಕ್ ವರ್ಮಾ (19*) ಮತ್ತು ಹಾರ್ದಿಕ್ ಪಾಂಡ್ಯ (3*) ಅಜೇಯರಾಗಿ ತಂಡವನ್ನು ಗೆಲುವಿನ ದಡಕ್ಕೆ ಕೊಂಡೊಯ್ದರು. ಕೇವಲ 12.5 ಓವರ್‌ಗಳಲ್ಲಿ ಗುರಿ ತಲುಪುವ ಮೂಲಕ ಭಾರತ ದಾಖಲೆ ಬರೆಯಿತು.
Abhishek Sharma's explosive knock outclassed England in the T20I series opener in Kolkata 💥#INDvENG 📝: https://t.co/9nrI1DaGqi pic.twitter.com/aLigXoyyaN
— ICC (@ICC) January 22, 2025
ಇದಕ್ಕೂ ಮೊದಲು ಟಾಸ್ ಸೋತು ಬ್ಯಾಟಿಂಗ್ಗೆ ಬಂದಿದ್ದ ಇಂಗ್ಲೆಂಡ್ಗೆ ಆರಂಭದಲ್ಲೇ ಭಾರತೀಯ ಬೌಲರ್‌ಗಳು ಶಾಕ್ ನೀಡಿದರು. ಮೊದಲ ಓವರ್ನಲ್ಲಿ ಬೌಲಿಂಗ್ ಮಾಡಿದ ಅರ್ಷದೀಪ್ ಸಿಂಗ್, ಇಂಗ್ಲೆಂಡ್ನ ಆರಂಭಿಕ ಬ್ಯಾಟರ್ ಸಾಲ್ಟ್ ಅವರನ್ನು ಶೂನ್ಯಕ್ಕೆ ಪೆವಿಲಿಯನ್ ದಾರಿ ತೋರಿಸಿದರು. ಬಳಿಕ ಮೂರನೇ ಓವರ್ನಲ್ಲಿ ಬೆನ್ ಡಕೆಟ್ (4) ಅವರನ್ನೂ ಪೆವಿಲಿಯನ್ಗೆ ಕಳುಹಿಸಿದರು.
ಬಳಿಕ ಬಂದ ನಾಯಕ ಜೋಸ್ ಬಟ್ಲರ್ ಆಕ್ರಮಣಕಾರಿ ಬ್ಯಾಟಿಂಗ್ ಮಾಡಿದರು. 44 ಎಸೆತಗಳಲ್ಲಿ 8 ಬೌಂಡರಿ, 2 ಸಿಕ್ಸರ್ ಸಮೆತ 68 ರನ್ಗಳನ್ನು ಚಚ್ಚಿದರು. ತಂಡದ ಪರ ಹೈಸ್ಕೋರರ್ ಎನಿಸಿಕೊಂಡರು. ಆದರೆ ಭಾರತದ ಬೌಲರ್‌ಗಳು ನಿರಂತರ ವಿಕೆಟ್ ಪಡೆದಿದ್ದರಿಂದ ಇಂಗ್ಲೆಂಡ್ ಚೇತರಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಇದರಿಂದಾಗಿ 20 ಓವರ್‌ಗಳಲ್ಲಿ 132 ರನ್‌ಗಳಿಗೆ ಸರ್ವಪತನ ಕಂಡಿತು. ಭಾರತದ ಪರ ವರುಣ್ ಚಕ್ರವರ್ತಿ ಮೂರು ವಿಕೆಟ್ ಕಬಳಿಸಿದರೆ, ಅರ್ಷದೀಪ್, ಹಾರ್ದಿಕ್ ಪಾಂಡ್ಯ ಮತ್ತು ಅಕ್ಷರ್ ಪಟೇಲ್ ತಲಾ ಎರಡು ವಿಕೆಟ್ ಉರುಳಿಸಿದರು.
𝗔 𝗱𝗼𝗺𝗶𝗻𝗮𝘁𝗶𝗻𝗴 𝘀𝗵𝗼𝘄 𝗮𝘁 𝘁𝗵𝗲 𝗘𝗱𝗲𝗻 𝗚𝗮𝗿𝗱𝗲𝗻𝘀! 💪 💪#TeamIndia off to a flying start in the T20I series, sealing a 7⃣-wicket win! 👏 👏
— BCCI (@BCCI) January 22, 2025
Follow The Match ▶️ https://t.co/4jwTIC5zzs#INDvENG | @IDFCFIRSTBank pic.twitter.com/hoUcLWCEIP
ದಾಖಲೆ ಬರೆದ ಟೀಂ ಇಂಡಿಯಾ : ಇಂಗ್ಲೆಂಡ್ ವಿರುದ್ಧ ಕೇವಲ 12.5 ಓವರ್‌ಗಳಲ್ಲಿ ಗೆಲುವು ಸಾಧಿಸಿರುವ ಭಾರತ ದಾಖಲೆಯನ್ನು ಬರೆದಿದೆ. 43 ಎಸೆತಗಳು ಬಾಕಿ ಇರುವಾಗಲೇ ಗೆಲುವು ಸಾಧಿಸಿದ್ದು ಇದು ಬೌಲಿಂಗ್ ವಿಷಯದಲ್ಲಿ ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಅತಿ ದೊಡ್ಡ ಗೆಲುವು ಇದಾಗಿದೆ.
ಅಭಿಷೇಕ್ ಶರ್ಮಾ ದಾಖಲೆ : ಆರಂಭಿಕರಾಗಿ ಬ್ಯಾಟಿಂಗ್ಗೆ ಬಂದ ಯುವ ಆಟಗಾರ ಅಭಿಷೇಕ್ ಶರ್ಮಾ ಅತ್ಯಂತ ವೇಗದ ಬ್ಯಾಟಿಂಗ್ ಮೂಲಕ ದಾಖಲೆ ಬರೆದಿದ್ದಾರೆ. ಕೇವಲ 20 ಎಸೆತಗಳಲ್ಲಿ ಅರ್ಧಶತಕ ಪೂರ್ಣಗೊಳಿಸಿದ ಶರ್ಮಾ ಇಂಗ್ಲೆಂಡ್ ವಿರುದ್ಧ ವೇಗದ ಅರ್ಧಶತಕ ಬಾರಿಸಿದ ಎರಡನೇ ಭಾರತೀಯ ಬ್ಯಾಟರ್ ಎನಿಸಿಕೊಂಡರು. ಇದಕ್ಕೂ ಮುನ್ನ ಯುವರಾಜ್ ಸಿಂಗ್ ಕೇವಲ 12 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ್ದರು.
ಕನ್ನಡಿಗನ ಕಮಾಲ್ : ಭಾರತದ ಪರ ಬೌಲಿಂಗ್ನಲ್ಲಿ ಕನ್ನಡಿಗ ವರುಣ್ ಚಕ್ರವರ್ತಿ ಅದ್ಭುತ ಪ್ರದರ್ಶನ ತೋರಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು. ಅವರು 4 ಓವರ್‌ಗಳಲ್ಲಿ 23 ರನ್ ನೀಡಿ 3 ವಿಕೆಟ್ಗಳನ್ನು ಪಡೆದರು. ಇದರೊಂದಿಗೆ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ಪಡೆದರು.
ಹಳೆ ಸೇಡು ತೀರಿಸಿಕೊಂಡ ಭಾರತ : ಈ ಗೆಲುವಿನೊಂದಿಗೆ ಭಾರತ ಇಂಗ್ಲೆಂಡ್ ವಿರುದ್ಧ 13 ವರ್ಷದ ಹಳೆ ಸೇಡನ್ನು ತೀರಿಸಿಕೊಂಡಿತು. ಈ ಹಿಂದೆ 2011ರಲ್ಲಿ ಇಂಗ್ಲೆಂಡ್ ವಿರುದ್ಧ ಈಡನ್ ಗಾರ್ಡನ್‌ನಲ್ಲಿ ನಡೆದಿದ್ದ ಟಿ20 ಪಂದ್ಯದಲ್ಲಿ ಭಾರತ ಹೀನಾಯವಾಗಿ ಸೋಲನುಭವಿಸಿತ್ತು. ಬಳಿಕ ಉಭಯ ತಂಡಗಳ ನಡುವೆ ಈ ಮೈದಾನದಲ್ಲಿ ಒಂದೇ ಒಂದು ಪಂದ್ಯ ನಡೆದಿರಲಿಲ್ಲ.
ಇದನ್ನೂ ಓದಿ: ಗುಡ್ ನ್ಯೂಸ್! RCBಗೆ ಸ್ಟಾರ್ ಪ್ಲೇಯರ್ ಎಂಟ್ರಿ: ತಂಡಕ್ಕೆ ಬಂತು ಆನೆ ಬಲ