Test Ranking: ಇತ್ತೀಚೆಗೆ ನಡೆದಿದ್ದ ಬಾರ್ಡರ್-ಗವಾಸ್ಕರ್ ಟ್ರೋಫಿ ಸರಣಿಯಲ್ಲಿ ಆತಿಥೇಯ ಆಸ್ಟ್ರೇಲಿಯಾ ವಿರುದ್ಧ 3-1 ಅಂತರದಲ್ಲಿ ಸೋಲನುಭವಿಸಿರುವ ಟೀಮ್ ಇಂಡಿಯಾ ಐಸಿಸಿ ಟೆಸ್ಟ್ ರ್ಯಾಂಕಿಂಗ್ನಲ್ಲಿ ಕುಸಿತ ಕಂಡಿದೆ.
9 ವರ್ಷಗಳ ಬಳಿಕ ಟೀಂ ಇಂಡಿಯಾ ಐಸಿಸಿ ಟೆಸ್ಟ್ ಶ್ರೇಯಾಂಕದಲ್ಲಿ ಅಗ್ರ-2 ಸ್ಥಾನ ಬಿಟ್ಟು ಮೂರನೇ ಸ್ಥಾನಕ್ಕೆ ಕುಸಿದಿದೆ. ಆದಾಗ್ಯೂ, ಆಡಿರುವ ಕೊನೆಯ 8 ಟೆಸ್ಟ್ ಪಂದ್ಯಗಳಲ್ಲಿ ಭಾರತ 6ರಲ್ಲಿ ಸೋತು WTC ಫೈನಲ್‌ಗೆ ತಲುಪಲು ವಿಫಲವಾಯಿತು.
ಮತ್ತೊಂದೆಡೆ ದಕ್ಷಿಣ ಆಫ್ರಿಕಾ ಸತತ ಏಳು ಟೆಸ್ಟ್ ಪಂದ್ಯಗಳಲ್ಲಿ ಗೆಲುವು ಸಾಧಿಸುವ ಮೂಲಕ ಟೆಸ್ಟ್ ಶ್ರೇಯಾಂಕದಲ್ಲೂ ಭಾರೀ ಜಿಗಿತ ಕಂಡಿದೆ. ಸುಧಾರಿಸಲು ಸಹಾಯ ಮಾಡಿದೆ. ಪಾಕಿಸ್ತಾನ ವಿರುದ್ಧದ ಟೆಸ್ಟ್ ಸರಣಿಯಲ್ಲಿ ದಕ್ಷಿಣ ಆಫ್ರಿಕಾ 2-0 ಅಂತರದಲ್ಲಿ ಗೆಲುವು ಸಾಧಿಸುವುದರ ಜೊತೆಗೆ ಟೆಸ್ಟ್ನಲ್ಲಿ ಎರಡನೇ ಸ್ಥಾನಕ್ಕೆ ತಲುಪಿದೆ. ಸಧ್ಯ 112 ರೇಟಿಂಗ್ ಅಂಕಗಳೊಂದಿಗೆ ಹರಿಣ ಪಡೆ ಭಾರತವನ್ನು ಹಿಂದಿಕ್ಕಿದೆ.
ಈ ಪಟ್ಟಿಯಲ್ಲಿ ಆಸ್ಟ್ರೇಲಿಯಾ ಅಗ್ರಸ್ಥಾನದಲ್ಲಿದೆ. ಸಧ್ಯ 126 ಅಂಕಗಳನ್ನು ಹೊಂದಿದೆ. 2016ರ ನಂತರ ಮೊದಲ ಬಾರಿಗೆ ಭಾರತ 109 ರೇಟಿಂಗ್ ಅಂಕಗಳೊಂದಿಗೆ ಟೆಸ್ಟ್ ತಂಡಗಳ ಶ್ರೇಯಾಂಕದಲ್ಲಿ ಮೂರನೇ ಸ್ಥಾನಕ್ಕೆ ಕುಸಿದಿದೆ. ಇಂಗ್ಲೆಂಡ್ 106 ಅಂಕಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿದ್ದು, ನ್ಯೂಜಿಲೆಂಡ್ 96 ಅಂಕಗಳೊಂದಿಗೆ ಐದನೇ ಸ್ಥಾನದಲ್ಲಿದೆ. ಶ್ರೀಲಂಕಾ 87 ಅಂಕಗಳೊಂದಿಗೆ ಆರನೇ ಸ್ಥಾನ, ಪಾಕಿಸ್ತಾನ, ವೆಸ್ಟ್ ಇಂಡೀಸ್, ಬಾಂಗ್ಲಾದೇಶ ಮತ್ತು ಐರ್ಲೆಂಡ್ ಕ್ರಮವಾಗಿ ನಂತರದ ಸ್ಥಾನದಲ್ಲಿವೆ.
ಆದರೆ WTC ಪಾಯಿಂಟ್ ಪಟ್ಟಿಯಲ್ಲಿ ದಕ್ಷಿಣ ಆಫ್ರಿಕಾ ಅಗ್ರಸ್ಥಾನದಲ್ಲಿದೆ. WTC 2023-25 ಚಕ್ರದಲ್ಲಿ 69.44 ಶೇಕಡಾ ಅಂಕಗಳನ್ನು ಹೊಂದಿದೆ.
ಇದನ್ನೂ ಓದಿ: ಶಾಕಿಂಗ್ ನ್ಯೂಸ್! ಚಾಂಪಿಯನ್ಸ್ ಟ್ರೋಫಿಗೂ ಮೊದಲೇ ದೊಡ್ಡ ಸಂಕಷ್ಟಕ್ಕೆ ಸಿಲುಕಿದ ಟೀಂ ಇಂಡಿಯಾ!