ETV Bharat / sports

ಬಾಂಗ್ಲಾದೇಶ ವಿರುದ್ಧದ 2ನೇ ಟೆಸ್ಟ್​ ಪಂದ್ಯಕ್ಕೆ ಭಾರತ ತಂಡ ಪ್ರಕಟ - India Bangladesh 2nd Test

author img

By ETV Bharat Sports Team

Published : 2 hours ago

ಬಾಂಗ್ಲಾದೇಶ ವಿರುದ್ಧ ಸೆಪ್ಟಂಬರ್​ 29ರಿಂದ ಕಾನ್ಪುರದಲ್ಲಿ ಆರಂಭವಾಗಲಿರುವ ಎರಡನೇ ಟೆಸ್ಟ್​ ಪಂದ್ಯಕ್ಕೆ ಟೀಂ ಇಂಡಿಯಾವನ್ನು ಪ್ರಕಟಿಸಲಾಗಿದೆ.

ಭಾರತ ಕ್ರಿಕೆಟ್​ ತಂಡ
ಭಾರತ ಕ್ರಿಕೆಟ್​ ತಂಡ (IANS)

ನವದೆಹಲಿ: ಭಾರತ ಮತ್ತು ಬಾಂಗ್ಲಾದೇಶ ನಡುವಿನ ಟೆಸ್ಟ್​ ಸರಣಿಯ ಎರಡನೇ ಮತ್ತು ಕೊನೆಯ ಪಂದ್ಯ ಸೆಪ್ಟೆಂಬರ್​ 27ರಿಂದ ಉತ್ತರ ಪ್ರದೇಶದ ಕಾನ್ಪುರದ ಗ್ರೀನ್ ಪಾರ್ಕ್​ನಲ್ಲಿ ಆರಂಭಗೊಳ್ಳಲಿದೆ. ಚೆನ್ನೈನಲ್ಲಿ ನಡೆದ ಮೊದಲ ಟೆಸ್ಟ್​ ಪಂದ್ಯವನ್ನು 280 ರನ್​ಗಳಿಂದ ಗೆದ್ದಿರುವ ಟೀಂ ಇಂಡಿಯಾ ಇದೀಗ ಕಾನ್ಪುರ ಟೆಸ್ಟ್‌ನಲ್ಲೂ ಜಯಭೇರಿ ಬಾರಿಸಿ ಕ್ಲೀನ್‌​ ಸ್ವೀಪ್​ ಯೋಜನೆ ರೂಪಿಸಿದೆ. ಏತನ್ಮಧ್ಯೆ, 2ನೇ ಟೆಸ್ಟ್‌ಗಾಗಿ ಬಿಸಿಸಿಐ ಇಂದು ತಂಡವನ್ನು ಪ್ರಕಟಿಸಿತು.

ಬಾಂಗ್ಲಾ ವಿರುದ್ಧದ ಮೊದಲ ಟೆಸ್ಟ್‌ನಲ್ಲಿ ಭಾರತಕ್ಕೆ ಭರ್ಜರಿ ಗೆಲುವು ತಂದುಕೊಟ್ಟಿರುವ ಅದೇ ತಂಡ ಎರಡನೇ ಟೆಸ್ಟ್​ನಲ್ಲೂ ಮುಂದುವರೆಯಲಿದೆ. ಇದರೊಂದಿಗೆ 16 ಸದಸ್ಯರ ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಭ್‌ಮನ್ ಗಿಲ್, ವಿರಾಟ್ ಕೊಹ್ಲಿ, ಕೆ.ಎಲ್.ರಾಹುಲ್, ಸರ್ಫರಾಜ್ ಖಾನ್, ರಿಷಬ್ ಪಂತ್ (ವಿಕೆಟ್​ ಕೀಪರ್​), ಧ್ರುವ್ ಜುರೆಲ್ (ವಿ.ಕೀ​), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್, ಜಸ್ಪ್ರೀತ್ ಬುಮ್ರಾ ಮತ್ತು ಯಶ್ ದಯಾಳ್.

ತವರಿನಲ್ಲಿ ಭಾರತದ ದಾಖಲೆ: 2012ರಿಂದಲೂ ಟೀಂ ಇಂಡಿಯಾ ತವರಿನಲ್ಲಿ ಉತ್ತಮ ಪ್ರದರ್ಶನ ತೋರುತ್ತಿದೆ. ಅಂದಿನಿಂದ ಇದುವರೆಗೂ ಒಂದೇ ಒಂದು ಟೆಸ್ಟ್ ಸರಣಿಯನ್ನೂ ಕಳೆದುಕೊಂಡಿಲ್ಲ. 2012ರಿಂದ ದೇಶದಲ್ಲಿ ನಡೆದ 17 ಟೆಸ್ಟ್ ಸರಣಿಗಳಲ್ಲಿ ಭಾರತ ಅಜೇಯ ಗೆಲುವಿನ ಓಟ ಮುಂದುವರೆಸಿದೆ.

ಇದನ್ನೂ ಓದಿ: 280 ರನ್‌ಗಳಿಂದ ಬಾಂಗ್ಲಾ ಬಗ್ಗುಬಡಿದು ಮೊದಲ ಟೆಸ್ಟ್‌ ಗೆದ್ದ ಭಾರತ: ಅಶ್ವಿನ್‌ ಪಂದ್ಯಶ್ರೇಷ್ಠ ಪ್ರದರ್ಶನ - India vs Bangladesh 1st Test

ETV Bharat Logo

Copyright © 2024 Ushodaya Enterprises Pvt. Ltd., All Rights Reserved.