IND vs BAN: ಇಂದಿನಿಂದ ಭಾರತ ಐಸಿಸಿ ಚಾಂಪಿಯನ್ಸ್ ಟ್ರೋಫಿ ಅಭಿಯಾನವನ್ನು ಪ್ರಾರಂಭಿಸಲಿದೆ. ಕಳೆದ ಆವೃತ್ತಿಯಲ್ಲಿ ರನ್ನರ್ ಅಪ್ ಆಗಿದ್ದ ಭಾರತ ತನ್ನ ಮೊದಲ ಪಂದ್ಯದಲ್ಲಿ ಬಾಂಗ್ಲಾದೇಶವನ್ನು ಎದುರಿಸಲಿದೆ. ಉಭಯ ತಂಡಗಳ ನಡುವಿನ ಈ ಪಂದ್ಯ ದುಬೈನ ಅಂತರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ.
ಟೀಂ ಇಂಡಿಯಾವನ್ನು ರೋಹಿತ್ ಶರ್ಮಾ ಮುನ್ನಡೆಸಿದರೆ, ಬಾಂಗ್ಲಾವನ್ನು ನಜ್ಮುಲ್ ಹೊಸೈನ್ ಶಾಂಟೋ ಮುನ್ನಡೆಸುತ್ತಿದ್ದಾರೆ. ಚಾಂಪಿಯನ್ಸ್ ಟ್ರೋಫಿಯಲ್ಲಿ ಎರಡನೇ ಬಾರಿಗೆ ಈ ತಂಡಗಳು ಮುಖಾಮುಖಿ ಆಗುತ್ತಿವೆ.
ಭಾರತಕ್ಕೆ ಗೆಲುವ: ಈ ಹಿಂದೆ 2017ರಲ್ಲಿ ಭಾರತ ಮತ್ತು ಬಾಂಗ್ಲಾ ನಡುವೆ ಪಂದ್ಯ ನಡೆದಿತ್ತು. ಇದರಲ್ಲಿ ಟೀಂ ಇಂಡಿಯಾ ಭರ್ಜರಿ ಗೆಲುವು ಸಾಧಿಸಿತ್ತು. ಇದೀಗ ಈ ಪಂದ್ಯದಲ್ಲೂ ಗೆದ್ದು ಅಜೇಯವಾಗಿ ಗೆಲುವಿನ ಓಟ ಮುಂದುವರೆಸಲು ಭಾರತ ಸಜ್ಜಾಗಿದೆ.
𝙍𝙀𝘼𝘿𝙔 💪
— BCCI (@BCCI) February 19, 2025
Just one day away from #TeamIndia's opening fixture of #ChampionsTrophy 2025 ⏳ pic.twitter.com/Ri3Z93T28y
ಹೆಡ್ ಟು ಹೆಡ್: ಭಾರತ ಮತ್ತು ಬಾಂಗ್ಲಾದೇಶ ನಡುವೆ ಇದುವರೆಗೆ ಒಟ್ಟು 41 ಏಕದಿನ ಪಂದ್ಯಗಳು ನಡೆದಿವೆ. ಇವುಗಳಲ್ಲಿ ಭಾರತ 32 ಪಂದ್ಯಗಳಲ್ಲಿ ಗೆದ್ದು ಪ್ರಾಬಲ್ಯ ಸಾಧಿಸಿದರೇ, ಬಾಂಗ್ಲಾ ಕೇವಲ 8 ಪಂದ್ಯಗಳಲ್ಲಿ ಮಾತ್ರ ಜಯಗಳಿಸಿದೆ. ಒಂದು ಪಂದ್ಯ ರದ್ದಾಗಿದೆ. ದುಬೈನಲ್ಲಿ ಉಭಯ ತಂಡಗಳ ನಡುವೆ ಒಟ್ಟು 12 ಪಂದ್ಯಗಳು ನಡೆದಿದ್ದು, ಅದರಲ್ಲಿ ಭಾರತ 10 ಪಂದ್ಯಗಳಲ್ಲಿ ಗೆದ್ದರೆ, ಬಾಂಗ್ಲಾ ಎರಡು ಪಂದ್ಯಗಳಲ್ಲಿ ಜಯಭೇರಿ ಬಾರಿಸಿದೆ.
These pics from today 📸
— BCCI (@BCCI) February 17, 2025
How good 🤌🏻#TeamIndia | #ChampionsTrophy pic.twitter.com/yM50ArMIj5
IND vs BAN ನೇರಪ್ರಸಾರ, ಲೈವ್ ಸ್ಟ್ರೀಮಿಂಗ್ ವಿವರ
ಭಾರತ ಮತ್ತು ಬಾಂಗ್ಲಾದೇಶ ನಡುವಿನ ಐಸಿಸಿ ಚಾಂಪಿಯನ್ಸ್ ಟ್ರೋಫಿ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್ ಚಾನೆಲ್ ಮತ್ತು ಡಿಡಿ ಚಾನೆಲ್ನಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ. ಇದಲ್ಲದೆ, ಜಿಯೋಹಾಟ್‌ಸ್ಟಾರ್ ವೆಬ್‌ಸೈಟ್ ಮತ್ತು ಮೊಬೈಲ್ ಅಪ್ಲಿಕೇಶನ್‌ನಲ್ಲಿ ಪಂದ್ಯದ ಲೈವ್ ಸ್ಟ್ರೀಮಿಂಗ್ ಉಚಿತವಾಗಿ ವೀಕ್ಷಿಸಬಹುದು.
ಪಂದ್ಯ ಪ್ರಾರಂಭ: ಮಧ್ಯಾಹ್ನ 2.30ಕ್ಕೆ
ಸಂಭಾವ್ಯ ತಂಡ- ಭಾರತ: ರೋಹಿತ್ ಶರ್ಮಾ (ನಾಯಕ),ಶ್ರೇಯಸ್ ಅಯ್ಯರ್, ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಕೆ.ಎಲ್.ರಾಹುಲ್/ರಿಷಭ್ ಪಂತ್, ಅಕ್ಷರ್ ಪಟೇಲ್, ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ಅರ್ಷ್‌ದೀಪ್ ಸಿಂಗ್, ಹರ್ಷಿತ್ ರಾಣಾ, ಕುಲದೀಪ್ ಯಾದವ್, ಮೊಹಮ್ಮದ್ ಶಮಿ.
ಬಾಂಗ್ಲಾದೇಶ: ಸೌಮ್ಯ ಸರ್ಕಾರ್, ತಂಜಿದ್ ಹಸನ್, ನಜ್ಮುಲ್ ಹೊಸೈನ್ ಶಾಂತೊ (ನಾಯಕ), ಜಾಕಿರ್ ಅಲಿ (ವಿಕೆಟ್ ಕೀಪರ್), ಮುಷ್ಫಿಕರ್ ರಹೀಮ್, ಮಹ್ಮದುಲ್ಲಾ, ಮೆಹದಿ ಹಸನ್ ಮಿರಾಜ್, ತಸ್ಕಿನ್ ಅಹ್ಮದ್, ತಂಜಿಮ್ ಹಸನ್ ಸಾಕಿಬ್, ನಹಿದ್ ರಾಣಾ, ಮುಸ್ತಾಫಿಜುರ್ ರೆಹಮಾನ್, ತೌಹೀದ್ ಹೃದಯ್, ರಿಷದ್ ಹೊಸೈನ್, ಪರ್ವೇಜ್ ಹೊಸೈನ್ ಎಮನ್, ನಸುಮ್ ಅಹ್ಮದ್.
ಇದನ್ನೂ ಓದಿ: ಭಾರತ-ಬಾಂಗ್ಲಾ ಕದನ: ಕನ್ನಡಿಗನಿಗೆ ತಂಡದಲ್ಲಿ ಮಹತ್ವದ ಜವಾಬ್ದಾರಿ!