Ind vs Ban: ಭಾರತ ಮತ್ತು ಬಾಂಗ್ಲಾದೇಶ ನಡುವಿನ ಚಾಂಪಿಯನ್ಸ್ ಟ್ರೋಫಿಯ ಎರಡನೇ ಪಂದ್ಯ ಇಂದು ನಡೆಯಲಿದೆ. ಈ ಪಂದ್ಯಕ್ಕೆ ದುಬೈನ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ಆತಿಥ್ಯ ವಹಿಸಿಕೊಳ್ಳುತ್ತಿದೆ.
ಭಾರತ ತಂಡವನ್ನು ರೋಹಿತ್ ಶರ್ಮಾ ಮುನ್ನಡೆಸಲಿದ್ದು, ಬಾಂಗ್ಲಾ ತಂಡದ ನಾಯಕತ್ವದ ಜವಾಬ್ದಾರಿ ನಜ್ಮುಲ್ ಹಸನ್ ಶಾಂಟೋಗೆ ನೀಡಲಾಗಿದೆ. ಉಭಯ ತಂಡಗಳಿಗೆ ಚಾಂಪಿಯನ್ಸ್ ಟ್ರೋಫಿ 2025ರ ಮೊದಲ ಪಂದ್ಯ ಇದಾಗಿದೆ. ಈ ಟೂರ್ನಿಯಲ್ಲಿ ಎಲ್ಲ ತಂಡಗಳು ತಲಾ ಮೂರು ಪಂದ್ಯಗಳನ್ನು ಮಾತ್ರ ಆಡುತ್ತಿದ್ದು ಈ ಹಿನ್ನೆಲೆ ಪ್ರತಿಯೊಂದು ಪಂದ್ಯವೂ ಮಹತ್ವದಾಗಿದೆ.
ಭಾರತ ಮತ್ತು ಬಾಂಗ್ಲಾ ತಂಡಗಳು ಕೂಡ ಈ ಪಂದ್ಯದಲ್ಲಿ ಗೆದ್ದು ಉತ್ತಮ ಆರಂಭದ ಗುರಿಯನ್ನು ಹೊಂದಿವೆ. ಏತನ್ಮಧ್ಯೆ ಬಾಂಗ್ಲಾ ವಿರುದ್ಧದ ಈ ಪಂದ್ಯದಕ್ಕೆ ಭಾರತ ಬಲಿಷ್ಠ ತಂಡದೊಂದಿಗೆ ಕಣಕ್ಕಿಳಿಯುತ್ತಿದೆ. ಹಾಗಾದರೆ ಭಾರತದ ಸಂಭಾವ್ಯ ಪ್ಲೇಯಿಂಗ್-11 ಹೇಗಿರಲಿದೆ ಎಂದು ಇದೀಗ ತಿಳಿಯೋಣ.
𝙍𝙀𝘼𝘿𝙔 💪
— BCCI (@BCCI) February 19, 2025
Just one day away from #TeamIndia's opening fixture of #ChampionsTrophy 2025 ⏳ pic.twitter.com/Ri3Z93T28y
ಟಾಪ್ ಆರ್ಡರ್: ಭಾರತೀಯ ಕ್ರಿಕೆಟ್ ತಂಡದ ಟಾಪ್ ಆರ್ಡರ್ ಸಂಪೂರ್ಣವಾಗಿ ಸಿದ್ಧವಾಗಿದೆ. ನಾಯಕ ರೋಹಿತ್ ಶರ್ಮಾ ಮತ್ತು ಉಪನಾಯಕ ಶುಭಮನ್ ಗಿಲ್ ಆರಂಭಿಕರಾಗಿ ಇನ್ನಿಂಗ್ಸ್ ಪ್ರಾರಂಭಿಸಲಿದ್ದಾರೆ. ಈ ಇಬ್ಬರ ನಂತರ, ಭಾರತದ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಮೂರನೇ ಸ್ಥಾನದಲ್ಲಿ ಕಣಕ್ಕಿಳಿಯಲಿದ್ದಾರೆ.
ಮಧ್ಯಮ ಕ್ರಮಾಂಕ: ಮಧ್ಯಮ ಕ್ರಮಾಂಕದ ಜವಾಬ್ದಾರಿ ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ ಮತ್ತು ಅಕ್ಷರ್ ಪಟೇಲ್ ಅವರ ಕೈಯಲ್ಲಿರುತ್ತದೆ. ಅಯ್ಯರ್ 4 ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲಿದ್ದಾರೆ ಮತ್ತು ಅಕ್ಷರ್ 5ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುವ ಸಾಧ್ಯತೆ ಇದೆ. 6ನೇ ಕ್ರಮಾಂಕದಲ್ಲಿ ಕೆಎಲ್ ರಾಹುಲ್ ಕಾಣಿಸಿಕೊಳ್ಳಲಿದ್ದಾರೆ.
ಫಿನಿಶರ್ ಜವಾಬ್ದಾರಿ: ಇಬ್ಬರು ಆಲ್‌ರೌಂಡರ್‌ಗಳಾದ ಹಾರ್ದಿಕ್ ಪಾಂಡ್ಯ ಮತ್ತು ಅನುಭವಿ ಸ್ಪಿನ್ನರ್ ರವೀಂದ್ರ ಜಡೇಜಾ ಫಿನಿಶರ್ ಪಾತ್ರ ವಹಿಸಲಿದ್ದಾರೆ. ಈ ಇಬ್ಬರೂ ಭಾರತ ಪರ 7 ಮತ್ತು 8ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಬರಲಿದ್ದಾರೆ.
These pics from today 📸
— BCCI (@BCCI) February 17, 2025
How good 🤌🏻#TeamIndia | #ChampionsTrophy pic.twitter.com/yM50ArMIj5
ಬೌಲಿಂಗ್ ಲೈನ್‌ಅಪ್: ಕುಲದೀಪ್ ಯಾದವ್ ತಂಡದ ಪ್ರಮುಖ ಸ್ಪಿನ್ ಬೌಲರ್ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇವರಿಗೆ ರವೀಂದ್ರ ಜಡೇಜಾ ಮತ್ತು ಅಕ್ಷರ್ ಪಟೇಲ್ ಸಾತ್ ನೀಡಲಿದ್ದಾರೆ.
ವೇಗದ ಬೌಲಿಂಗ್: ಈ ಪಂದ್ಯದಲ್ಲಿ ಇಬ್ಬರು ಪ್ರಮುಖ ವೇಗದ ಬೌಲರ್‌ಗಳೊಂದಿಗೆ ಭಾರತ ಕಣಕ್ಕಿಳಿಯಲಿದೆ. ಮೊಹಮ್ಮದ್ ಶಮಿ ಮತ್ತು ಅರ್ಷದೀಪ್ ಸಿಂಗ್ ವೇಗದ ಬೌಲಿಂಗ್ ಲೈನ್‌ಅಪ್ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ. ಇವರೊಂದಿಗೆ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಕೂಡ ಸಾತ್ ನೀಡಲಿದ್ದಾರೆ.
ಭಾರತದ ಸಂಭಾವ್ಯ ತಂಡ
- ರೋಹಿತ್ ಶರ್ಮಾ (ನಾಯಕ)
- ಶುಭಮನ್ ಗಿಲ್ (ಉಪ ನಾಯಕ)
- ವಿರಾಟ್ ಕೊಹ್ಲಿ
- ಶ್ರೇಯಸ್ ಅಯ್ಯರ್
- ಅಕ್ಷರ್ ಪಟೇಲ್
- ಕೆಎಲ್ ರಾಹುಲ್
- ಹಾರ್ದಿಕ್ ಪಾಂಡ್ಯ
- ರವೀಂದ್ರ ಜಡೇಜಾ
- ಕುಲದೀಪ್ ಯಾದವ್
- ಮೊಹಮ್ಮದ್ ಶಮಿ
- ಅರ್ಶ್ದೀಪ್ ಸಿಂಗ್
ಹೊರ ಉಳಿಯಲಿರುವ ಆಟಗಾರರು: ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ, ರಿಷಭ್ ಪಂತ್, ವಾಷಿಂಗ್ಟನ್ ಸುಂದರ್ ಈ ನಾಲ್ವರು ಆಟಗಾರರು ಹೊರಗುಳಿಯುವ ಸಾಧ್ಯತೆ ಇದೆ.
ಇದನ್ನೂ ಓದಿ: ಇಂದು IND vs BAN ಫೈಟ್: ಈ ಪಂದ್ಯ ಉಚಿತವಾಗಿ ನೋಡುವುದು ಹೇಗೆ?