India vs England 1st ODI: ಭಾರತ ಮತ್ತು ಇಂಗ್ಲೆಂಡ್ ನಡುವಿನ 3 ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯ ಇಂದು ನಡೆಯಲಿದೆ. ಉಭಯ ತಂಡಗಳು ಮುಖಾಮುಖಿಯಾಗುತ್ತಿರುವ ಈ ಪಂದ್ಯಕ್ಕೆ ನಾಗ್ಪುರ್ ಮೈದಾನ ಆತಿಥ್ಯ ವಹಿಸಿಕೊಳ್ಳಲಿದೆ.
ಈಗಾಗಲೇ 5 ಪಂದ್ಯಗಳ ಟಿ20 ಸರಣಿಯಲ್ಲಿ ಆಂಗ್ಲರನ್ನು 4-1 ಅಂತರದಿಂದ ಮಣಿಸಿ ಸರಣಿ ವಶಪಡಿಸಿಕೊಂಡಿರುವ ಭಾರತ ಇದೀಗ ಏಕದಿನ ಸರಣಿ ಮೇಲೂ ಕಣ್ಣಿಟ್ಟಿದೆ. 15 ತಿಂಗಳು ಬಳಿಕ ಇದೇ ಮೊದಲ ಬಾರಿಗೆ ಎರಡೂ ತಂಡಗಳು ಏಕದಿನ ಪಂದ್ಯ ಆಡುತ್ತಿವೆ. ಮೊದಲ ಪಂದ್ಯಕ್ಕಾಗಿ ಇಂಗ್ಲೆಂಡ್ ತಂಡ ಪ್ರಕಟವಾಗಿದೆ.
SIX-FEST Part I 🇮🇳🏆
— Star Sports (@StarSportsIndia) February 5, 2025
SIX-FEST Part II ⏳
With the T20I series conquered, it's time for #TeamIndia to shine in the #INDvENG ODI series! 💙🔥
📺 Start watching FREE on Disney+ Hotstar!#INDvENGOnJioStar 1st ODI 👉 THU, 6th FEB | 12:30 PM on Disney+ Hotstar, Star Sports 2, Star… pic.twitter.com/deSPdTitZ6
ರೂಟ್ ಕಮ್ಬ್ಯಾಕ್: 14 ತಿಂಗಳ ಬಳಿಕ ಇಂಗ್ಲೆಂಡ್ನ ಸ್ಟಾರ್ ಬ್ಯಾಟರ್ ಜೋ ರೂಟ್ ಏಕದಿನ ಪಂದ್ಯಕ್ಕೆ ಮರಳಿದ್ದಾರೆ. ಅವರು ಕೊನೆಯ ಬಾರಿಗೆ ನವೆಂಬರ್ 11, 2023 ರಂದು ಈಡನ್ ಗಾರ್ಡನ್ಸ್‌ನಲ್ಲಿ ನಡೆದಿದ್ದ ಪಾಕಿಸ್ತಾನ ವಿರುದ್ಧ ಏಕದಿನ ವಿಶ್ವಕಪ್ನಲ್ಲಿ ಆಡಿದ್ದರು. ಆ ಬಳಿಕ ರೂಟ್ ಟೆಸ್ಟ್ ಪಂದ್ಯಗಳಲ್ಲಿ ಬ್ಯುಸಿ ಆಗಿದ್ದರು.
ಶಮಿ ಕಮ್ಬ್ಯಾಕ್: ಮೊಹಮ್ಮದ್ ಶಮಿ ಕೂಡ 2023ರ ಏಕದಿನ ವಿಶ್ವಕಪ್ ಬಳಿಕ ಕ್ರಿಕೆಟ್ನಿಂದ ದೂರ ಉಳಿದಿದ್ದರು. ಸದ್ಯ, ಟಿ-20 ಸರಣಿ ಮೂಲಕ ಕಮ್ಬ್ಯಾಕ್ ಮಾಡಿರುವ ಅವರು ಇಂದು ಏಕದಿನ ಪಂದ್ಯದಲ್ಲೂ ಆಡುವ ಸಾಧ್ಯತೆ ಇದೆ.
That 𝙉𝙀𝙒 𝙏𝙃𝙍𝙀𝘼𝘿𝙎 energy! The #MenInBlue are all set to kick-start their ODI season 🤩💙
— Star Sports (@StarSportsIndia) February 6, 2025
📺 Start watching FREE on Disney+ Hotstar! #INDvENGOnJioStar 1st ODI 👉 THU, 6th FEB, 12:30 PM! pic.twitter.com/DZ2QBngEOz
ಹೆಡ್ ಟು ಹೆಡ್: ಭಾರತ ಮತ್ತು ಇಂಗ್ಲೆಂಡ್ ನಡುವೆ ಒಟ್ಟು 107 ಏಕದಿನ ಪಂದ್ಯಗಳು ನಡೆದಿವೆ. ಇವುಗಳಲ್ಲಿ ಭಾರತ 58 ಪಂದ್ಯಗಳನ್ನು ಗೆದ್ದಿದ್ದರೆ, ಇಂಗ್ಲೆಂಡ್ 44 ಬಾರಿ ಗೆಲುವು ಸಾಧಿಸಿದೆ. 3 ಪಂದ್ಯಗಳು ಡ್ರಾದಲ್ಲಿ ಕೊನೆಗೊಂಡರೆ, 2 ಪಂದ್ಯಗಳು ರದ್ದಾಗಿವೆ. ನಾಗ್ಪುರದ ವಿದರ್ಭ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ಭಾರತ ಈ ವರೆಗೆ 6 ಏಕದಿನ ಪಂದ್ಯಗಳನ್ನು ಆಡಿದ್ದು, ಅವುಗಳಲ್ಲಿ ನಾಲ್ಕರಲ್ಲಿ ಗೆದ್ದು ಎರಡರಲ್ಲಿ ಸೋತಿದೆ.
IND vs ENG ODI ನೇರಪ್ರಸಾರ ಮತ್ತು ಲೈವ್ ಸ್ಟ್ರೀಮಿಂಗ್ ವಿವರ
IND vs ENG ನಡುವಿನ ಏಕದಿನ ಸರಣಿ, ಸ್ಟಾರ್ ಸ್ಪೋರ್ಟ್ಸ್ ನೆಟ್ವರ್ಕ್ನಲ್ಲಿ ನೇರಪ್ರಸಾರ ಆಗಲಿದೆ.
ಲೈವ್ ಸ್ಟ್ರೀಮಿಂಗ್: ಡಿಸ್ನಿ ಪ್ಲಸ್ ಮತ್ತು ಹಾಟ್ಸ್ಟಾರ್
ಪಂದ್ಯ ಸಮಯ: ಮಧ್ಯಾಹ್ನ 1.30ಕ್ಕೆ.
ODI series loading ⬛ ⬛ ⬛ ⬜
— England Cricket (@englandcricket) February 5, 2025
Nagpur, Maharashtra 📌
🇮🇳 #INDvENG 🏴 pic.twitter.com/BQbNiaM1Bx
ಇಂಗ್ಲೆಂಡ್ ತಂಡ: ಬೆನ್ ಡಕೆಟ್, ಫಿಲ್ ಸಾಲ್ಟ್ (ವಿಕೆಟ್ ಕೀಪರ್), ಜೋ ರೂಟ್, ಹ್ಯಾರಿ ಬ್ರೂಕ್, ಜೋಸ್ ಬಟ್ಲರ್, ಲಿಯಾಮ್ ಲಿವಿಂಗ್‌ಸ್ಟೋನ್, ಜಾಕೋಬ್ ಬೆಥೆಲ್, ಬ್ರೈಡನ್ ಕಾರ್ಸೆ, ಆದಿಲ್ ರಶೀದ್, ಜೋಫ್ರಾ ಆರ್ಚರ್, ಸಾಕಿಬ್ ಮಹಮೂದ್.
ಭಾರತ ಸಂಭಾವ್ಯ ತಂಡ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಶ್ರೇಯಸ್ ಅಯ್ಯರ್, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ರಿಷಭ್ ಪಂತ್, ಕೆಎಲ್ ರಾಹುಲ್, ರವೀಂದ್ರ ಜಡೇಜ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಅರ್ಷದೀಪ್ ಸಿಂಗ್, ಹರ್ಷಿತ್ ರಾಣಾ, ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ವರುಣ್ ಚಕ್ರವರ್ತಿ.
ಇದನ್ನೂ ಓದಿ: RCB ಮುಂದಿನ ನಾಯಕ ಯಾರು ಗೊತ್ತಾ?: ಬಿಗ್ ಅಪ್ಡೇಟ್ ನೀಡಿದ ಫ್ರಾಂಚೈಸಿ!