ಹೈದರಾಬಾದ್: ಭಾರತ-ಇಂಗ್ಲೆಂಡ್ ತಂಡಗಳ ನಡುವಿನ ಟೆಸ್ಟ್ ಸರಣಿಯ ಮೊದಲ ಪಂದ್ಯ ಇಂದಿನಿಂದ ಹೈದರಾಬಾದ್‌ನಲ್ಲಿ ನಡೆಯುತ್ತಿದೆ. ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಲು ನಿರ್ಧರಿಸಿದ ಆಂಗ್ಲ ಪಡೆ ಇದೀಗ 5 ವಿಕೆಟ್ ಕಳೆದುಕೊಂಡು 127 ರನ್ ಗಳಿಸಿ ಆಟ ಮುಂದುವರೆಸಿದೆ. ಭಾರತ ತಂಡದ ಪ್ರಮುಖ ಸ್ಪಿನ್ನರ್‌ಗಳಾದ ಅಶ್ವಿನ್ ಮತ್ತು ಜಡೇಜಾ ಕರಾರುವಾಕ್ ದಾಳಿ ನಡೆಸಿ ಪ್ರಮುಖ ವಿಕೆಟ್ ಉರುಳಿಸಿದರು.
ಇದೀಗ ಬೆನ್ ಸ್ಟೋಕ್ಸ್ ಮತ್ತು ಬೆನ್ ಫೋಕ್ಸ್ ಗಳಿಸಿ ಆಡುತ್ತಿದ್ದಾರೆ. ಭಾರತದ ಪ್ರಮುಖ ಸ್ಪಿನ್ ಶಕ್ತಿಯಾದ ಅಶ್ವಿನ್ ಮತ್ತು ಜಡೇಜಾ ಜೋಡಿ ಜಾಕ್ ಕ್ರಾಲಿ, ಬೆನ್ ಡಕೆಟ್, ಆಲಿ ಪೋಪ್ ಮತ್ತು ಜೋ ರೂಟ್ ಅವರನ್ನು ಪೆವಿಲಿಯನ್‌ಗಟ್ಟುವಲ್ಲಿ ಯಶಸ್ವಿಯಾದರು.
ಊಟದ ವಿರಾಮದ ಬಳಿಕ ದಾಳಿಗಿಳಿದ ಅಕ್ಷರ್ ಪಟೇಲ್, ಸ್ಫೋಟಕ ಆಟಗಾರ ಜಾನಿ ಬೈರ್‌ಸ್ಟೋವ್ ಅವರ ವಿಕೆಟ್ ಕಿತ್ತರು. ಈ ಮೂಲಕ ಆಂಗ್ಲಪಡೆಯನ್ನು ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿಸಿದರು. ಇದಾದ ನಂತರ ಭಾರತಕ್ಕೆ ಅಪಾಯಕಾರಿಯಾಗಿ ಕಾಡಬಲ್ಲ ಮತ್ತೋರ್ವ ಆಟಗಾರ ಜೋ ರೂಟ್ ಅವರನ್ನು ಜಡೇಜಾ ತನ್ನ ಸ್ಪಿನ್ ಖೆಡ್ಡಾಕ್ಕೆ ಕೆಡವಿದರು.
ಇದೀಗ ಇಂಗ್ಲೆಂಡ್ 127 ರನ್‌ಗಳಿಗೆ 5 ವಿಕೆಟ್ ಕಳೆದುಕೊಂಡು ಆಟ ಮುಂದುವರೆಸಿದೆ
ತಂಡಗಳು ಇಂತಿವೆ: ಭಾರತ: ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್, ಕೆ.ಎಲ್.ರಾಹುಲ್, ಶ್ರೇಯಸ್ ಅಯ್ಯರ್, ರವೀಂದ್ರ ಜಡೇಜಾ, ಶ್ರೀಕರ್ ಭರತ್ (ವಿ.ಕೀ), ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್
ಇಂಗ್ಲೆಂಡ್: ಝಾಕ್ ಕ್ರಾಲಿ, ಬೆನ್ ಡಕೆಟ್, ಆಲಿ ಪೋಪ್, ಜೋ ರೂಟ್, ಜಾನಿ ಬೈರ್ಸ್ಟೋವ್, ಬೆನ್ ಸ್ಟೋಕ್ಸ್ (ನಾಯಕ), ಬೆನ್ ಫೋಕ್ಸ್ (ವಿ.ಕೀ), ರೆಹಾನ್ ಅಹ್ಮದ್, ಟಾಮ್ ಹಾರ್ಟ್ಲಿ, ಮಾರ್ಕ್ ವುಡ್, ಜ್ಯಾಕ್ ಲೀಚ್.
ಇದನ್ನೂ ಓದಿ: ಅನನುಭವಿ ಇಂಗ್ಲೆಂಡ್ ಬೌಲಿಂಗ್‌ನೆದುರು ಭಾರತ 4-1ರಿಂದ ಟೆಸ್ಟ್ ಸರಣಿ ಗೆಲ್ಲಲಿದೆ: ಕುಂಬ್ಳೆ