Ind vs Eng T20I: ಭಾರತ ಮತ್ತು ಇಂಗ್ಲೆಂಡ್ ನಡುವಿನ 5ನೇ ಮತ್ತು ಅಂತಿಮ ಟಿ20 ಪಂದ್ಯ ಭಾನುವಾರ ನಡೆಯಲಿದೆ. ಈಗಾಗಲೇ ನಾಲ್ಕು ಪಂದ್ಯಗಳು ಮುಗಿದಿದ್ದು 3-1 ಅಂತರದಿಂದ ಭಾರತ ಸರಣಿ ಕೈವಶ ಪಡಿಸಿಕೊಂಡಿದೆ.
ನಾಳೆ ಅಂತಿಮ ಪಂದ್ಯ ನಡೆಯಲಿದ್ದು ಇದಕ್ಕೆ ಮಂಬೈನ ವಾಂಖೆಡೆ ಮೈದಾನ ಆತಿಥ್ಯ ವಹಿಸಿಕೊಂಡಿದೆ. ಶುಕ್ರವಾರ ಪುಣೆಯಲ್ಲಿ ನಡೆದಿದ್ದ 4ನೇ ಪಂದ್ಯದಲ್ಲಿ ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡರಲ್ಲೂ ಉತ್ತಮ ಪ್ರದರ್ಶನ ನೀಡಿದ್ದ ಭಾರತ ತಂಡ ಆಂಗ್ಲರ ವಿರುದ್ಧ 15 ರನ್ಗಳ ರೋಚಕ ಗೆಲುವು ಸಾಧಿಸಿತು. ಇದೀಗ ಅಂತಿಮ ಪಂದ್ಯದ ಮೇಲೆ ಕಣ್ಣಿಟ್ಟಿರುವ ಸೂರ್ಯಪಡೆ ಈ ಪಂದ್ಯವನ್ನು ಗೆದ್ದು 13 ವರ್ಷದ ಹಳೆ ಸೇಡು ತೀರಿಸಿಕೊಳ್ಳಲು ಮಾಸ್ಟರ್ ಪ್ಲಾನ್ ಮಾಡಿಕೊಂಡಿದೆ.
ಹೆಡ್ ಟು ಹೆಡ್: ಭಾರತ ಮತ್ತು ಇಂಗ್ಲೆಂಡ್ ಈ ವರೆಗೆ 28 ಟಿ20 ಪಂದ್ಯಗಳನ್ನು ಆಡಿವೆ. ಇದರಲ್ಲಿ ಭಾರತ ಹೆಚ್ಚು ಬಾರಿ ಗೆಲುವು ಸಾಧಿಸಿದೆ. ಒಟ್ಟು 16 ಬಾರಿ ಗೆದ್ದು ಗೆದ್ದಿರುವ ಭಾರತ ಪ್ರಾಬಲ್ಯ ಸಾಧಿಸಿದೆ. ಇಂಗ್ಲೆಂಡ್ 12 ಬಾರಿ ಮಾತ್ರ ಗೆಲುವು ಸಾಧಿಸಿದೆ.
ಹಳೆ ಸೇಡು ತೀರಿಸಿಕೊಳ್ಳಲು ಭಾರತ ಪ್ಲಾನ್: ಮುಂಬೈನ ವಾಂಖೆಡೆ ಮೈದಾನದಲ್ಲಿ ಭಾರತ ಮತ್ತು ಇಂಗ್ಲೆಂಡ್ ತಂಡಗಳು 13 ವರ್ಷಗಳ ಬಳಿಕ ಮುಖಾಮುಖಿಯಾಗುತ್ತಿವೆ. ಈ ಹಿಂದೆ 2012ರಲ್ಲಿ ನಡೆದಿದ್ದ ಪಂದ್ಯದಲ್ಲಿ ಇಂಗ್ಲೆಂಡ್ 6 ವಿಕೆಟ್ಗಳಿಂದ ಪಂದ್ಯವನ್ನು ಗೆದ್ದುಕೊಂಡಿತ್ತು. ಇದೀಗ ಭಾರತ ಹಳೆಯ ಸೇಡು ತೀರಿಸಿಕೊಳ್ಳಲು ಪ್ಲಾನ್ ಮಾಡಿಕೊಂಡಿದೆ. ಇದಕ್ಕಾಗಿ ಭಾರತೀಯ ಆಟಗಾರರು ಕಠಿಣ ಅಭ್ಯಾಸವನ್ನು ನಡೆಸುತ್ತಿದ್ದಾರೆ.
ಸಂಭಾವ್ಯ ತಂಡಗಳು-ಭಾರತ: ಸೂರ್ಯಕುಮಾರ್ ಯಾದವ್ (ನಾಯಕ), ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್ (ವಿಕೇಟ್ ಕೀಪರ್), ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ರಿಂಕು ಸಿಂಗ್, ಹರ್ಷಿತ್ ರಾಣಾ, ಧ್ರುವ್ ಜುರೆಲ್, ಮೊಹಮ್ಮದ್ ಶಮಿ, ಅಕ್ಷರ್ ಪಟೇಲ್, ರವಿ ಬಿಷ್ಣೋಯ್, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ವಾಷಿಂಗ್ಟನ್ ಸುಂದರ್.
ಇಂಗ್ಲೆಂಡ್: ಫಿಲಿಪ್ ಸಾಲ್ಟ್, ಹ್ಯಾರಿ ಬ್ರೂಕ್, ಬೆನ್ ಡಕೆಟ್, ಜೋಸ್ ಬಟ್ಲರ್ (ನಾಯಕ), ಜಾಕೋಬ್ ಬೆಥೆಲ್, ಜೇಮೀ ಸ್ಮಿತ್, ಬ್ರೈಡನ್ ಕಾರ್ಸ್, ಆದಿಲ್ ರಶೀದ್, ಜೇಮೀ ಓವರ್ಟನ್, ಸಾಕಿಬ್ ಮಹಮೂದ್, ಲಿಯಾಮ್ ಲಿವಿಂಗ್‌ಸ್ಟೋನ್, ರೆಹಾನ್ ಅಹ್ಮದ್, ಮಾರ್ಕ್ ವುಡ್, ಜೋಫ್ರಾ ಆರ್ಚರ್, ಗಸ್ ಅಟ್ಕಿನ್ಸನ್.
ಇದನ್ನೂ ಓದಿ: 'ಕನ್ಕ್ಯುಶನ್ ಸಬ್' ಆಗಿ ಬೌಲ್ ಮಾಡಿದ ಹರ್ಷಿತ್ ರಾಣಾ: ಕನ್ಕ್ಯುಶನ್ ಸಬ್ ಎಂದರೇನು? ಇದು ಯಾವಗ ಅನ್ವಹಿಸುತ್ತದೆ?