ವಿಶಾಖಪಟ್ಟಣಂ(ಅಂಧ್ರ ಪ್ರದೇಶ): ಭಾರತ ಮತ್ತು ಇಂಗ್ಲೆಂಡ್ ನಡುವಿನ ಎರಡನೇ ಕ್ರಿಕೆಟ್ ಟೆಸ್ಟ್ ಪಂದ್ಯ ಆರಂಭವಾಗಿದೆ. ವಿಶಾಖಪಟ್ಟಣಂನ ಡಾ.ವೈ.ಎಸ್.ರಾಜಶೇಖರ ರೆಡ್ಡಿ ಎಸಿಎ-ವಿಡಿಸಿಎ ಕ್ರಿಕೆಟ್ ಸ್ಟೇಡಿಯಂನಲ್ಲಿ ಪಂದ್ಯ ನಡೆಯುತ್ತಿದೆ. ಟಾಸ್ ಗೆದ್ದ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದು, ಇಂಗ್ಲೆಂಡ್ ತಂಡವನ್ನು ಬೌಲಿಂಗ್ಗೆ ಆಹ್ವಾನಿಸಿದ್ದಾರೆ.
ಹೈದರಾಬಾದ್ನಲ್ಲಿ ನಡೆದ ಮೊದಲ ಟೆಸ್ಟ್ನಲ್ಲಿ ಗೆಲ್ಲುವ ಸನಿಹ ಬಂದು ಪಂದ್ಯ ಕೈ ಚೆಲ್ಲಿರುವ ಟೀಮ್ ಇಂಡಿಯಾ, ಎರಡನೇ ಟೆಸ್ಟ್ ಗೆಲುವಿನ ಮೇಲೆ ಕಣ್ಣಿಟ್ಟಿದೆ. ಆಂಗ್ಲರು ಮೊದಲ ಟೆಸ್ಟ್ ಗೆದ್ದಿರುವ ಉತ್ಸಾಹದಲ್ಲಿ ಕಣಕ್ಕಿಳಿದಿದ್ದಾರೆ. ಎರಡನೇ ಟೆಸ್ಟ್ ಗೆದ್ದು ಸರಣಿ ಸಮಬಲ ಸಾಧಿಸುವ ಲೆಕ್ಕಾಚಾರದಲ್ಲಿ ನಾಯಕತ್ವದ ಜವಾಬ್ದಾರಿಯನ್ನು ರೋಹಿತ್ ಶರ್ಮಾ ಹೊತ್ತುಕೊಂಡಿದ್ದಾರೆ.
ಎರಡನೇ ಟೆಸ್ಟ್ನಲ್ಲಿ ಇಂಗ್ಲೆಂಡ್ ಸ್ಪಿನ್ನರ್ ಶೋಯೆಬ್ ಬಶೀರ್ ಮತ್ತು ವೇಗದ ಬೌಲರ್ ಜೇಮ್ಸ್ ಆ್ಯಂಡರ್ಸನ್ ಅವರನ್ನು ತಂಡ ಕರೆತಂದಿದೆ. ಇತ್ತ ಟೀಮ್ ಇಂಡಿಯಾ ಪರ ಯುವ ಆಟಗಾರ ರಜತ್ ಪಾಟಿದಾರ್ ಪಾದಾರ್ಪಣೆ ಪಂದ್ಯವಾಡುತ್ತಿದ್ದಾರೆ. ಭಾರತಕ್ಕೆ ಇಬ್ಬರು ಅನುಭವಿ ಆಟಗಾರರ ಅನುಪಸ್ಥಿತಿ ಕಾಡುತ್ತಿದೆ. ಆಲ್‌ರೌಂಡರ್ ರವೀಂದ್ರ ಜಡೇಜಾ ಮತ್ತು ಬ್ಯಾಟರ್ ಕೆ.ಎಲ್.ರಾಹುಲ್ ಗಾಯಕ್ಕೆ ತುತ್ತಾಗಿ ದೂರ ಉಳಿದಿದ್ದಾರೆ.
ತಂಡಗಳು ಹೀಗಿವೆ- ಭಾರತ: ಯಶಸ್ವಿ ಜೈಸ್ವಾಲ್, ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ರಜತ್ ಪಾಟಿದಾರ್, ಶ್ರೇಯಸ್ ಅಯ್ಯರ್, ಶ್ರೀಕರ್ ಭರತ್ (ವಿ.ಕೀ), ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ಜಸ್ಪ್ರೀತ್ ಬುಮ್ರಾ, ಮುಕೇಶ್ ಕುಮಾರ್, ಕುಲದೀಪ್ ಯಾದವ್
ಇಂಗ್ಲೆಂಡ್: ಝಾಕ್ ಕ್ರಾಲಿ, ಬೆನ್ ಡಕೆಟ್, ಓಲ್ಲಿ ಪೋಪ್, ಜೋ ರೂಟ್, ಜಾನಿ ಬೈರ್‌ಸ್ಟೋವ್, ಬೆನ್ ಸ್ಟೋಕ್ಸ್ (ನಾಯಕ), ಬೆನ್ ಫೋಕ್ಸ್ (ವಿ.ಕೀ), ರೆಹಾನ್ ಅಹ್ಮದ್, ಟಾಮ್ ಹಾರ್ಟ್ಲೆ, ಶೋಯೆಬ್ ಬಶೀರ್, ಜೇಮ್ಸ್ ಆ್ಯಂಡರ್ಸನ್
ಇದನ್ನೂ ಓದಿ: ಟೀಂ ಇಂಡಿಯಾ ಬ್ಯಾಟರ್ಗಳು ಉತ್ತಮ ಸ್ವೀಪ್ ಶಾಟ್ಗಳನ್ನು ಆಡಬಲ್ಲರು: ಶ್ರೀಕರ್ ಭರತ್