ETV Bharat / sports

ಟೆಸ್ಟ್​ ಕ್ರಿಕೆಟ್​ನಲ್ಲಿ 9,000 ರನ್ ಪೂರ್ಣಗೊಳಿಸಿದ ಕೊಹ್ಲಿ; ಈ ಸಾಧನೆ ಮಾಡಿದ 4ನೇ ಭಾರತೀಯ ಬ್ಯಾಟರ್ - VIRAT KOHLI

ನ್ಯೂಜಿಲೆಂಡ್​ ವಿರುದ್ಧ ನಡೆಯುತ್ತಿರುವ ಟೆಸ್ಟ್​ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಹೊಸ ದಾಖಲೆ ಬರೆದರು.

ವಿರಾಟ್​ ಕೊಹ್ಲಿ
ವಿರಾಟ್​ ಕೊಹ್ಲಿ (AFP)
author img

By ETV Bharat Sports Team

Published : Oct 18, 2024, 5:40 PM IST

ಹೈದರಾಬಾದ್​: ನ್ಯೂಜಿಲೆಂಡ್​ ವಿರುದ್ಧ ಬೆಂಗಳೂರಿನಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್​ ಪಂದ್ಯದ ಎರಡನೇ ಇನ್ನಿಂಗ್ಸ್‌ನಲ್ಲಿ ಟೀಂ ಇಂಡಿಯಾ ಬ್ಯಾಟರ್​ ವಿರಾಟ್​ ಕೊಹ್ಲಿ ಮತ್ತೊಂದು ದಾಖಲೆ ಬರೆದಿದ್ದಾರೆ.

ಮೊದಲ ಇನ್ನಿಂಗ್ಸ್​ನಲ್ಲಿ ಶೂನ್ಯಕ್ಕೆ ಪೆವಿಲಿಯನ್​ ಸೇರಿದ್ದ ಕೊಹ್ಲಿ, ಎರಡನೇ ಇನ್ನಿಂಗ್ಸ್​ನಲ್ಲಿ ಕಮ್​ಬ್ಯಾಕ್​ ಮಾಡಿ ಅರ್ಧಶತಕ ಸಿಡಿಸಿದರು. ಜೊತೆಗೆ, 53 ರನ್​ಗಳಿಸುತ್ತಿದ್ದಂತೆ ಟೆಸ್ಟ್​ ಕ್ರಿಕೆಟ್​ನಲ್ಲಿ 9,000 ರನ್​ಪೂರ್ಣಗೊಳಿಸಿದ್ದಾರೆ. ಇದರೊಂದಿಗೆ ಈ ಸಾಧನೆ ಮಾಡಿದ ಭಾರತದ ನಾಲ್ಕನೇ ಬ್ಯಾಟರ್​ ಎನಿಸಿಕೊಂಡರು.

ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಭಾರತೀಯ ಆಟಗಾರರಾದ ಸಚಿನ್ ತೆಂಡೂಲ್ಕರ್, ರಾಹುಲ್ ದ್ರಾವಿಡ್ ಮತ್ತು ಸುನಿಲ್ ಗವಾಸ್ಕರ್ ನಂತರ ಕೊಹ್ಲಿ ಈ ಪಟ್ಟಿಯಲ್ಲಿ ಸ್ಥಾನ ಪಡೆದರು. ತೆಂಡೂಲ್ಕರ್ 15,921 ಟೆಸ್ಟ್ ರನ್‌ಗಳೊಂದಿಗೆ ಅಗ್ರಸ್ಥಾನದಲ್ಲಿದ್ದರೆ, ದ್ರಾವಿಡ್ 13,265 ಮತ್ತು ಗವಾಸ್ಕರ್ 10,122 ರನ್‌ಗಳೊಂದಿಗೆ ನಂತರದ ಸ್ಥಾನದಲ್ಲಿದ್ದಾರೆ. ಇದೀಗ ಕೊಹ್ಲಿ 9,000 ರನ್​ಗಳೊಂದಿಗೆ ನಾಲ್ಕನೇ ಭಾರತೀಯ ಆಗಿದ್ದು ಒಟ್ಟಾರೆ 18ನೇ ಆಟಗಾರ ಎನಿಸಿಕೊಂಡಿದ್ದಾರೆ.

ಧೋನಿ ಹಿಂದಿಕ್ಕಿದ ಕೊಹ್ಲಿ: ಇದೇ ಟೆಸ್ಟ್​ನಲ್ಲಿ ಕೊಹ್ಲಿ ಮತ್ತೊಂದು ದಾಖಲೆ ಬರೆದಿದ್ದಾರೆ. ಭಾರತದ ಪರ ಅತಿ ಹೆಚ್ಚು ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡಿದ ಭಾರತೀಯ ಎರಡನೇ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಕೊಹ್ಲಿ ತಮ್ಮ ವೃತ್ತಿಜೀವನದಲ್ಲಿ ಇದುವರೆಗೆ 536 ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದಾರೆ. ಈ ಪಟ್ಟಿಯಲ್ಲಿ ಸಚಿನ್ ತೆಂಡೂಲ್ಕರ್ ಅಗ್ರಸ್ಥಾನದಲ್ಲಿದ್ದು ಅವರು ಒಟ್ಟು 664 ಪಂದ್ಯಗಳನ್ನು ಆಡಿದ್ದಾರೆ. ಧೋನಿ 535 ಪಂದ್ಯಗಳೊಂದಿಗೆ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೆ ತಲುಪಿದ್ದಾರೆ.

ಇದನ್ನೂ ಓದಿ: ಮುಂಬೈ ತೊರೆದು ಆರ್​ಸಿಬಿ ಸೇರ್ತಾರಾ ಸ್ಪೋಟಕ ಬ್ಯಾಟರ್​?: ಇವರು ಬಂದ್ರೆ 'ಈ ಸಲ್​​ ಕಪ್​ ನಮ್ದೆ'!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.