ETV Bharat / sports

ಆಸ್ಟ್ರೇಲಿಯಾದಲ್ಲಿ ಟೀಂ ಇಂಡಿಯಾ ಕಳಪೆ ಪ್ರದರ್ಶನ:ಅಪಾಯದಲ್ಲಿದೆಯಾ ಗೌತಮ್ ಗಂಭೀರ ಸ್ಥಾನ? - INDIA HEAD COACH GAUTAM GAMBHIR

ಫೆಬ್ರವರಿ - ಮಾರ್ಚ್ ನಲ್ಲಿ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತದ ಪ್ರದರ್ಶನ ಉತ್ತಮವಾಗಿರದಿದ್ದರೆ, ಟೀಂ ಇಂಡಿಯಾದಲ್ಲಿ ಕೆಲವು ದೊಡ್ಡ ಬದಲಾವಣೆಗಳು ಕಾಣಲಿವೆ ಎಂದು ತಿಳಿದು ಬಂದಿದೆ.

India Head Coach Gautam Gambhir
ಆಸ್ಟ್ರೇಲಿಯಾದಲ್ಲಿ ಟೀಂ ಇಂಡಿಯಾ ಕಳಪೆ ಪ್ರದರ್ಶನ: ಅಪಾಯದಲ್ಲಿದೆಯಾ ಗೌತಮ್ ಗಂಭೀರ ಸ್ಥಾನ? (AFP)
author img

By ETV Bharat Karnataka Team

Published : Jan 1, 2025, 9:17 PM IST

ನವದೆಹಲಿ: ಭಾರತದ ಬ್ಯಾಟಿಂಗ್ ದಿಗ್ಗಜರಾದ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಇದೀಗ ನಿವೃತ್ತಿ ಅಂಚಿನಲ್ಲಿದ್ದಾರೆ. ಈ ಇಬ್ಬರು ದಿಗ್ಗಜರ ನಿವೃತ್ತಿಯ ಊಹಾಪೋಹಗಳ ಮಧ್ಯೆ ಭಾರತೀಯ ಕ್ರಿಕೆಟ್ ತಂಡವು ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್​​ ಸರಣಿಯಲ್ಲಿ ನಿರೀಕ್ಷಿತ ಪ್ರದರ್ಶನ ತೋರುವಲ್ಲಿ ವಿಫಲವಾಗಿದೆ. ಟೀಂ ಇಂಡಿಯಾದ ಕಳಪೆ ಪ್ರದರ್ಶನ ಹೀಗೆ ಮುಂದುವರೆದರೆ, ಭಾರತದ ಮುಖ್ಯ ಕೋಚ್ ಗೌತಮ್ ಗಂಭೀರ್ ಅವರ ಸ್ಥಾನವು ಅಪಾಯಕ್ಕೆ ಸಿಲುಕಬಹುದು ಎಂದು ಬಿಸಿಸಿಐನ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ ಎಂದು ವರದಿಯಾಗಿದೆ.

ತಂಡದಲ್ಲಿರುವ ಹೆಚ್ಚಿನ ಆಟಗಾರರೊಂದಿಗೆ ಗಂಭೀರ್ ಸಂವಹನ ಸಾಧಿಸುವಲ್ಲಿ ವಿಫಲವಾಗಿದ್ದಾರೆ ಎಂದು ಹೇಳಲಾಗುತ್ತಿದೆ. ರವಿಶಾಸ್ತ್ರಿ ಮತ್ತು ರಾಹುಲ್ ದ್ರಾವಿಡ್ ಅವರ ಕಾಲದಲ್ಲಿ ಆಟಗಾರರೊಂದಿಗೆ ಇದ್ದಷ್ಟು ಸಂವಹನವು ಈಗ ಉತ್ತಮವಾಗಿಲ್ಲ ಎಂದು ತಿಳಿದು ಬಂದಿದೆ. ಆದ್ದರಿಂದ ಡ್ರೆಸ್ಸಿಂಗ್ ರೂಂನಲ್ಲಿ ತಂಡದ ವಾತಾವರಣವನ್ನು ಕಾಪಾಡಿಕೊಳ್ಳುವುದು ನಾಯಕನಿಗೆ ಕಷ್ಟವಾಗಿ ಪರಿಣಮಿಸಿದೆ ಎಂದು ಹೇಳಲಾಗುತ್ತಿದೆ.

ದ್ರಾವಿಡ್ ಅವರ ಕೋಚಿಂಗ್ ಅವಧಿಯಲ್ಲಿ, ಆಟಗಾರರ ಆಯ್ಕೆ ಸೇರಿದಂತೆ ಇತರ ವಿಷಯಗಳ ಬಗ್ಗೆ ರೋಹಿತ್ ಶರ್ಮಾ ಆಟಗಾರರೊಂದಿಗೆ ಪ್ರತ್ಯೇಕವಾಗಿ ಮಾತನಾಡುತ್ತಿದ್ದರು. ಆದರೆ, ಗಂಭೀರ್ ಅವರು ತಂಡದ ಕೋಚ್​​ ಆಗಿ ನೇಮಕವಾದ ಬಳಿಕ ರೋಹಿತ್​ ಕೆಲ ಕಿರಿಯ ಆಟಗಾರರೊಂದಿಗೆ ಹೆಚ್ಚಾಗಿ ಸಂವಹನ ನಡೆಸಿಲ್ಲ ಎಂದು ಹೇಳಲಾಗುತ್ತಿದೆ.

ನ್ಯೂಜಿಲೆಂಡ್ ಹಾಗೂ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್​​ ಸರಣಿಯಲ್ಲಿ ಭಾರತ ಕಳಪೆ ಪ್ರದರ್ಶನ ನೀಡಿರುವುದು ಗಂಭೀರ್ ಅವರ ಸಾಮರ್ಥ್ಯದ ಮೇಲೆ ಕರಿನೆರಳು ಬೀರುವಂತೆ ಮಾಡಿದೆ. ಟೀಂ ಇಂಡಿಯಾ ಪ್ರದರ್ಶನ ಸುಧಾರಿಸದಿದ್ದರೆ ಗೌತಮ್ ಗಂಭೀರ್ ಸ್ಥಾನವೂ ಸುರಕ್ಷಿತವಾಗಿರುವುದಿಲ್ಲ ಎಂದು ಹೆಸರು ಹೇಳಲು ಬಯಸದ ಬಿಸಿಸಿಐನ ಹಿರಿಯ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ.

ಗೌತಮ್ ಗಂಭೀರ್ ಬಿಸಿಸಿಐನ ಮೊದಲ ಆಯ್ಕೆಯಾಗಿರಲಿಲ್ಲ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ಹೇಳಿದ್ದಾರೆ. ಬಿಸಿಸಿಐನ ಮೊದಲ ಆಯ್ಕೆಯಾಗಿದ್ದ ವಿವಿಎಸ್ ಲಕ್ಷ್ಮಣ್ ಮೂರು ಫಾರ್ಮೆಟ್‌ಗಳಲ್ಲಿ ತಂಡವನ್ನು ಮುನ್ನಡೆಸುವ ಜವಾಬ್ದಾರಿ ಬೇಡ ಎಂದು ಹಿಂದೆ ಸರಿದಿದ್ದರು. ಹೀಗಾಗಿ ಬಿಸಿಸಿಐ ಗಂಭೀರ ಆಯ್ಕೆ ಮಾಡಬೇಕಾಯಿತು ಎಂದಿದ್ದಾರೆ.

ಇದನ್ನು ಓದಿ: 'ನನ್ನ ಮಗ ಭಾರತ ತಂಡವನ್ನು ಪ್ರತಿನಿಧಿಸುವ ವಿಶ್ವಾಸವಿದೆ': ವಿನೋದ್ ಕಾಂಬ್ಳಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.