ETV Bharat / sports

ಗೆಲುವಿನ ಹೊರತಾಗಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ರಿಷಭ್ ಪಂತ್​ಗೆ 12 ಲಕ್ಷ ರೂ. ದಂಡ - IPL Code of Conduct - IPL CODE OF CONDUCT

IPL 2024: ಭಾನುವಾರ ರಾತ್ರಿ ವೈಜಾಗ್‌ನಲ್ಲಿ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಐಪಿಎಲ್ 2024ರ ಮೊದಲ ಗೆಲುವಿನ ಹೊರತಾಗಿ ಡೆಲ್ಲಿ ಕ್ಯಾಪಿಟಲ್ಸ್ ನಾಯಕ ರಿಷಭ್​​ ಪಂತ್​ಗೆ 12 ಲಕ್ಷ ರೂ. ದಂಡ ವಿಧಿಸಲಾಗಿದೆ.

IPL 2024: DC skipper Rishabh Pant fined for maintaining slow over-rate during clash against CSK

author img

By ANI

Published : Apr 1, 2024, 11:13 AM IST

ವಿಶಾಖಪಟ್ಟಣಂ (ಆಂಧ್ರಪ್ರದೇಶ): ಚೆನ್ನೈ ಸೂಪರ್ ಕಿಂಗ್ಸ್ (CSK) ವಿರುದ್ಧದ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಪಂದ್ಯದಲ್ಲಿ ನಿಧಾನಗತಿಯ ಓವರ್ ರೇಟ್ ಕಾಯ್ದುಕೊಂಡಿದ್ದಕ್ಕಾಗಿ ದೆಹಲಿ ಕ್ಯಾಪಿಟಲ್ಸ್ (ಡಿಸಿ) ನಾಯಕ ರಿಷಭ್​​ ಪಂತ್ ಅವರಿಗೆ ದಂಡ ವಿಧಿಸಲಾಗಿದೆ. ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕಾಗಿ ಪಂತ್​ಗೆ ಬರೋಬ್ಬರಿ 12 ಲಕ್ಷ ರೂ. ದಂಡ ವಿಧಿಸಲಾಗಿದೆ.

"ವಿಶಾಖಪಟ್ಟಣಂನ ಡಾ. ವೈಎಸ್ ರಾಜಶೇಖರ ರೆಡ್ಡಿ ಕ್ರಿಕೆಟ್ ಮೈದಾನದಲ್ಲಿ ಭಾನುವಾರ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಪಂದ್ಯದ ವೇಳೆ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ರಿಷಭ್​​ ಪಂತ್ ಅವರು ನಿಧಾನಗತಿಯ ಓವರ್ ರೇಟ್ ಕಾಯ್ದುಕೊಂಡಿದ್ದರಿಂದ ದಂಡ ವಿಧಿಸಲಾಗಿದೆ" ಎಂದು ಐಪಿಎಲ್‌ ಮೂಲಗಳು ತಿಳಿಸಿವೆ.

"ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಮೊದಲು ಬ್ಯಾಟಿಂಗ್ ಮಾಡಿತ್ತು. ಬೌಲಿಂಗ್ ವೇಳೆ ಸ್ಲೋ ಓವರ್​ ರೇಟ್ ತಪ್ಪು ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು ನಿಗದಿತ ಸಮಯದೊಳಗೆ ಪಂದ್ಯ ಮುಗಿಸಿರಲಿಲ್ಲ. ಈ ಕಾರಣಕ್ಕಾಗಿ ಇದೀಗ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ರಿಷಭ್ ಪಂತ್​ಗೆ 12 ಲಕ್ಷ ರೂ. ದಂಡ ವಿಧಿಸಲಾಗಿದೆ."

ಐಪಿಎಲ್​ ನಿಯಮದ ಪ್ರಕಾರ, ಪ್ರತಿ ತಂಡಗಳು 20 ಓವರ್​ಗಳನ್ನು 1 ಗಂಟೆ 30 ನಿಮಿಷಗಳಲ್ಲಿ ಪೂರ್ಣಗೊಳಿಸಬೇಕು. ಒಂದು ವೇಳೆ ಇದಕ್ಕಿಂತ ಹೆಚ್ಚಿನ ಸಮಯ ತೆಗೆದುಕೊಂಡರೆ ಬೌಂಡರಿ ಲೈನ್​ನಿಂದ ಒಬ್ಬ ಫೀಲ್ಡರ್ ಕಡಿತ ಮಾಡಲಾಗುತ್ತದೆ. ಹಾಗೆಯೇ ಈ ತಪ್ಪನ್ನು ಮಾಡಿದ ತಂಡದ ನಾಯಕನಿಗೆ 12 ಲಕ್ಷ ರೂ. ದಂಡ ವಿಧಿಸಲಾಗುತ್ತದೆ.

ಡೆಲ್ಲಿ ಕ್ಯಾಪಿಟಲ್ಸ್ ಪರ​ ಪೃಥ್ವಿ ಶಾ, ವಾರ್ನರ್​, ರಿಷಭ್​ ಪಂತ್​ ಅವರ ​ಭರ್ಜರಿ ಬ್ಯಾಟಿಂಗ್​ ನೆರವಿನಿಂದ ನಿಗದಿತ 20 ಓವರ್​ಗಳಲ್ಲಿ 191 ರನ್‌ಗಳ ಬೃಹತ್​ ಮೊತ್ತವನ್ನು ಪೇರಿಸಿತು. 35 ಎಸೆತ ಎದುರಿಸಿದ ಡೇವಿಡ್ ವಾರ್ನರ್ ಐದು ಬೌಂಡರಿ ಮತ್ತು ಮೂರು ಸಿಕ್ಸರ್ ಸಹಿತ 52 ರನ್​ ಗಳಿಸಿದರೆ, ಪೃಥ್ವಿ ಶಾ 27 ಎಸೆತಗಳಲ್ಲಿ ನಾಲ್ಕು ಬೌಂಡರಿ ಮತ್ತು ಎರಡು ಸಿಕ್ಸ್​ ನೆರವಿನಿಂದ 43 ರನ್​ ಗಳಿಸಿ ಅರ್ಧ ಶತಕದಿಂದ ವಂಚಿತರಾದರು. ಈ ಜೋಡಿ 93 ರನ್​ಗಳ ಜೊತೆಯಾಟವಾಡಿ ತಂಡಕ್ಕೆ ಭದ್ರ ಬುನಾದಿ ಹಾಕಿತು. ಇವರ ಬಳಿಕ ಕ್ರೀಸ್​ಗೆ ಇಳಿದ ರಿಷಭ್ ಪಂತ್ 32 ಎಸೆತಗಳಲ್ಲಿ ನಾಲ್ಕು ಬೌಂಡರಿ ಮತ್ತು ಮೂರು ಸಿಕ್ಸರ್‌ಗಳೊಂದಿಗೆ 51 ರನ್ ಚಚ್ಚಿ ಅರ್ಧಶತಕ ಪೂರೈಸಿ ಜಡೇಜಾಗೆ ವಿಕೆಟ್​ ಒಪ್ಪಿಸಿ ಹೊರನಡೆದರು. ಉಳಿದಂತೆ ಮಾರ್ಷ್ (18), ಅಕ್ಸರ್​ (7), ಅಭಿಷೇಕ್​ ಪೊರೆಲ್​ (9) ಬ್ಯಾಟಿಂಗ್​ ನೆರವಿನಿಂದ ಮೊದಲ ಇನಿಂಗ್ಸ್​ನ ಮುಕ್ತಾಯಕ್ಕೆ ಡೆಲ್ಲಿ 191 ರನ್​ಗಳ ಕಲೆ ಹಾಕಿತು. ಚೆನ್ನೈ ಪರ ವೇಗಿ ಮತಿಶ ಪಥಿರಾನ 3 ವಿಕೆಟ್ ಪಡೆದರೆ, ರವೀಂದ್ರ ಜಡೇಜಾ ಮತ್ತು ಮುಸ್ತಾಫಿಜುರ್ ರೆಹಮಾನ್ ತಲಾ 1 ವಿಕೆಟ್​ ಉರುಳಿಸಿದರು.

ಇದಕ್ಕೆ ಉತ್ತರವಾಗಿ 20 ಓವರ್‌ಗಳಲ್ಲಿ ಚೆನ್ನೈ ತಂಡ 6 ವಿಕೆಟ್ ಕಳೆದುಕೊಂಡು 171 ರನ್ ಗಳಿಸಲಷ್ಟೇ ಶಕ್ತವಾಯಿತು. ತಂಡದ ಪರ ಅಜಿಂಕ್ಯ ರಹಾನೆ ಅತ್ಯಧಿಕ 45 ರನ್​ಗಳಿಸಿದರೆ, ಡ್ಯಾರೆಲ್ ಮಿಚೆಲ್ (34), ದುಬೆ 18 ರನ್​ಗಳ ಕೊಡುಗೆ ನೀಡಿದರು. ಕೊನೆಯಲ್ಲಿ ತಂಡದ ಗೆಲುವಿಗಾಗಿ ಜಡೇಜಾ (21*) ಮತ್ತು ಧೋನಿ (37*) ಹೊರಾಟ ನಡೆಸಿದರೂ ಗೆಲುವಿನ ದಡ ಸೇರಲು ಸಾಧ್ಯವಾಗಲಿಲ್ಲ. ಧೋನಿ ಈ ಋತುವಿನಲ್ಲಿ ಮೊದಲ ಬಾರಿಗೆ ಬ್ಯಾಟಿಂಗ್ ಮಾಡಿದ್ದು, 16 ಎಸೆತದಲ್ಲಿ 4 ಬೌಂಡರಿ ಮತ್ತು 3 ಸಿಕ್ಸ್​​ರ ಸಿಡಿಸುವ ಮೂಲಕ ತಮ್ಮ ಸಾಮರ್ಥ್ಯ ಪ್ರದರ್ಶಿಸಿದರು.​ ಆದರೆ, ತಂಡವನ್ನು ಗೆಲುವಿನತ್ತ ಕೊಂಡೊಯ್ಯಲು ಸಾಧ್ಯವಾಗಲಿಲ್ಲ.

ಚೆನ್ನೈ ಸೂಪರ್ ಕಿಂಗ್ಸ್ ಎರಡು ಗೆಲುವು ಮತ್ತು ಒಂದು ಸೋಲಿನೊಂದಿಗೆ ನಾಲ್ಕು ಪಾಯಿಂಟ್‌ಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದರೆ, ದೆಹಲಿ ಕ್ಯಾಪಿಟಲ್ಸ್ ಒಂದು ಗೆಲುವು ಮತ್ತು ಎರಡು ಸೋಲುಗಳೊಂದಿಗೆ ಎರಡು ಅಂಕಗಳ ಸಹಿತ ಏಳನೇ ಸ್ಥಾನದಲ್ಲಿದೆ.

ಇದನ್ನೂ ಓದಿ: ವೈಜಾಗ್​ನಲ್ಲಿ ಗೆಲುವಿನ ಖಾತೆ ತೆರೆದ ಡೆಲ್ಲಿ: ಸಿಎಸ್​ಕೆ ವಿಜಯದ ಓಟಕ್ಕೆ ಬ್ರೇಕ್ - DC Won Against CSK

ETV Bharat Logo

Copyright © 2024 Ushodaya Enterprises Pvt. Ltd., All Rights Reserved.