ಚೆನ್ನೈ(ತಮಿಳುನಾಡು): 17ನೇ ಐಪಿಎಲ್ ಕ್ರಿಕೆಟ್ ಹಬ್ಬ ಇಂದಿನಿಂದ (ಶುಕ್ರವಾರ) ಪ್ರಾರಂಭವಾಗಲಿದೆ. ಚೆನ್ನೈನ ಚೆಪಾಕ್‌ನ ಸ್ಟೇಡಿಯಂ ಪಂದ್ಯಕ್ಕೆ ಆತಿಥ್ಯ ನೀಡುತ್ತಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಮತ್ತು ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ನಡುವೆ ಆರಂಭಿಕ ಪಂದ್ಯ ನಿಗದಿಯಾಗಿದೆ. ಆರ್‌ಸಿಬಿ ತಂಡವನ್ನು ಫಫ್ ಡುಪ್ಲೆಸಿಸ್ ಮುನ್ನಡೆಸಿದರೆ, ಚೆನ್ನೈ ತಂಡಕ್ಕೆ ಮಹೇಂದ್ರ ಸಿಂಗ್ ಧೋನಿ ಬದಲಿಗೆ ರುತುರಾಜ್ ಗಾಯಕ್ವಾಡ್ ಸಾರಥ್ಯವಿದೆ.
ಪಿಚ್ ರಿಪೋರ್ಟ್: ಚೆಪಾಕ್ ಪಿಚ್ ಸ್ಪಿನ್ನರ್‌ಗಳಿಗೆ ತುಂಬಾ ಅನುಕೂಲಕಾರಿಯಾಗಿದೆ. ಹಾಗಾಗಿ, ಪ್ರಮುಖ ಸ್ಪಿನ್ನರ್‌ಗಳಾದ ಮೊಯಿನ್ ಅಲಿ, ರವೀಂದ್ರ ಜಡೇಜಾ ಮತ್ತು ಮಹಿಷ್ ತೀಕ್ಷಣ ಆರ್‌ಸಿಬಿ ಬ್ಯಾಟರ್‌ಗಳನ್ನು ಕಾಡುವ ಸಾಧ್ಯತೆಯಿದೆ.
ಬಲಾಬಲ: ಸಿಎಸ್‌ಕೆ ಇದುವರೆಗೆ ನಡೆದ ಐಪಿಎಲ್ ಪಂದ್ಯಾವಳಿಗಳಲ್ಲಿ ಆರ್‌ಸಿಬಿ ವಿರುದ್ಧ ಪ್ರಾಬಲ್ಯ ಸಾಧಿಸುತ್ತಾ ಬಂದಿದೆ. ಟೂರ್ನಿಯಲ್ಲಿ ಎರಡು ತಂಡಗಳ ನಡುವೆ 31 ಪಂದ್ಯಗಳು ನಡೆದಿದ್ದು, 20ರಲ್ಲಿ ಸಿಎಸ್‌ಕೆ ಜಯ ಸಾಧಿಸಿದೆ. ಆರ್‌ಸಿಬಿ 10 ಪಂದ್ಯಗಳಲ್ಲಿ ಗೆದ್ದಿದೆ. ಒಂದು ಪಂದ್ಯ ಪೂರ್ಣಗೊಂಡಿಲ್ಲ. ಎರಡೂ ತಂಡಗಳು ಚೆಪಾಕ್‌ನಲ್ಲಿ 8 ಪಂದ್ಯಗಳನ್ನು ಆಡಿದ್ದು, ಇದರಲ್ಲಿ ಚೆನ್ನೈ 7 ಗೆದ್ದಿದ್ದರೆ, ಬೆಂಗಳೂರು ಕೇವಲ 1 ಪಂದ್ಯವನ್ನೇ ಜಯಿಸಿದೆ.
ಸಿಎಸ್‌ಕೆ: ರುತುರಾಜ್ ಗಾಯಕ್‌ವಾಡ್ (ನಾಯಕ), ಎಂ.ಎಸ್.ಧೋನಿ, ಮೊಯಿನ್ ಅಲಿ, ದೀಪಕ್ ಚಹಾರ್, ತುಷಾರ್ ದೇಶಪಾಂಡೆ, ಶಿವಂ ದುಬೆ, ರಾಜವರ್ಧನ್ ಹಂಗರ್‌ಗೇಕರ್, ರವೀಂದ್ರ ಜಡೇಜಾ, ಅಜಯ್ ಮಂಡಲ್, ಮುಖೇಶ್ ಚೌಧರಿ, ಅಜಿಂಕ್ಯ ರಹಾನೆ, ಶೇಕ್ ರಶೀದ್, ಮಿಚೆಲ್ ಸ್ಯಾಂಟ್ನರ್, ಸಿಮರಾಂತ್‌ಜೀತ್ ಸಿಂಗ್, ಪ್ರಶಾಂತ್ ಸೋಲಂಕಿ, ಮಹಿಶ್ ತೀಕ್ಷಣ, ರಚಿನ್ ರವೀಂದ್ರ, ಶಾರ್ದೂಲ್ ಠಾಕೂರ್, ಡೆರಿಲ್ ಮಿಚೆಲ್, ಸಮೀರ್ ರಿಜ್ವಿ, ಮುಸ್ತಾಫಿಜುರ್ ರೆಹಮಾನ್ ಮತ್ತು ಅವನೀಶ್ ರಾವ್ ಅರವಲ್ಲಿ.
ಆರ್‌ಸಿಬಿ: ಫಫ್ ಡುಪ್ಲೆಸಿಸ್ (ನಾಯಕ), ಗ್ಲೆನ್ ಮ್ಯಾಕ್ಸ್‌ವೆಲ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಸುಯಶ್ ಪ್ರಭುದೇಸಾಯಿ, ವಿಲ್ ಜಾಕ್ಸ್, ಮಹಿಪಾಲ್ ಲೊಮ್ರೋರ್, ಕರ್ಣ್ ಶರ್ಮಾ, ಮನೋಜ್ ಭಾಂಡಗೆ, ಮಯಾಂಕ್ ದಾಗರ್, ವಿಜಯ್‌ಕುಮಾರ್ ವೈಶಾಕ್, ಆಕಾಶ್ ದೀಪ್, ಮೊಹಮ್ಮದ್ ಸಿರಾಜ್ ದೀಪ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ರಾಜನ್ ಕುಮಾರ್, ಕ್ಯಾಮೆರಾನ್ ಗ್ರೀನ್, ಅಲ್ಜಾರಿ ಜೋಸೆಫ್, ಯಶ್ ದಯಾಲ್, ಟಾಮ್ ಕರ್ರಾನ್, ಲಾಕಿ ಫರ್ಗುಸನ್, ಸ್ವಪ್ನಿಲ್ ಸಿಂಗ್ ಮತ್ತು ಸೌರವ್ ಚೌಹಾನ್.
ಸಮಯ: ಇಂದು ರಾತ್ರಿ 7.30ಕ್ಕೆ
ನೇರಪ್ರಸಾರ: ಸ್ಟಾರ್ ಸ್ಫೋರ್ಟ್ಸ್, ಜಿಯೋಸಿನಿಮಾ
ಇದನ್ನೂ ಓದಿ: IPL 2024: ಚೆನ್ನೈ ತಂಡದ ನಾಯಕ ಸ್ಥಾನದಿಂದ ಕೆಳಗಿಳಿದ ಧೋನಿ! - Indian Premier League