ETV Bharat / sports

ಐಪಿಎಲ್​​ ವೇಳಾಪಟ್ಟಿ ಪ್ರಕಟ: ಮೊದಲ ಪಂದ್ಯದಲ್ಲಿ ಸಿಎಸ್​ಕೆ vs ಆರ್​ಸಿಬಿ ಫೈಟ್​​ - ಐಪಿಎಲ್​ 2024

IPL 2024 Schedule: ಐಪಿಎಲ್​ 2024ರ 17ನೇ ಆವೃತ್ತಿಯ ವೇಳಾಪಟ್ಟಿ ಪ್ರಕಟಗೊಂಡಿದೆ.

ಇಂಡಿಯನ್​ ಪ್ರೀಮಿಯರ್​ ಲೀಗ್​ ವೇಳಾಪಟ್ಟಿ ಪ್ರಕಟ

author img

By ETV Bharat Karnataka Team

Published : Feb 22, 2024, 6:32 PM IST

Updated : Feb 22, 2024, 7:47 PM IST

ನವದೆಹಲಿ: ಬಹುನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್​ (IPL)ನ 17ನೇ ಆವೃತ್ತಿಯ ವೇಳಾಪಟ್ಟಿಯನ್ನು ಇಂದು ಬಿಸಿಸಿಐ (BCCI) ಪ್ರಕಟಿಸಿದೆ. ಮಾರ್ಚ್​ 22 ರಿಂದ ಚುಟುಕು ಕ್ರಿಕೆಟ್​ ಪಂದ್ಯಗಳು ಆರಂಭವಾಗಲಿವೆ. ಐಪಿಎಲ್ 2024ರ ಮೊದಲ ಪಂದ್ಯ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳ ನಡುವೆ ನಡೆಯಲಿದೆ.

ಲೋಕಸಭೆ ಸಾರ್ವತ್ರಿಕ ಚುನಾವಣೆ ಹಿನ್ನೆಲೆ ಪಂದ್ಯಾವಳಿಯ ವೇಳಾಪಟ್ಟಿಯನ್ನು ಎರಡು ಹಂತಗಳಲ್ಲಿ ಬಿಡುಗಡೆ ಮಾಡಲಾಗುತ್ತದೆ. ಸದ್ಯ ಮೊದಲ 21 ಪಂದ್ಯಗಳ ವೇಳಾಪಟ್ಟಿಯನ್ನು ಮಾತ್ರ ಪ್ರಕಟಿಸಲಾಗಿದೆ. ಎರಡನೇ ಹಂತದ ವೇಳಾಪಟ್ಟಿಯನ್ನು ಚುನಾವಣೆ ದಿನಾಂಕ ಘೋಷಣೆ ಬಳಿಕವೇ ಬಿಡುಗಡೆ ಮಾಡುವ ಸಾಧ್ಯತೆ ಇದೆ.

ಮೊದಲ ಪಂದ್ಯ ಚೆನ್ನೈನಲ್ಲಿ ನಡೆಯಲಿದೆ. ತನ್ನ ತವರು ನೆಲದೊಂದಿಗೆ CSK ಟೂರ್ನಿಯನ್ನು ಆರಂಭಿಸಲಿದೆ. ಮೊದಲ ಹಂತದ ಪಟ್ಟಿಯಲ್ಲಿ 4 ಡಬಲ್ ಹೆಡರ್‌ಗಳು (ಒಂದೇ ದಿನ ಎರಡು) ಇರಲಿವೆ.

ಡಬಲ್​ ಹೆಡರ್​ ಪಂದ್ಯಗಳು: ಐಪಿಎಲ್​ನ ಎರಡನೇ ದಿನ ಅಂದರೆ ಮಾ. 23ರಂದು ಎರಡು ಪಂದ್ಯಗಳು ನಡೆಯಲಿವೆ. ಮೊದಲ ಪಂದ್ಯದಲ್ಲಿ ಪಂಜಾಬ್​ ಕಿಂಗ್ಸ್​ ಮತ್ತು ಡೆಲ್ಲಿ ಕ್ಯಾಪಿಟಲ್ಸ್​ ಸೆಣಿಸಿದರೆ ಎರಡನೇ ಪಂದ್ಯದಲ್ಲಿ ಸಂಜೆ ಕೋಲ್ಕತ್ತಾ ನೈಟ್​ ರೈಡರ್ಸ್​ ಮತ್ತು ಸನ್​ ರೈಸರ್ಸ್​ ಹೈದರಬಾದ್​ ಹಣಾಹಣಿ ನಡೆಯಲಿದೆ.

ಮಾ. 24 ಭಾನುವಾರವೂ ಎರಡು ಪಂದ್ಯಗಳು ನಡೆಯಲಿವೆ. ಮೊದಲ ಪಂದ್ಯದಲ್ಲಿ ರಾಜಸ್ಥಾನ್​ ರಾಯಲ್ಸ್​ ಮತ್ತು ಲಕ್ನೋ ಸೂಪರ್​ ಜೈಂಟ್ಸ್​ ಸೆಣಸಲಿದ್ದು, ಎರಡನೇ ಪಂದ್ಯದಲ್ಲಿ ಗುಜರಾತ್​ ಟೈಟಾನ್ಸ್​ ಮತ್ತು ಮುಂಬೈ ತಂಡಗಳು ಪೈಪೋಟಿ ನಡೆಸಲಿವೆ.

ಮಾ.31 ಭಾನುವಾರದಂದು ಮೊದಲ ಪಂದ್ಯ ಗುಜರಾತ್​ ಟೈಟಾನ್ಸ್​ ಮತ್ತು ಸನ್​ ರೈಸರ್ಸ್​ ಹೈದರಾಬಾದ್​​ ನಡುವೆ ನಡೆದರೆ ಎರಡನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್​ ಮತ್ತು ಚೆನ್ನೈ ಸೂಪರ್​ ಕಿಂಗ್ಸ್​ ತಂಡಗಳ ಮಧ್ಯೆ ಹಣಾಹಣಿ ನಡೆಯಲಿದೆ.

ಇದನ್ನೂ ಓದಿ: ರೋಹಿತ್​ ಶರ್ಮಾ 4000 ಟೆಸ್ಟ್​​ ರನ್​ ಪೂರೈಸಲು ಬೇಕಿದೆ ಕೇವಲ 22 ರನ್​

Last Updated : Feb 22, 2024, 7:47 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.