ETV Bharat / sports

ಐಪಿಎಲ್: ಮುಂದಿನ ಪಂದ್ಯದಲ್ಲಿ ಮುಂಬೈ ಪರ ಈ ಆಟಗಾರ ಕಣಕ್ಕಿಳಿಯುವ ಸಾಧ್ಯತೆ! - Mumbai Indians - MUMBAI INDIANS

ಮುಂಬೈ ಇಂಡಿಯನ್ಸ್​ ತಂಡದ ಪರ ಮುಂದಿನ ಪಂದ್ಯದಲ್ಲಿ ಸೂರ್ಯಕುಮಾರ್​ ಯಾದವ್ ಕಣಕ್ಕಿಳಿಯುವ ಸಾಧ್ಯತೆ ಕಂಡುಬಂದಿದೆ.

ಐಪಿಎಲ್​ಗೆ ಕಮ್​ಬ್ಯಾಕ್​ ಮಾಡಲಿರುವ ಸೂರ್ಯಕುಮಾರ್​ ಯಾದವ್​: ಮುಂದಿನ ಪಂದ್ಯದಲ್ಲಿ ಕಣಕ್ಕೆ!  ​

author img

By ETV Bharat Karnataka Team

Published : Apr 4, 2024, 6:49 PM IST

ಹೈದರಾಬಾದ್​: ಕಳಪೆ ಪ್ರದರ್ಶನದಿಂದ ಪ್ರಸಕ್ತ ಋತುವಿನ ಇಂಡಿಯನ್ ಪ್ರೀಮಿಯರ್‌ ಲೀಗ್‌ನಲ್ಲಿ (ಐಪಿಎಲ್) ಹ್ಯಾಟ್ರಿಕ್​ ಸೋಲು ಅನುಭವಿಸಿರುವ ಮುಂಬೈ ಇಂಡಿಯನ್ಸ್‌ ತಂಡಕ್ಕೆ ಇದೀಗ ಖುಷಿ ಸುದ್ದಿ ಸಿಕ್ಕಿದೆ. ಸ್ಪೋಟಕ ಬ್ಯಾಟರ್​ ಸೂರ್ಯಕುಮಾರ್​ ಯಾದವ್​ ಮುಂದಿನ ಪಂದ್ಯದಲ್ಲಿ ಕಣಕ್ಕಿಳಿಯಲಿದ್ದಾರೆ ಎನ್ನಲಾಗುತ್ತಿದೆ. ವಿಶ್ವದ ಟಿ20 ನಂ.1 ಬ್ಯಾಟರ್ ಎಂಐ​ ತಂಡಕ್ಕೆ ಬಲ ತುಂಬುವ ನಿರೀಕ್ಷೆ ಮೂಡಿದೆ.

ಮೂಲಗಳ ಪ್ರಕಾರ, ಸೂರ್ಯಕುಮಾರ್ ಯಾದವ್ ಶುಕ್ರವಾರ (ನಾಳೆ) ಮುಂಬೈ ಇಂಡಿಯನ್ಸ್‌ ತಂಡ ಸೇರಿಕೊಳ್ಳುವರು. 33ರ ಹರೆಯದ ಆಟಗಾರ ತಂಡದ ಅಭ್ಯಾಸದಲ್ಲೂ ಪಾಲ್ಗೊಳ್ಳಲಿದ್ದಾರೆ. ನೆಟ್ ಸೆಷನ್‌ಗಳು ಮತ್ತು ಫಿಟ್‌ನೆಸ್ ಆಧಾರದ ಮೇಲೆ ಏಪ್ರಿಲ್ 7ರಂದು ಡೆಲ್ಲಿ ವಿರುದ್ದ ನಡೆಯಲಿರುವ ಪಂದ್ಯದಲ್ಲಿ ಆಡಬೇಕೇ ಅಥವಾ ಬೇಡವೇ ಎಂಬುದನ್ನು ತಂಡದ ಮ್ಯಾನೇಜ್‌ಮೆಂಟ್ ನಿರ್ಧರಿಸುತ್ತದೆ ಎನ್ನಲಾಗಿದೆ.

ಸೂರ್ಯಕುಮಾರ್ ಯಾದವ್ ಕೊನೆಯ ಬಾರಿಗೆ 2023ರ ಡಿಸೆಂಬರ್‌ನಲ್ಲಿ ಕ್ರಿಕೆಟ್ ಆಡಿದ್ದರು. ದಕ್ಷಿಣ ಆಫ್ರಿಕಾ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಭರ್ಜರಿ ಶತಕ ಗಳಿಸಿದ ನಂತರ, ಪಾದದ ಗಾಯಕ್ಕೆ ತುತ್ತಾಗಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಬಳಿಕ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ (NCA) ಚೇತರಿಸಿಕೊಳ್ಳುತ್ತಿದ್ದರು. ಇದೀಗ ಫಿಟ್ ಆಗಿದ್ದಾರೆ.

​ಸೂರ್ಯ ಐಪಿಎಲ್​ ದಾಖಲೆ: ಐಪಿಎಲ್‌ನಲ್ಲಿ ಈವರೆಗೂ 139 ಪಂದ್ಯಗಳ ಪೈಕಿ 124 ಇನಿಂಗ್ಸ್ ಆಡಿರುವ ಸೂರ್ಯಕುಮಾರ್ 31.85 ಸರಾಸರಿ ಮತ್ತು 143.32 ಸ್ಟ್ರೈಕ್ ರೇಟ್‌ನೊಂದಿಗೆ 3,249 ರನ್ ಗಳಿಸಿದ್ದಾರೆ. ಇದರಲ್ಲಿ ಒಂದು ಶತಕ ಮತ್ತು 21 ಅರ್ಧ ಶತಕಗಳಿವೆ.

ಪ್ರಸಕ್ತ ಋತುವಿನಲ್ಲಿ ನಿರಾಶಾದಾಯಕ ಪ್ರದರ್ಶನವನ್ನು ತೋರಿರುವ ಹಾರ್ದಿಕ್​ ಪಾಂಡ್ಯ ನೇತೃತ್ವದ ಮುಂಬೈ ಇಂಡಿಯನ್ಸ್‌ ಈವರೆಗೂ ಆಡಿರುವ ಮೂರು ಪಂದ್ಯಗಳಲ್ಲಿ ಸೋಲನುಭವಿಸಿ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನಕ್ಕೆ ತಲುಪಿದೆ.

ಇದನ್ನೂ ಓದಿ: 'ಟಿ20 ವಿಶ್ವಕಪ್​ ತಂಡದಲ್ಲಿ ಮಯಾಂಕ್​ ಆಡಬೇಕು': ಅಭಿಮಾನಿಗಳ ಒತ್ತಾಯ - Mayank Yadav

ETV Bharat Logo

Copyright © 2024 Ushodaya Enterprises Pvt. Ltd., All Rights Reserved.