Bumrah Breaks 47 Years Record: ಸಿಡ್ನಿ ಟೆಸ್ಟ್‌ನಲ್ಲಿ ಜಸ್ಪ್ರೀತ್ ಬುಮ್ರಾ ಮತ್ತೊಂದು ಐತಿಹಾಸಿಕ ಸಾಧನೆ ಮಾಡಿದ್ದಾರೆ. ಅವರು ಆಸ್ಟ್ರೇಲಿಯಾದಲ್ಲಿ ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಭಾರತೀಯ ಬೌಲರ್ ಎಂದು ತಮ್ಮ ಹೆಸರನ್ನು ನೋಂದಾಯಿಸಿಕೊಂಡಿದ್ದಾರೆ. ಪ್ರಸ್ತುತ ನಡೆಯುತ್ತಿರುವ ಬಾರ್ಡರ್ ಗವಾಸ್ಕರ್ ಟ್ರೋಫಿಯ ಸರಣಿಯಲ್ಲಿ, ಬುಮ್ರಾ ಈವರೆಗೆ 32 ವಿಕೆಟ್‌ಗಳನ್ನು ಪಡೆದಿದ್ದಾರೆ. ಅವರ ಆಸ್ಟ್ರೇಲಿಯಾದ ಬ್ಯಾಟ್ಸ್‌ಮನ್ ಮಾರ್ನಸ್ ಲ್ಯಾಬುಸ್ಚಾಗ್ನೆ ಅವರ ವಿಕೆಟ್ ಪಡೆಯುತ್ತಿದ್ದಂತೆ ಹೊಸ ದಾಖಲೆಯನ್ನು ನಿರ್ಮಿಸಿದರು.
47 ವರ್ಷಗಳ ಹಳೆಯ ದಾಖಲೆ ಮುರಿದ ಬುಮ್ರಾ : ಇದಕ್ಕೂ ಮೊದಲು ಸಿಡ್ನಿ ಟೆಸ್ಟ್‌ನ ಮೊದಲ ದಿನದಲ್ಲಿ ಬುಮ್ರಾ ಉಸ್ಮಾನ್ ಖವಾಜಾ ಅವರ ವಿಕೆಟ್ ಪಡೆದಾಗ ಅವರು ಭಾರತೀಯ ಕ್ರಿಕೆಟ್‌ನ ದಂತಕಥೆ ಬೌಲರ್ ಬಿಶನ್ ಸಿಂಗ್ ಬೇಡಿ ಅವರ ದಾಖಲೆಯನ್ನು ಸರಿಗಟ್ಟಿದ್ದರು. ಆದರೆ ಪಂದ್ಯದ ಎರಡನೇ ದಿನ ಮತ್ತೊಂದು ವಿಕೆಟ್ ಪಡೆಯುವ ಮೂಲಕ ಬಿಷನ್ ಸಿಂಗ್ ಬೇಡಿ ಅವರ ದಾಖಲೆಯನ್ನು ಮುರಿಯುವಲ್ಲಿ ಯಶಸ್ವಿಯಾದರು. ಈ ಮೂಲಕ ಜಸ್ಪ್ರೀತ್ ಬುಮ್ರಾ ಅವರು 47 ವರ್ಷಗಳ ಹಳೆಯ ದಾಖಲೆಯನ್ನು ಮುರಿದರು.
ಬಿಷನ್ ಸಿಂಗ್ ಬೇಡಿ ಹೆಸರಿನಲ್ಲಿತ್ತು ದಾಖಲೆ : ಇದಕ್ಕೂ ಮೊದಲು ಆಸ್ಟ್ರೇಲಿಯಾದಲ್ಲಿ ನಡೆದ ಟೆಸ್ಟ್ ಸರಣಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ದಾಖಲೆಯನ್ನು ಬಿಷನ್ ಸಿಂಗ್ ಬೇಡಿ ಹೊಂದಿದ್ದರು. ಅವರು 1977-78ರ ಪ್ರವಾಸದಲ್ಲಿ 31 ವಿಕೆಟ್‌ಗಳನ್ನು ಕಬಳಿಸುವ ಮೂಲಕ ಈ ದಾಖಲೆಯನ್ನು ಮಾಡಿದರು.
2025 ರಲ್ಲಿ ಸಿಡ್ನಿಯಲ್ಲಿ ನಡೆದ ಟೆಸ್ಟ್ ಪಂದ್ಯದ ವೇಳೆ ಆಸ್ಟ್ರೇಲಿಯಾದ ಎರಡನೇ ಇನ್ನಿಂಗ್ಸ್‌ನಲ್ಲಿ ಬುಮ್ರಾ ಬೇಡಿ ಅವರ ಐತಿಹಾಸಿಕ ದಾಖಲೆಯನ್ನು ಹಿಂದಿಕ್ಕಿದರು. ಬೇಡಿ ಅವರ ಈ ದಾಖಲೆಯು ಬಹಳ ವರ್ಷದಿಂದ ಉಳಿದುಕೊಂಡು ಬಂದಿತ್ತು. ಈಗ ಬುಮ್ರಾ ಅದನ್ನು ಮುರಿಯುವಲ್ಲಿ ಯಾವ ಮಟ್ಟದ ಬೌಲರ್ ಎಂಬುದನ್ನು ತೋರಿಸಿದ್ದಾರೆ.
ಇದನ್ನೂ ಓದಿ: ಸಿಡ್ನಿ ಪಂದ್ಯದಿಂದ ಹೊರಬಿದ್ದ ರೋಹಿತ್ ಶರ್ಮಾ ಟೆಸ್ಟ್ ಕ್ರಿಕೆಟ್ಗೆ ನಿವೃತ್ತಿ: ಅರೆ, ಹೌದೇ?