ಚೆನ್ನೈ, ತಮಿಳುನಾಡು: ಭಾರತ ಮತ್ತು ಬಾಂಗ್ಲಾದೇಶ ನಡುವೆ ಚೆನ್ನೈನಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾದ ಅನುಭವಿ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಹೊಸ ಮೈಲಿಗಲ್ಲು ಸ್ಥಾಪಿಸಿದ್ದಾರೆ. ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಬುಮ್ರಾ ತಮ್ಮ ಅಂತಾರಾಷ್ಟ್ರೀಯ 400 ವಿಕೆಟ್‌ಗಳನ್ನು ಪೂರೈಸಿದ್ದಾರೆ.
ಇದರೊಂದಿಗೆ ಭಾರತ ಪರ 400 ವಿಕೆಟ್ ಪಡೆದ 10ನೇ ಬೌಲರ್ ಎಂಬ ಖ್ಯಾತಿಯ ಜತೆಗೆ ಅತಿ ಕಡಿಮೆ ಪಂದ್ಯಗಳಲ್ಲಿ 400 ವಿಕೆಟ್‌ಗಳನ್ನು ಪಡೆದ ಐದನೇ ಭಾರತೀಯ ಬೌಲರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಈ ಪಂದ್ಯದಲ್ಲಿ ಬುಮ್ರಾ ಶಾದ್ಮನ್ ಇಸ್ಲಾಂ, ಮುಶ್ಫಿಕರ್ ರಹೀಮ್, ಹಸನ್ ಮಹಮೂದ್ ಅವರನ್ನು ವಿಕೆಟ್ ಪಡೆಯುವ ಮೂಲಕ ಈ ದಾಖಲೆಯನ್ನು ಬರೆದಿದ್ದಾರೆ. ಬಾಂಗ್ಲಾ ವಿರುದ್ಧದ ಮೊದಲ ಇನ್ನಿಂಗ್ಸ್ನಲ್ಲಿ ಬುಮ್ರಾ 11 ಓವರ್ ಬೌಲಿಂಗ್ ಮಾಡಿ 50 ರನ್ ನೀಡಿ 4 ವಿಕೆಟ್ ಪಡೆದಿದ್ದಾರೆ.
𝟒𝟎𝟎 𝐰𝐢𝐜𝐤𝐞𝐭𝐬 𝐟𝐨𝐫 𝐈𝐧𝐝𝐢𝐚 💥💥
— BCCI (@BCCI) September 20, 2024
A milestone to savour! @Jaspritbumrah93 has picked up his 400th wicket for #TeamIndia.
Hasan Mahmud is caught in the slips and Bangladesh are now 112-8.#INDvBAN @IDFCFIRSTBank pic.twitter.com/HwzUaAMOBt
30 ವರ್ಷದ ಈ ಬೌಲರ್ ಟೆಸ್ಟ್ ಕ್ರಿಕೆಟ್‌ನಲ್ಲಿ 20.48 ಸರಾಸರಿಯಲ್ಲಿ ಒಟ್ಟು 162 ವಿಕೆಟ್‌ಗಳನ್ನು ಪಡೆದಿದ್ದರೆ, ಏಕದಿನ ಕ್ರಿಕೆಟ್‌ನಲ್ಲಿ 23.55 ಸರಾಸರಿಯಲ್ಲಿ 149 ವಿಕೆಟ್‌ಗಳನ್ನು ಉರುಳಿಸಿದ್ದಾರೆ. ಟಿ20 ಸ್ವರೂಪದಲ್ಲಿ 17.75 ಸರಾಸರಿಯೊಂದಿಗೆ 89 ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಒಟ್ಟಾರೆ 196 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ 400 ವಿಕೆಟ್‌ಗಳನ್ನು ಪಡೆದಿದ್ದಾರೆ. 19 ರನ್‌ಗಳಿಗೆ 6 ವಿಕೆಟ್ ಪಡೆದಿರುವುದು ಅವರ ಅತ್ಯುತ್ತಮ ಪ್ರದರ್ಶನವಾಗಿದೆ.
- 196 International Matches.
— Tanuj Singh (@ImTanujSingh) September 20, 2024
- 400 Wickets.
- 21.01 average.
- 3.78 Economy.
- 33.28 strike rate.
- 6/19 Best.
- JASPRIT BUMRAH, THE GOAT...!!!! 🐐🫡 pic.twitter.com/Sjcf3ssMY6
ಕಡಿಮೆ ಇನ್ನಿಂಗ್ಸ್ನಲ್ಲಿ 400 ವಿಕೆಟ್: ಕಡಿಮೆ ಇನ್ನಿಂಗ್ಸ್‌ಗಳಲ್ಲಿ 400 ವಿಕೆಟ್ಳನ್ನು ಪಡೆದ ಬೌಲರ್ಗಳ ಪಟ್ಟಿಯಲ್ಲಿ ಅಶ್ವಿನ್ ಮೊದಲ ಸ್ಥಾನದಲ್ಲಿದ್ದಾರೆ. 216 ಇನ್ನಿಂಗ್ಸ್‌ಗಳಲ್ಲಿ 400 ಅಂತಾರಾಷ್ಟ್ರೀಯ ವಿಕೆಟ್ ಪಡೆದಿದ್ದಾರೆ. ಅವರ ನಂತರ, 220 ಇನ್ನಿಂಗ್ಸ್‌ಗಳಲ್ಲಿ ಈ ಸಾಧನೆ ಮಾಡಿದ ಕಪಿಲ್ ದೇವ್ ಎರಡನೇ ಸ್ಥಾನದಲ್ಲಿದ್ದರೆ, 3ನೇ ಸ್ಥಾನದಲ್ಲಿ ಮೊಹಮ್ಮದ್ ಶಮಿ 224 ಇನ್ನಿಂಗ್ಸ್, 4ನೇ ಸ್ಥಾನದಲ್ಲಿ ಅನಿಲ್ ಕುಂಬ್ಳೆ 226 ಇನ್ನಿಂಗ್ಸ್‌ಗಳಲ್ಲಿ ಈ ದಾಖಲೆ ಬರೆದಿದ್ದಾರೆ. ಇದೀಗ ಜಸ್ಪ್ರೀತ್ ಬುಮ್ರಾ ಕೂಡ ಅತಿ ಕಡಿಮೆ ಪಂದ್ಯಗಳಲ್ಲಿ ಮತ್ತು ಇನ್ನಿಂಗ್ಸ್‌ಗಳಲ್ಲಿ 400 ಅಂತಾರಾಷ್ಟ್ರೀಯ ವಿಕೆಟ್‌ಗಳನ್ನು ಪಡೆದ ಐದನೇ ಭಾರತೀಯ ಬೌಲರ್ ಎನಿಸಿಕೊಂಡಿದ್ದಾರೆ.
ಇದನ್ನೂ ಓದಿ: ಚೆನ್ನೈ ಟೆಸ್ಟ್: ಭಾರತದ ಮಾರಕ ಬೌಲಿಂಗ್ ದಾಳಿಗೆ ಬಾಂಗ್ಲಾ ಸರ್ವಪತನ: ಟೀಂ ಇಂಡಿಯಾಗೆ ಇನ್ನಿಂಗ್ಸ್ ಮುನ್ನಡೆ - IND VS BAN