ಬೆಂಗಳೂರು: ರಣಜಿ ಟ್ರೋಫಿ ಟೂರ್ನಿಯಲ್ಲಿ ಹರಿಯಾಣ ವಿರುದ್ಧದ ಮುಂದಿನ ಪಂದ್ಯಕ್ಕೆ ಅನುಭವಿ ಆಟಗಾರ ಕೆ.ಎಲ್.ರಾಹುಲ್ ಕರ್ನಾಟಕ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಮೊಣಕಾಲಿನ ಗಾಯದಿಂದ ಚೇತರಿಸಿಕೊಂಡಿರುವ ವೇಗಿ ವಿದ್ವತ್ ಕಾವೇರಪ್ಪ ಸಹ ತಂಡಕ್ಕೆ ಮರಳಿದ್ದಾರೆ.
ಜನವರಿ 30 ರಿಂದ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಪಂದ್ಯಕ್ಕೆ ರಾಜ್ಯ ತಂಡವನ್ನು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಪ್ರಕಟಿಸಿದೆ. ಟೂರ್ನಿಯಲ್ಲಿ ಎಲೈಟ್ ಸಿ ಗ್ರೂಪ್‌ನಲ್ಲಿರುವ ಕರ್ನಾಟಕ ತಂಡ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ. 6 ಪಂದ್ಯಗಳಲ್ಲಿ ಮೂರು ಗೆಲುವುಗಳೊಂದಿಗೆ ಹರಿಯಾಣ ತಂಡ ಮೊದಲ ಸ್ಥಾನದಲ್ಲಿದ್ದರೆ, ಕೇರಳವು 2 ಅಂಕ ಪಡೆದು ದ್ವಿತೀಯ ಸ್ಥಾನ ಪಡೆದಿದೆ. ಪಂಜಾಬ್ ವಿರುದ್ಧದ ಕಳೆದ ಪಂದ್ಯದಲ್ಲಿ ಗೆಲುವು ಸಾಧಿಸಿದ ಬಳಿಕ ಕರ್ನಾಟಕವು 19 ಅಂಕಗಳೊಂದಿಗೆ ಗ್ರೂಪ್‌ನಲ್ಲಿ 3ನೇ ಸ್ಥಾನ ಗಿಟ್ಟಿಸಿಕೊಂಡಿದೆ.
ಇದನ್ನೂ ಓದಿ: 73 ವರ್ಷಗಳ ನಂತರ ಟೆಸ್ಟ್ ಕ್ರಿಕೆಟ್ನಲ್ಲಿ ದೊಡ್ಡ ದಾಖಲೆ ಬರೆದ ಪಾಕ್ ಬೌಲರ್!
ಕರ್ನಾಟಕ ತಂಡ ಹೀಗಿದೆ: ಮಯಾಂಕ್ ಅಗರ್ವಾಲ್ (ನಾಯಕ), ಶ್ರೇಯಸ್ ಗೋಪಾಲ್ (ಉಪ ನಾಯಕ), ಕೆ.ಎಲ್.ರಾಹುಲ್, ದೇವದತ್ ಪಡಿಕ್ಕಲ್, ಅನೀಶ್ ಕೆ.ವಿ., ಸ್ಮರಣ್ ಆರ್, ಶ್ರೀಜಿತ್ ಕೆ.ಎಲ್. (ವಿ.ಕೀ), ಅಭಿನವ್ ಮನೋಹರ್, ಹಾರ್ದಿಕ್ ರಾಜ್, ಪ್ರಸಿದ್ಧ್ ಕೃಷ್ಣ, ವಿದ್ವತ್ ಕಾವೇರಪ್ಪ, ಕೌಶಿಕ್ ವಿ., ಅಭಿಲಾಷ್ ಶೆಟ್ಟಿ, ಯಶೋವರ್ಧನ್ ಪರಾಂತಪ್, ನಿಕಿನ್ ಜೋಸ್, ಸುಜಯ್ ಸತೇರಿ (ವಿ.ಕೀ), ಮೊಹ್ಸಿನ್ ಖಾನ್.
ಇದನ್ನೂ ಓದಿ: ತಿಲಕ್ ವರ್ಮಾ ಏಕಾಂಗಿ ಹೋರಾಟ: 7 ವರ್ಷದ ಬಳಿಕ ಗೆದ್ದ ಭಾರತ!