ನವದೆಹಲಿ: ಟೀಂ ಇಂಡಿಯಾದ ಸ್ಟಾರ್ ಕ್ರಿಕೆಟಿಗ ಕೆಎಲ್ ರಾಹುಲ್ ಕುರಿತು ದೊಡ್ಡ ಸುದ್ದಿಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ವಾಸ್ತವವಾಗಿ, ಇನ್ಸ್ಟಾಗ್ರಾಮ್ ಪೋಸ್ಟ್ ವೈರಲ್ ಆಗುತ್ತಿದ್ದು, ಇದರಲ್ಲಿ ಕೆಎಲ್ ರಾಹುಲ್ ಅವರ ನಿವೃತ್ತಿ ಪಡೆದ ಬಗ್ಗೆ ಬರೆಯಲಾಗಿದೆ. ಈ ಪೋಸ್ಟ್ ನೋಡಿದ ಅಭಿಮಾನಿಗಳು ಒಂದು ಕ್ಷಣಕ್ಕೆ ಶಾಕ್ ಆಗಿದ್ದಾರೆ. ಕೆಎಲ್ ರಾಹುಲ್ ಏಕಾಏಕಿ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದು ಯಾಕೆ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಕೆಎಲ್ ರಾಹುಲ್ ಹೆಸರಿನ ಪೋಸ್ಟ್ ಅಸಲಿಯೇ ಅಥವಾ ನಕಲಿಯೇ ಎಂಬ ಪ್ರಶ್ನೆಗಳು ಹುಟ್ಟಿಕೊಂಡಿವೆ. ಈ ಸಂಪೂರ್ಣ ಸುದ್ದಿಯ ಸತ್ಯಾಸತ್ಯತೆ ಏನು ಎಂದು ಈ ಸುದ್ದಿಯಲ್ಲಿ ತಿಳಿಯಿರಿ.
KL Rahul Announced His Retirement From International Cricket
— Sai Adabala (@adabala_d) August 22, 2024
All the best for new journey #KLrahul pic.twitter.com/PTLqo8IsLy
ಗುರುವಾರ ರಾತ್ರಿ ಸಾಮಾಜಿಕ ಜಾಲತಾಣಗಳಲ್ಲಿ ಕೆಎಲ್ ನಿವೃತ್ತಿ ಕುರಿತು ಪೋಸ್ಟ್ ವೈರಲ್ ಆಗತೊಡಗಿದೆ. ಇದರಲ್ಲಿ ಕೆಎಲ್ ರಾಹುಲ್ ನಿವೃತ್ತಿ ಘೋಷಿಸಿರುವುದಾಗಿ ಬರೆಯಲಾಗಿದೆ. ಪೋಸ್ಟ್ನಲ್ಲಿ, "ನಾನು ವೃತ್ತಿಪರ ಕ್ರಿಕೆಟ್‌ನಿಂದ ನಿವೃತ್ತಿ ಹೊಂದಲು ನಿರ್ಧರಿಸಿದ್ದೇನೆ. ಈ ನಿರ್ಧಾರವು ಸುಲಭವಲ್ಲ, ಏಕೆಂದರೆ ಅನೇಕ ವರ್ಷಗಳಿಂದ ಕ್ರಿಕೆಟ್ ನನ್ನ ಜೀವನದ ಪ್ರಮುಖ ಭಾಗವಾಗಿದೆ. ನನ್ನ ವೃತ್ತಿಜೀವನದುದ್ದಕ್ಕೂ ನನ್ನ ಕುಟುಂಬ, ಸ್ನೇಹಿತರು, ಸಹ ಆಟಗಾರರು ಮತ್ತು ಅಭಿಮಾನಿಗಳಿಂದ ನಾನು ಪಡೆದ ಬೆಂಬಲ ಮತ್ತು ಪ್ರೋತ್ಸಾಹಕ್ಕೆ ನಾನು ತುಂಬಾ ಕೃತಜ್ಞನಾಗಿದ್ದೇನೆ".
"ಮೈದಾನದ ಒಳಗೆ ಮತ್ತು ಹೊರಗೆ ನಾನು ಗಳಿಸಿದ ಅನುಭವಗಳು ಮತ್ತು ನೆನಪುಗಳು ನಿಜವಾಗಿಯೂ ಬೆಲೆಕಟ್ಟಲಾಗದವು. ನನ್ನ ದೇಶವನ್ನು ಪ್ರತಿನಿಧಿಸಿದಕ್ಕಾಗಿ ಮತ್ತು ಪ್ರತಿಭಾವಂತ ವ್ಯಕ್ತಿಗಳೊಂದಿಗೆ ಆಡಿದಕ್ಕೆ ಹೆಮ್ಮೆಯಿದೆ. ಭವಿಷ್ಯದ ಹೊಸ ಅಧ್ಯಾಯದ ಬಗ್ಗೆ ನಾನು ಉತ್ಸುಕನಾಗಿದ್ದು, ನಾನು ಆಟದಲ್ಲಿ ಕಳೆದ ಸಮಯವನ್ನು ಪ್ರೀತಿಸುತ್ತೇನೆ. ಈ ಅದ್ಭುತ ಪ್ರಯಾಣದ ಭಾಗವಾಗಿದ್ದಕ್ಕಾಗಿ ಎಲ್ಲರಿಗೂ ಧನ್ಯವಾದಗಳು" ಎಂದು ಬರೆದಿರುವ ಪೋಸ್ಟ್ ವೈರಲ್ ಆಗಿದೆ.
ವಾಸ್ತವವಾಗಿ, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ಈ ಪೋಸ್ಟ್ ಸಂಪೂರ್ಣ ನಕಲಿಯಾಗಿದೆ. ಆದರೆ ಇದರ ನಡುವೆಯೇ ರಾಹುಲ್ ತಮ್ಮ ಅಧಿಕೃತ ಖಾತೆಯಿಂದ ಪೋಸ್ಟ್ವೊಂದನ್ನು ಹಂಚಿಕೊಂಡಿದ್ದಾರೆ. ಪೋಸ್ಟ್ನಲ್ಲಿ "ಮಹತ್ವದ ವಿಷಯವೊಂದನ್ನು ಘೋಷಿಸಬೇಕಿದೆ. ನಿರೀಕ್ಷಿಸಿರಿ...." ಎಂದು ಬರೆದುಕೊಂಡಿದ್ದಾರೆ. ರಾಹುಲ್ ಅವರ ಈ ಪೋಸ್ಟ್ನಿಂದ ಅಭಿಮಾನನಿಗಳಲ್ಲಿ ಕುತೂಹಲ ಹೆಚ್ಚಿಸಿದೆ.
ಇದನ್ನೂ ಓದಿ: ಲೌಸನ್ನೆ ಡೈಮಂಡ್ ಲೀಗ್: 89.49 ಮೀಟರ್ ಜಾವೆಲಿನ್ ಎಸೆದು ಎರಡನೇ ಸ್ಥಾನ ಪಡೆದ ನೀರಜ್ ಚೋಪ್ರಾ - NEERAJ CHOPRA