ರಾಮನಗರ(ಉತ್ತರಾಖಂಡ): ಉತ್ತರಾಖಂಡದ ಅಲ್ಮೋರಾ ಜಿಲ್ಲೆಯವರಾದ ಲಕ್ಷ್ಯ ಸೇನ್, ಒಲಿಂಪಿಕ್ ಬ್ಯಾಡ್ಮಿಂಟನ್‌ನಲ್ಲಿ ಕ್ವಾರ್ಟರ್ ಫೈನಲ್ ಪಂದ್ಯ ಗೆದ್ದು ಸೆಮಿಫೈನಲ್ ಪ್ರವೇಶಿಸುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ. ಬ್ಯಾಡ್ಮಿಂಟನ್‌ನಲ್ಲಿ ಸೆಮಿಫೈನಲ್ ತಲುಪಿದ ಮೊದಲ ಭಾರತೀಯ ಷಟ್ಲರ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ. ಲಕ್ಷ್ಯ ಸೇನ್ ಸಾಧನೆಯಿಂದ ತವರೂರಿನಲ್ಲಿ ಸಂಭ್ರಮದ ವಾತಾವರಣ ಮನೆ ಮಾಡಿದೆ.
ಮೂಲತಃ ಅಲ್ಮೋರಾದ ಬದ್ರೇಶ್ವರ ವಾರ್ಡ್‌ನ ನಿವಾಸಿ ಡಿ.ಕೆ.ಸೇನ್ ಅವರ ಪುತ್ರ ಲಕ್ಷ್ಯ ಸೇನ್ ಒಲಿಂಪಿಕ್ಸ್ ಬ್ಯಾಡ್ಮಿಂಟನ್‌ನಲ್ಲಿ ಎಲ್ಲರೂ ಹುಬ್ಬೇರಿಸುವಂತೆ ಪ್ರದರ್ಶನ ತೋರಿ ಸೆಮಿಫೈನಲ್ ತಲುಪಿದ್ದಾರೆ. ಇದಕ್ಕೂ ಮೊದಲು ಸ್ಪೇನ್‌ನಲ್ಲಿ ನಡೆದ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಕಂಚು, ದೆಹಲಿಯಲ್ಲಿ ನಡೆದ ಇಂಡಿಯಾ ಓಪನ್‌ನಲ್ಲಿ ಚಿನ್ನ, ಜರ್ಮನ್ ಓಪನ್‌ನಲ್ಲಿ ಬೆಳ್ಳಿ, ಆಲ್ ಇಂಗ್ಲೆಂಡ್ ಟೂರ್ನಿಯಲ್ಲಿ ಬೆಳ್ಳಿ ಮತ್ತು ಥಾಮಸ್ ಕಪ್‌ನಲ್ಲಿ ಚಿನ್ನದ ಪದಕ ಗೆದ್ದಿದ್ದು ಈಗಾಗಲೇ ಹಲವು ದಾಖಲೆಗಳನ್ನು ನಿರ್ಮಿಸಿದ್ದಾರೆ.
ನಿನ್ನೆ ನಡೆದ ಕ್ವಾರ್ಟರ್ ಫೈನಲ್‌ನಲ್ಲಿ ಚೈನೀಸ್ ತೈಪೆಯ ಚೌ ಟಿಯೆನ್ ಚೌ ಅವರನ್ನು 2-1 ಸೆಟ್‌ಗಳಿಂದ ಸೋಲಿಸುವ ಮೂಲಕ ಬ್ಯಾಡ್ಮಿಂಟನ್ ಸಿಂಗಲ್ಸ್ ಸೆಮಿಫೈನಲ್‌ಗೆ ಪ್ರವೇಶಿಸಿದರು.
ಕ್ರೀಡೆಯಲ್ಲಿನ ಅತ್ಯುತ್ತಮ ಪ್ರದರ್ಶನಕ್ಕಾಗಿ ಲಕ್ಷ್ಯ ಸೇನ್ ಅರ್ಜುನ ಪ್ರಶಸ್ತಿಯನ್ನೂ ಪಡೆದಿದ್ದಾರೆ.
ಇದನ್ನೂ ಓದಿ: ಕ್ವಾರ್ಟರ್ ಫೈನಲ್ಗೆ ಲಗ್ಗೆ ಇಟ್ಟ ಭಾರತ, ಮುಂದಿನ ಪಂದ್ಯ ಯಾರ ವಿರುದ್ಧ? - paris olympics 2024