ಜೈಪುರ (ರಾಜಸ್ಥಾನ): ಇಂಡಿಯನ್ ಪ್ರೀಮಿಯರ್ ಲೀಗ್ 17ನೇ ಆವೃತ್ತಿಯ ನಾಲ್ಕನೇ ಪಂದ್ಯ ಇಂದು ಲಕ್ನೋ ಸೂಪರ್ ಜೈಂಟ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ವಿರುದ್ಧ ನಡೆಯುತ್ತಿದೆ. ಸವಾಯಿ ಮಾನ್ಸಿಂಗ್ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ರಾಜಸ್ಥಾನ ಮೊದಲಿಗೆ ಬ್ಯಾಟಿಂಗ್ ಮಾಡಿ ಲಕ್ನೋ ತಂಡದ ಗೆಲುವಿಗೆ ಬೃಹತ್ ಮೊತ್ತದ ಗುರಿ ನೀಡಿದೆ.
ಐಪಿಎಲ್ 2024 ರ ನಾಲ್ಕನೇ ಪಂದ್ಯವು ಜೈಪುರದ ಸವಾಯಿ ಮಾನ್ ಸಿಂಗ್ ಕ್ರೀಡಾಂಗಣದಲ್ಲಿ ರಾಜಸ್ಥಾನ್ ರಾಯಲ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ನಡುವೆ ನಡೆಯುತ್ತಿದೆ. ರಾಜಸ್ಥಾನಕ್ಕೆ ಗೆಲ್ಲಲು 194 ರನ್‌ಗಳ ಗುರಿ ಇದೆ. ಈ ಪಂದ್ಯದಲ್ಲಿ ರಾಜಸ್ಥಾನ ತಂಡದ ನಾಯಕ ಸಂಜು ಸ್ಯಾಮ್ಸನ್ ಟಾಸ್ ಗೆದ್ದು ಲಕ್ನೋ ವಿರುದ್ಧ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು. ಆರಂಭಿಕ ಆಘಾತ ಎದುರಿಸಿದರೂ ಸಹ ಸಂಜ ಸ್ಯಾಮ್ಸನ್ ಅವರ ಅಬ್ಬರದ 82 ರನ್‌ಗಳ ಬಿರುಗಾಳಿಯ ಇನ್ನಿಂಗ್ಸ್ ಬೃಹತ್ ಸ್ಕೋರ್ದತ್ತ ಕೊಂಡೊಯಿತು. ಒಟ್ನಲ್ಲಿ ನಿಗಿದಿತ 20 ಓವರ್ಗಳಿಗೆ ರಾಜಸ್ಥಾನ 4 ವಿಕೆಟ್ ಕಳೆದುಕೊಂಡು 193 ರನ್ ಗಳಿಸಿತು. ಈ ಮೂಲಕ ಲಕ್ನೋ ಸೂಪರ್ ಜೈಂಟ್ಸ್ ಗೆಲುವಿಗೆ 194 ರನ್‌ಗಳ ಗುರಿ ಇದೆ.
ಸ್ಪೈಡರ್ ಕ್ಯಾಮ್‌ನ ವೈರ್ ಕಟ್: ಇಂಡಿಯನ್ ಪ್ರೀಮಿಯರ್ ಲೀಗ್ 17ನೇ ಆವೃತ್ತಿಯ ನಾಲ್ಕನೇ ಪಂದ್ಯ ಇಂದು ಲಕ್ನೋ ಸೂಪರ್ ಜೈಂಟ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ವಿರುದ್ಧ ನಡೆಯುತ್ತಿದೆ. ಸವಾಯಿ ಮಾನ್ಸಿಂಗ್ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ರಾಜಸ್ಥಾನ ಮೊದಲಿಗೆ ಬ್ಯಾಟಿಂಗ್ ಮಾಡಲು ನಿರ್ಧರಿಸಿತ್ತು. ಈ ವೇಳೆ ಆರ್ಆರ್ ತಂಡದ ಆರಂಭಿಕ ಆಟಗಾರರಾದ ಯಶಸ್ವಿ ಜೈಸ್ವಾಲ್ ಮತ್ತು ಜೋಸ್ ಬಟ್ಲರ್ ಬ್ಯಾಟಿಂಗ್ ಮಾಡಲು ಕಣಕ್ಕಿಳಿದರು.
ಇತ್ತ ಲಕ್ನೋ ತಂಡದ ವೇಗಿ ಮೊಹ್ಸಿನ್ ಖಾನ್ ಎರಡು ಬಾಲ್ ಎಸೆತ ಬಳಿಕ ಪಂದ್ಯ ಸ್ವಲ್ಪ ಸಮಯದವರೆಗೆ ಸ್ಥಗಿತಗೊಂಡಿತು. ಪಂದ್ಯ ನಡೆಯುತ್ತಿದ್ದ ವೇಳೆ ಸ್ಪೈಡರ್ ಕ್ಯಾಮ್‌ನ ತಂತಿ ತುಂಡಾಗಿ ಕೆಳಗೆ ಬಿದ್ದಿತ್ತು. ಹೀಗಾಗಿ ಆ ವೈರ್ ಅನ್ನು ಸರಿಪಡಿಸುವವರೆಗೆ ಪಂದ್ಯವನ್ನು ಕೊಂಚ ಸಮಯದವರೆಗೆ ನಿಲ್ಲಿಸಲಾಗಿತ್ತು.
ತಂಡಗಳು, ರಾಜಸ್ಥಾನ್ ರಾಯಲ್ಸ್: ಯಶಸ್ವಿ ಜೈಸ್ವಾಲ್, ಜೋಸ್ ಬಟ್ಲರ್, ಸಂಜು ಸ್ಯಾಮ್ಸನ್ (w/c), ರಿಯಾನ್ ಪರಾಗ್, ಶಿಮ್ರಾನ್ ಹೆಟ್ಮೆಯರ್, ಧ್ರುವ್ ಜುರೆಲ್, ರವಿಚಂದ್ರನ್ ಅಶ್ವಿನ್, ಸಂದೀಪ್ ಶರ್ಮಾ, ಅವೇಶ್ ಖಾನ್, ಟ್ರೆಂಟ್ ಬೌಲ್ಟ್, ಯುಜ್ವೇಂದ್ರ ಚಹಾಲ್
ಲಕ್ನೋ ಸೂಪರ್ ಜೈಂಟ್ಸ್: ಕೆಎಲ್ ರಾಹುಲ್ (ನಾಯಕ), ಕ್ವಿಂಟನ್ ಡಿ ಕಾಕ್ (ವಿ.ಕೀ), ದೇವದತ್ ಪಡಿಕ್ಕಲ್, ಆಯುಷ್ ಬಡೋನಿ, ಮಾರ್ಕಸ್ ಸ್ಟೋನಿಸ್, ನಿಕೋಲಸ್ ಪೂರನ್, ಕೃನಾಲ್ ಪಾಂಡ್ಯ, ರವಿ ಬಿಷ್ಣೋಯ್, ಮೊಹ್ಸಿನ್ ಖಾನ್, ನವೀನ್-ಉಲ್-ಹಕ್, ಯಶ್ ಠಾಕುರ್.