ETV Bharat / sports

ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕ ಗೆದ್ದ ಅಮನ್​​ಗೆ ಅಭಿನಂದಿಸಿದ ಪ್ರಧಾನಿ ಮೋದಿ: ರಾಷ್ಟ್ರೀಯ ಕುಸ್ತಿ ಕೋಚ್ ಹೇಳಿದ್ದಿಷ್ಟು! - PM Modi congratulates Aman Sehrawat - PM MODI CONGRATULATES AMAN SEHRAWAT

ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕ ಗೆದ್ದ ಅಮನ್ ಸೆಹ್ರಾವತ್​​ಗೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರಾದ ಅಮಿತ್ ಶಾ, ಸಚಿವ ನಿತಿನ್ ಗಡ್ಕರಿ, ಸಚಿವ ಕಿರಣ್ ರಿಜಿಜು ಅಭಿನಂದನೆ ಸಲ್ಲಿಸಿದ್ದಾರೆ.

Aman Sehrawat  PM Modi congratulates Aman Sehrawat  Narendra Modi  Olympic bronze medal
ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕ ಗೆದ್ದ ಅಮನ್​​ಗೆ ಅಭಿನಂದಿಸಿದ ಪ್ರಧಾನಿ ಮೋದಿ (ETV Bharat)
author img

By ANI

Published : Aug 10, 2024, 8:09 AM IST

ಪ್ಯಾರಿಸ್: ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಅಮನ್ ಸೆಹ್ರಾವತ್ ಕಂಚಿನ ಪದಕ ಗೆದ್ದ ನಂತರ, ರಾಷ್ಟ್ರೀಯ ಕುಸ್ತಿ ಕೋಚ್ ಜಗಮಂದರ್ ಸಿಂಗ್ ಪ್ರತಿಕ್ರಿಯಿಸಿ, ''ನಾವು ಚಿನ್ನದ ಪದಕದ ನಿರೀಕ್ಷೆಯಲ್ಲಿದ್ದೆವು. ಆದರೆ, ಮೂರನೇ ಸ್ಥಾನಕ್ಕೆ ತೃಪ್ತಿಪಡಬೇಕಾಯಿತು'' ಎಂದು ಹೇಳಿದರು.

ಒಲಿಂಪಿಕ್ಸ್‌ಗೆ ಪದಾರ್ಪಣೆ ಮಾಡಿದ ಸೆಹ್ರಾವತ್ ಶುಕ್ರವಾರ ಪೋರ್ಟೊ ರಿಕೊದ ಡೇರಿಯನ್ ಕ್ರೂಜ್ ವಿರುದ್ಧ 13-5 ಅಂತರದಲ್ಲಿ ಜಯಗಳಿಸಿ ಪದಕವನ್ನು ಖಚಿತಪಡಿಸಿಕೊಂಡರು. 2024ರ ಪ್ಯಾರಿಸ್ ಒಲಿಂಪಿಕ್ಸ್‌ ಕುಸ್ತಿಯಲ್ಲಿ ಕಂಚಿನ ಪದಕ ಪಡೆದ ಭಾರತದ ಮೊದಲಿಗರಾಗಿ ಗುರುತಿಸಿಕೊಂಡಿದ್ದಾರೆ. ಶುಕ್ರವಾರ ನಡೆದ ಕಂಚಿನ ಪದಕದ ಪಂದ್ಯದಲ್ಲಿ ಅಮನ್ ಅವರ ಪ್ರದರ್ಶನ ಉತ್ತಮವಾಗಿತ್ತು. ನಾವು ಚಿನ್ನದ ನಿರೀಕ್ಷೆಯಲ್ಲಿದ್ದೆವು. ಆದರೆ, ನಾವು ಕಂಚಿಗೆ ತೃಪ್ತಿಪಡಬೇಕಾಯಿತು. ಆದರೆ, ಮುಂಬರುವ ಸಮಯದಲ್ಲಿ ನಾವು ದೇಶಕ್ಕಾಗಿ ಚಿನ್ನದ ಪದಕಗಳನ್ನು ಗೆಲ್ಲುತ್ತೇವೆ ಎಂದು ನಾನು ಭರವಸೆ ನೀಡುತ್ತೇನೆ. ಭವಿಷ್ಯದಲ್ಲಿ ಚಿನ್ನ ಗೆಲ್ಲುತ್ತೇನೆ ಎಂದು ಅಮನ್ ಭರವಸೆ ನೀಡಿದ್ದಾರೆ.

ರಾಷ್ಟ್ರೀಯ ಕುಸ್ತಿ ತರಬೇತುದಾರ ವೀರೇಂದ್ರ ಸಿಂಗ್ ಮಾತನಾಡಿ, ''ಸೆಮಿ-ಫೈನಲ್ ಪಂದ್ಯದ ನಂತರ ಅಮನ್ 4.5 ಕೆಜಿಗಳನ್ನು ಹೆಚ್ಚಿಸಿಕೊಂಡಿದ್ದರು. ಅದನ್ನು ಕಳೆದುಕೊಳ್ಳಲು ಉತ್ತಮ ತರಬೇತಿ ಪಡೆಯುವ ಮೂಲಕ ನಿಯಂತ್ರಣಕ್ಕೆ ತಂದೆವು ಎಂದು ಅವರು ಇದೇ ವೇಳೆ ಬಹಿರಂಗಪಡಿಸಿದರು.

ಪಂದ್ಯದ ಸಮಯದಲ್ಲಿ, ಪೋರ್ಟೊ ರಿಕನ್ ಗ್ರ್ಯಾಪ್ಲರ್ ಆರಂಭದಲ್ಲಿ ಒಂದು ಲೆಗ್ ಹಿಡಿತದೊಂದಿಗೆ ಪಾಯಿಂಟ್ ಗಳಿಸುವ ಮೂಲಕ ಮುನ್ನಡೆ ಸಾಧಿಸಿದರು. ಆದಾಗ್ಯೂ, ಡೇರಿಯನ್ ಕ್ರೂಜ್ ಅವರ ಭುಜಗಳನ್ನು ಗುರಿಯಾಗಿಸಿಕೊಂಡು ಅಂಕಗಳನ್ನು ಗಳಿಸಿದ ಅಮನ್ ಪಂದ್ಯದಲ್ಲಿ ಕಮ್​ಬ್ಯಾಕ್​ ಮಾಡಿದರು. ಡೇರಿಯನ್ ಕ್ರೂಜ್ ಎರಡು-ಪಾಯಿಂಟ್ ನಡೆಸುವುದರೊಂದಿಗೆ ಮುನ್ನಡೆ ಸಾಧಿಸಿದ ನಂತರ, ಅಮನ್ ಮತ್ತೆ ಬಿಗಿಹಿಡಿತ ಸಾಧಿಸಿದರು. 37 ಸೆಕೆಂಡುಗಳು ಉಳಿದಿರುವಾಗ, ಅಮನ್ ಹೆಚ್ಚುವರಿ ಅಂಕಗಳನ್ನು ಪಡೆದರು. ಅಷ್ಟೇ ಅಲ್ಲ ಈ ಸಂದರ್ಭದಲ್ಲಿ ಎದುರಾಳಿ ಇನ್ನೊಂದು ಅಂಕವನ್ನು ಬಿಟ್ಟುಕೊಟ್ಟಿದ್ದರಿಂದ ತಾಂತ್ರಿಕ ಶ್ರೇಷ್ಠತೆಯೊಂದಿಗೆ ಪಂದ್ಯವನ್ನು ಗೆದ್ದರು.

ಅಮನ್ ಸೆಹ್ರಾವತ್​ಗೆ ಅಭಿನಂದಿಸಿದ ಪ್ರಧಾನಿ ಮೋದಿ: ಪ್ಯಾರಿಸ್ ಒಲಿಂಪಿಕ್ಸ್‌ನ ಪುರುಷರ ಫ್ರೀಸ್ಟೈಲ್ 57 ಕೆಜಿ ಕುಸ್ತಿ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ಭಾರತದ ಗ್ರಾಪ್ಲರ್ ಅಮನ್ ಸೆಹ್ರಾವತ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ. ಒಲಿಂಪಿಕ್ಸ್‌ಗೆ ಪದಾರ್ಪಣೆ ಮಾಡಿದ ಸೆಹ್ರಾವತ್ ಶುಕ್ರವಾರ ಪೋರ್ಟೊ ರಿಕೊದ ಡೇರಿಯನ್ ಕ್ರೂಜ್ ವಿರುದ್ಧ 13-5 ಅಂತರದಲ್ಲಿ ಜಯಗಳಿಸಿ ಪದಕವನ್ನು ಖಚಿತಪಡಿಸಿಕೊಂಡರು.

ಸಾಮಾಜಿಕ ಜಾಲತಾಣವಾದ ಎಕ್ಸ್‌ನಲ್ಲಿನ ಪೋಸ್ಟ್‌ನಲ್ಲಿ ಪ್ರಧಾನಿ ಮೋದಿ ಅವರು, ಅಮನ್ ಸೆಹ್ರಾವತ್ ಸಮರ್ಪಣೆ ಮತ್ತು ಪರಿಶ್ರಮವನ್ನು ಶ್ಲಾಘಿಸಿದ್ದಾರೆ. "ನಮ್ಮ ಕುಸ್ತಿಪಟುಗಳ ಬಗ್ಗೆ ತುಂಬಾ ಹೆಚ್ಚು ಹೆಮ್ಮೆ ಎನಿಸುತ್ತದೆ. ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಪುರುಷರ ಫ್ರೀಸ್ಟೈಲ್ 57 ಕೆಜಿಯಲ್ಲಿ ಕಂಚಿನ ಪದಕ ಗೆದ್ದಿದ್ದಕ್ಕಾಗಿ ಅಮನ್ ಸೆಹ್ರಾವತ್ ಅವರಿಗೆ ಅಭಿನಂದನೆಗಳು. ಅವರ ಸಮರ್ಪಣೆ ಮತ್ತು ಪರಿಶ್ರಮವು ಸ್ಪಷ್ಟವಾಗಿ ಗೋಚರಿಸುತ್ತದೆ. ಇಡೀ ರಾಷ್ಟ್ರವು ಈ ಅದ್ಭುತ ಸಾಧನೆಯ ಸಂಭ್ರಮಾಚರಣೆ ಆಚರಿಸುತ್ತದೆ" ಎಂದು ಪ್ರಧಾನಿ ಮೋದಿ ಗುಣಗಾನ ಮಾಡಿದ್ದಾರೆ.

ಅಮನ್ ಸಾಧನೆ ಶ್ಲಾಘಿಸಿದ ಅಮಿತ್ ಶಾ: ''ಅಮನ್ ನಿಮಗೆ ಅಭಿನಂದನೆಗಳು. ಗಮನಾರ್ಹ ಪರಿಶ್ರಮ ಮತ್ತು ಶಕ್ತಿಯಿಂದ ನೀವು ಪ್ಯಾರಿಸ್ ಒಲಿಂಪಿಕ್ಸ್‌ನ ಕುಸ್ತಿ ಪಂದ್ಯದಲ್ಲಿ ಭಾರತಕ್ಕೆ ಕಂಚಿನ ಪದಕವನ್ನು ಪಡೆದುಕೊಂಡಿದ್ದೀರಿ. ನಿಮ್ಮ ಸಾಧನೆಯ ಬಗ್ಗೆ ರಾಷ್ಟ್ರವು ಹೆಮ್ಮೆಪಡುತ್ತಿದೆ" ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಎಕ್ಸ್​ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.

ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ, ಅಮನ್ ಸಾಧನೆಗೆ ಹೆಮ್ಮೆ ವ್ಯಕ್ತಪಡಿಸಿದರು. "ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ 57 ಕೆಜಿ ಪುರುಷರ ಫ್ರೀಸ್ಟೈಲ್‌ನಲ್ಲಿ ಕಂಚಿನ ಪದಕ ಗೆದ್ದಿದ್ದಕ್ಕಾಗಿ ಅಮನ್ ಸೆಹ್ರಾವತ್ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು! ನಿಮ್ಮ ಶ್ರದ್ಧೆ ಮತ್ತು ಸಂಕಲ್ಪ ವಿಶ್ವ ವೇದಿಕೆಯಲ್ಲಿ ಕೀರ್ತಿ ತಂದಿದೆ. ನಿಮ್ಮ ಗಮನಾರ್ಹ ಸಾಧನೆಯೊಂದಿಗೆ ನೀವು ರಾಷ್ಟ್ರವನ್ನು ಹೆಮ್ಮೆಪಡುವಂತೆ ಮಾಡಿದ್ದೀರಿ. ಅಸಂಖ್ಯಾತ ಇತರರಿಗೆ ಸ್ಫೂರ್ತಿ ನೀಡಿದ್ದೀರಿ" ಎಂದು ನಿತಿನ್ ಗಡ್ಕರಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ನಿಮ್ಮ ಗೆಲುವು ಕಠಿಣ ಪರಿಶ್ರಮ ಸಾಕ್ಷಿ-ಕಿರಣ್ ರಿಜಿಜು: ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು, ಅಮನ್ ಅವರನ್ನು ಅಭಿನಂದಿಸಿದ್ದಾರೆ. " ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ 57 ಕೆಜಿ ಪುರುಷರ ಫ್ರೀಸ್ಟೈಲ್‌ನಲ್ಲಿ ಕಂಚಿನ ಪದಕ ಗೆದ್ದಿದ್ದಕ್ಕಾಗಿ ಅಮನ್ ಸೆಹ್ರಾವತ್ ಅವರನ್ನು ನಾನು ಅಭಿನಂದಿಸುತ್ತೇನೆ! ಭಾರತಕ್ಕಾಗಿ ಈ ಗಮನಾರ್ಹ ಸಾಧನೆಯು ನಿಮ್ಮ ಅಸಾಧಾರಣ ಪರಿಶ್ರಮ ಮತ್ತು ಪ್ರತಿಭೆಯನ್ನು ಪ್ರತಿಬಿಂಬಿಸುತ್ತದೆ. ನಿಮ್ಮ ಗೆಲುವು ಕಠಿಣ ಪರಿಶ್ರಮ ಮತ್ತು ಸಮರ್ಪಣೆಗೆ ಸಾಕ್ಷಿಯಾಗಿದೆ" ಎಕ್ಸ್​ನಲ್ಲಿ ಬರೆದಿದ್ದಾರೆ.

ಇದನ್ನೂ ಓದಿ: ಭಾರತಕ್ಕೆ ಮತ್ತೊಂದು ಕಂಚು: 57 ಕೆಜಿ ಫ್ರೀಸ್ಟೈಲ್ ಕುಸ್ತಿ ಸ್ಪರ್ಧೆಯಲ್ಲಿ ಅಮನ್ ಸೆಹ್ರಾವತ್​​ಗೆ ಪ್ರಶಸ್ತಿಯ ಗರಿ - Aman Sehrawat beat Darian

ETV Bharat Logo

Copyright © 2025 Ushodaya Enterprises Pvt. Ltd., All Rights Reserved.