ಎರಡನೇ ಬಾರಿಗೆ ಟಿ-20 ವಿಶ್ವಕಪ್ ಗೆದ್ದ ಭಾರತ ತಂಡಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವು ರಾಜ್ಯ ನಾಯಕರು ಅಭಿನಂದನೆ ಸಲ್ಲಿಸಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ಫೈನಲ್ ಪಂದ್ಯದಲ್ಲಿ 7 ರನ್ಗಳ ಜಯ ಸಾಧಿಸಿದ ಭಾರತ, 11 ವರ್ಷಗಳ ಬಳಿಕ ಐಸಿಸಿ ಟ್ರೋಫಿ ಗೆದ್ದಿತು.
ವಿಶ್ವಕಪ್ ವಿಜೇತ ಭಾರತ ತಂಡಕ್ಕೆ ಅಭಿನಂದನೆಗಳು.
— Siddaramaiah (@siddaramaiah) June 29, 2024
ನಿರ್ಣಾಯಕ ಹಂತದಲ್ಲಿ ನಮ್ಮವರು ತೋರಿದ ಸಂಘಟಿತ ಪ್ರದರ್ಶನ ಪಂದ್ಯದ ದಿಕ್ಕನ್ನೇ ಬದಲಿಸಿತು. ಇಡೀ ಪಂದ್ಯಾವಳಿಯಲ್ಲಿ ಒಂದು ಪಂದ್ಯವನ್ನೂ ಸೋಲದೆ ಅಜೇಯರಾಗುಳಿದು ವಿಶ್ವಕಪ್ ಟಿ20 ಜಯಿಸಿದ ಭಾರತ ತಂಡದ ಸಾಧನೆ ನಿಜಕ್ಕೂ ಶ್ಲಾಘನೀಯ.
ಒಂದು ಹಂತದಲ್ಲಿ ಗೆಲುವಿನ ಸನಿಹಕ್ಕೆ ಬಂದು ಕಡೇ ಕ್ಷಣದಲ್ಲಿ… pic.twitter.com/cjPR2VrLAj
ಐತಿಹಾಸಿಕ ಕ್ಷಣ- ಸಿದ್ದರಾಮಯ್ಯ: 'ಕ್ರಿಕೆಟ್ ಪ್ರೇಮಿಯಾದ ನನಗೆ ನಮ್ಮವರ ಗೆಲುವು ಅತ್ಯಂತ ಖುಷಿ ಕೊಟ್ಟಿದೆ. ಕೋಟ್ಯಂತರ ಜನರ ಹರಕೆ, ಹಾರೈಕೆಗಳು ಕಡೆಗೂ ಫಲಕೊಟ್ಟಿದೆ. ವಿಶ್ವಕಪ್ ಮರಳಿ ಭಾರತದ ಮಡಿಲು ಸೇರಿದೆ. ನಿರ್ಣಾಯಕ ಹಂತದಲ್ಲಿ ತಂಡ ತೋರಿದ ಸಂಘಟಿತ ಪ್ರದರ್ಶನ ಪಂದ್ಯದ ದಿಕ್ಕನ್ನೇ ಬದಲಿಸಿತು. ಇಡೀ ಪಂದ್ಯಾವಳಿಯಲ್ಲಿ ಒಂದೂ ಸೋಲದೆ ಕಾಣದೆ ಅಜೇಯರಾಗುಳಿದು ವಿಶ್ವಕಪ್ ಟಿ20 ಜಯಿಸಿದ ಭಾರತ ತಂಡದ ಸಾಧನೆ ನಿಜಕ್ಕೂ ಶ್ಲಾಘನೀಯ' ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
'ಒಂದು ಹಂತದಲ್ಲಿ ಗೆಲುವಿನ ಸನಿಹಕ್ಕೆ ಬಂದು ಕಡೇ ಕ್ಷಣದಲ್ಲಿ ಪಂದ್ಯ ಸೋತ ದಕ್ಷಿಣ ಆಫ್ರಿಕಾ ತಂಡದ ಆಟವೂ ಮೆಚ್ಚುಗೆಗೆ ಅರ್ಹವಾಗಿದೆ' ಎಂದು ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
What a stellar performance by our Men in Blue in the finals of T20 World Cup 2024! Your dedication and perseverance was evident throughout the tournament and by sealing this amazing win you have made our country proud.
— DK Shivakumar (@DKShivakumar) June 29, 2024
Many congratulations!#INDvSA#T20WorldCup pic.twitter.com/2ToS6eqKJW
ಅದ್ಭುತ ಪ್ರದರ್ಶನ- ಡಿ.ಕೆ.ಶಿವಕುಮಾರ್: ಟಿ-20 ವಿಶ್ವಕಪ್ 2024ರ ಫೈನಲ್ಸ್‌ನಲ್ಲಿ ಭಾರತ ತಂಡದ್ದು ಅದ್ಭುತ ಪ್ರದರ್ಶನ. ಪಂದ್ಯಾವಳಿಯುದ್ದಕ್ಕೂ ತಂಡ ತೋರಿದ ಸಮರ್ಪಣೆ ಮತ್ತು ಪರಿಶ್ರಮ ಸ್ಪಷ್ಟವಾಗಿತ್ತು. ಈ ಅದ್ಭುತ ಗೆಲುವನ್ನು ಸಾಧಿಸುವ ಮೂಲಕ ಇಡಿ ದೇಶವೇ ಹೆಮ್ಮೆಪಡುವಂತೆ ಮಾಡಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಗುಣಗಾನ ಮಾಡಿದ್ದಾರೆ.
Congratulations Team India! You've made the nation proud by lifting the #T20WorldCup trophy! Your exceptional skill, teamwork, and dedication have paid off. Celebrations are in order! #T20WorldCupWinners #IndianCricketTeam #Champions #INDvSA pic.twitter.com/whMOexX1O3
— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) June 29, 2024
'ಅನೇಕ ರೋಚಕ ತಿರುವುಗಳ ಫೈನಲ್ ಪಂದ್ಯ ಭಾರತೀಯರೆಲ್ಲರನ್ನೂ ತುದಿಗಾಲ ಮೇಲೆ ನಿಲ್ಲಿಸಿತ್ತು. ಎಲ್ಲರ ಆಕಾಂಕ್ಷೆ, ನಿರೀಕ್ಷೆಯಂತೆ ತಂಡ ಗೆದ್ದು ಬೀಗಿದೆ. ಹೆಮ್ಮೆಯ ಕ್ರಿಕೆಟ್ ತಂಡಕ್ಕೆ ಶುಭವಾಗಲಿ' ಎಂದು ಹಾರೈಸಿದ್ದಾರೆ.
ಟಿ20 ವಿಶ್ವಕಪ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ರೋಚಕ ಗೆಲುವು ಸಾಧಿಸಿದ ರೋಹಿತ್ ಶರ್ಮ ನೇತೃತ್ವದ ಭಾರತ ತಂಡಕ್ಕೆ ಶುಭಾಶಯಗಳು ಮತ್ತು ಸಮಸ್ತ ಭಾರತೀಯರ ಪರವಾಗಿ ಅಭಿನಂದನೆಗಳು.
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) June 29, 2024
ಅನೇಕ ರೋಚಕ ತಿರುವುಗಳ ಫೈನಲ್ ಪಂದ್ಯ ಭಾರತೀಯರೆಲ್ಲರನ್ನೂ ತುದಿಗಾಲ ಮೇಲೆ ನಿಲ್ಲಿಸಿತ್ತು. ಎಲ್ಲರ ಆಕಾಂಕ್ಷೆ, ನಿರೀಕ್ಷೆಯಂತೆ ಭಾರತ ಗೆದ್ದು ಬೀಗಿದೆ.… pic.twitter.com/sHxANUdIT1
'ಅಭಿನಂದನೆಗಳು ಟೀಮ್ ಇಂಡಿಯಾ. ಟಿ-20ವಿಶ್ವಕಪ್ ಟ್ರೋಫಿ ಎತ್ತುವ ಮೂಲಕ ದೇಶವೇ ಹೆಮ್ಮೆಪಡುವಂತೆ ಮಾಡಿದ್ದೀರಿ. ನಿಮ್ಮ ಅಸಾಧಾರಣ ಕೌಶಲ್ಯ, ಟೀಮ್ ವರ್ಕ್ ಮತ್ತು ಸಮರ್ಪಣೆಗಳು ಫಲ ನೀಡಿವೆ' ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಎಕ್ಸ್ ಖಾತೆಯಲ್ಲಿ ಹೇಳಿದ್ದಾರೆ.
ಇದನ್ನೂ ಓದಿ: ವಿಶ್ವ ಚಾಂಪಿಯನ್ ಭಾರತಕ್ಕೆ ಅಭಿನಂದನೆಗಳ ಅಭ್ಯಂಜನ: ಯಾರು, ಏನಂದ್ರು? - T20 World Cup