ಚಂಡೀಗಢ: ಇಲ್ಲಿನ ಮುಲ್ಲನ್ಪುರದ ಮಹಾರಾಜ ಯದ್ವಿಂದರ್ ಸಿಂಗ್ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್ನ (ಐಪಿಎಲ್) 37ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಮತ್ತು ಪಂಜಾಬ್ ಕಿಂಗ್ಸ್ ಎದುರಾಗಿವೆ.
ಟಾಸ್ ಗೆದ್ದ ಪಂಜಾಬ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಸತತ ಸೋಲುಗಳಿಂದ ಕಂಗೆಟ್ಟಿರುವ ಪಂಜಾಬ್ ಪಾಯಿಂಟ್ ಪಟ್ಟಿಯಲ್ಲಿ 4 ಅಂಕಗಳೊಂದಿಗೆ ಕೊನೆಯಿಂದ 2ನೇ ಸ್ಥಾನದಲ್ಲಿದೆ. ಇತ್ತ ಗುಜರಾತ್ ಕೂಡ ಇದೇ ಹಾದಿಯಲ್ಲಿದ್ದು, 6 ಅಂಕಗಳೊಂದಿಗೆ 8ನೇ ಕ್ರಮಾಂಕದಲ್ಲಿದೆ. ಇತ್ತಂಡಗಳಿಗೆ ಈ ಪಂದ್ಯ ಗೆಲ್ಲುವುದು ಅನಿವಾರ್ಯವಾಗಿದೆ.
ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ಪರವಾಗಿ ನಾಯಕ ಶುಭ್ಮನ್ ಗಿಲ್, ಡೇವಿಡ್ ಮಿಲ್ಲರ್, ರಶೀದ್ ಖಾನ್ ಸಿಡಿಯಬೇಕಿದೆ. ಇಂದಿನ ಪಂದ್ಯದಲ್ಲಿ ಒಂದು ಬದಲಾವಣೆ ಮಾಡಲಾಗಿದೆ. ಆಫ್ಘಾನಿಸ್ತಾನದ ಆಲ್ರೌಂಡರ್ ಆಟಗಾರ ಅಜ್ಮತುಲ್ಲಾ ಒಮರ್ಜಾಯ್ ತಂಡ ಸೇರಿಕೊಂಡಿದ್ದಾರೆ. ಪಂಜಾಬ್ನಲ್ಲಿ ಯಾವುದೇ ಬದಲಾವಣೆ ಇಲ್ಲ.
ತಂಡಗಳು ಇಂತಿವೆ- ಗುಜರಾತ್ ಟೈಟಾನ್ಸ್: ವೃದ್ಧಿಮಾನ್ ಸಹಾ, ಶುಭ್ಮನ್ ಗಿಲ್(ಸಿ), ಡೇವಿಡ್ ಮಿಲ್ಲರ್, ಅಜ್ಮತುಲ್ಲಾ ಒಮರ್ಜಾಯ್, ಶಾರುಖ್ ಖಾನ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ರವಿ ಶ್ರೀನಿವಾಸನ್, ಸಾಯಿ ಕಿಶೋರ್, ನೂರ್ ಅಹ್ಮದ್, ಸಂದೀಪ್ ವಾರಿಯರ್, ಮೋಹಿತ್ ಶರ್ಮಾ.
ಪಂಜಾಬ್ ಕಿಂಗ್ಸ್: ಸ್ಯಾಮ್ ಕರ್ರನ್ (ನಾಯಕ), ಪ್ರಭ್‌ಸಿಮ್ರಾನ್ ಸಿಂಗ್, ರಿಲೀ ರೊಸೊವ್, ಲಿಯಾಮ್ ಲಿವಿಂಗ್‌ಸ್ಟೋನ್, ಶಶಾಂಕ್ ಸಿಂಗ್, ಜಿತೇಶ್ ಶರ್ಮಾ, ಅಶುತೋಷ್ ಶರ್ಮಾ, ಹರ್‌ಪ್ರೀತ್ ಬ್ರಾರ್, ಹರ್ಷಲ್ ಪಟೇಲ್, ಕಗಿಸೊ ರಬಾಡ, ಅರ್ಷ್‌ದೀಪ್ ಸಿಂಗ್.
ಇದನ್ನೂ ಓದಿ: ಆರ್ಸಿಬಿ ಬೌಲರ್ಗಳಿಗೆ ಬೆವರಿಳಿಸಿದ ಕೆಕೆಆರ್: ಡು ಪ್ಲೆಸಿಸ್ ಪಡೆಗೆ 223 ರನ್ ಗೆಲುವಿನ ಗುರಿ - RCB vs KKR match