ETV Bharat / sports

ಮೂರನೇ ಟೆಸ್ಟ್​ಗೆ ವಿರಾಟ್​ ಬರುವರೇ?: ದ್ರಾವಿಡ್​ ಹೀಗೇಕೆ ಹೇಳಿದ್ರು!? - ಮೂರನೇ ಟೆಸ್ಟ್​ಗೆ ವಿರಾಟ್​

ಎರಡನೇ ಟೆಸ್ಟ್‌ನಲ್ಲಿ ಇಂಗ್ಲೆಂಡ್‌ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ ನಂತರ ಸುದ್ದಿಗೋಷ್ಠಿಯಲ್ಲಿ ಟೀಮ್ ಇಂಡಿಯಾದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಮೂರನೇ ಟೆಸ್ಟ್‌ನಲ್ಲಿ ವಿರಾಟ್ ಕೊಹ್ಲಿ ಲಭ್ಯತೆಯ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ.

virat kohli  rahul dravid  IND vs ENG test match  ಮೂರನೇ ಟೆಸ್ಟ್​ಗೆ ವಿರಾಟ್​ ಮುಖ್ಯ ಕೋಚ್ ರಾಹುಲ್ ದ್ರಾವಿಡ್
ಮೂರನೇ ಟೆಸ್ಟ್​ಗೆ ವಿರಾಟ್​ ಬರುವವರೇ?: ದ್ರಾವಿಡ್​ ಹೀಗೇಕೆ ಹೇಳಿದ್ರು!?
author img

By ETV Bharat Karnataka Team

Published : Feb 6, 2024, 10:43 AM IST

ಹೈದರಾಬಾದ್: ವಿಶಾಖಪಟ್ಟಣಂ ಟೆಸ್ಟ್‌ನಲ್ಲಿ ಅದ್ಭುತ ಗೆಲುವಿನೊಂದಿಗೆ ಭಾರತ 5 ಪಂದ್ಯಗಳ ಸರಣಿಯನ್ನು 1-1 ರಿಂದ ಸಮಬಲಗೊಳಿಸಿದೆ. ಈ ಗೆಲುವಿನೊಂದಿಗೆ ಹೈದರಾಬಾದ್‌ನಲ್ಲಿ ನಡೆದ ಆರಂಭಿಕ ಟೆಸ್ಟ್‌ನಲ್ಲಿ ಇಂಗ್ಲೆಂಡ್ ವಿರುದ್ಧ ಅನುಭವಿಸಿದ ಸೋಲಿಗೆ ಭಾರತ ಸೇಡು ತೀರಿಸಿಕೊಂಡಿದೆ. ಯುವ ಆಟಗಾರರಿಂದ ಕಂಗೊಳಿಸುತ್ತಿರುವ ಟೀಂ ಇಂಡಿಯಾ ಎರಡನೇ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ 106 ರನ್​ಗಳ ಭರ್ಜರಿ ಜಯ ಸಾಧಿಸಿದೆ. ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಅನುಪಸ್ಥಿತಿಯಲ್ಲಿ ಭಾರತ ಮೊದಲ ಎರಡು ಟೆಸ್ಟ್ ಪಂದ್ಯಗಳನ್ನು ಆಡಿತ್ತು.

ಪಂದ್ಯದ ನಂತರ ಸುದ್ದಿಗೋಷ್ಠಿಯಲ್ಲಿ ಟೀಂ ಇಂಡಿಯಾದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ರಾಜ್‌ಕೋಟ್‌ನಲ್ಲಿ ನಡೆಯಲಿರುವ ಮೂರನೇ ಟೆಸ್ಟ್‌ನಲ್ಲಿ ವಿರಾಟ್ ಕೊಹ್ಲಿ ಮರಳುವ ಬಗ್ಗೆ ಮಾಹಿತಿ ನೀಡಿದ್ದಾರೆ. ರಾಜ್‌ಕೋಟ್ ಟೆಸ್ಟ್‌ಗೆ ಕೊಹ್ಲಿ ಲಭ್ಯತೆಯ ಬಗ್ಗೆ ಕೇಳಿದಾಗ, ದ್ರಾವಿಡ್ ಅವರು ಆಯ್ಕೆದಾರರಿಗೆ ಪ್ರಶ್ನೆಯನ್ನು ಬಿಟ್ಟರು. ಮುಂದಿನ 3 ಪಂದ್ಯಗಳಿಗೆ ತಂಡವನ್ನು ಆಯ್ಕೆ ಮಾಡುವಾಗ ಆಯ್ಕೆದಾರರು ಇದಕ್ಕೆ ಅತ್ಯುತ್ತಮ ಉತ್ತರ ನೀಡಲು ಸಾಧ್ಯವಾಗುತ್ತದೆ ಎಂದು ದ್ರಾವಿಡ್​ ಹೇಳಿದರು.

ವೈಯಕ್ತಿಕ ಕಾರಣಗಳಿಂದ ಕೊಹ್ಲಿ ಮೊದಲ ಎರಡು ಪಂದ್ಯಗಳಲ್ಲಿ ಆಡಲು ಸಾಧ್ಯವಾಗಲಿಲ್ಲ. ಇಂಗ್ಲೆಂಡ್ ವಿರುದ್ಧದ ಮೊದಲ ಎರಡು ಟೆಸ್ಟ್ ಪಂದ್ಯಗಳಿಗೆ ಆಯ್ಕೆಯಾಗಿರುವ ಟೀಂ ಇಂಡಿಯಾದಲ್ಲಿ ವಿರಾಟ್ ಹೆಸರು ಸೇರಿತ್ತು. ಆದರೆ, ಪಂದ್ಯಕ್ಕೆ ಕೆಲವು ದಿನಗಳ ಮೊದಲು, ಅವರು ವೈಯಕ್ತಿಕ ಕಾರಣಗಳನ್ನು ಉಲ್ಲೇಖಿಸಿ ಮೊದಲ ಎರಡು ಟೆಸ್ಟ್‌ಗಳಿಂದ ತಮ್ಮ ಹೆಸರನ್ನು ಹಿಂತೆಗೆದುಕೊಂಡರು. ಬಿಸಿಸಿಐ ಕೂಡ ಯಾವುದೇ ನಿರ್ದಿಷ್ಟ ಕಾರಣ ನೀಡದೇ ಅವರ ಸ್ಥಾನವನ್ನು ಬದಲಿಗೊಳಿಸಿ ಪ್ರಕಟಿಸಿತು. ಮೊದಲ ಟೆಸ್ಟ್‌ನಲ್ಲಿ ಭಾರತ 28 ರನ್‌ಗಳ ಸೋಲಿನ ನಂತರ ವಿರಾಟ್ ಅವರ ಅಲಭ್ಯತೆ ತಂಡಕ್ಕೆ ಕಾಡುತ್ತಿತ್ತು.

ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೂರನೇ ಟೆಸ್ಟ್ ಪಂದ್ಯ ಫೆಬ್ರವರಿ 15 ರಿಂದ ರಾಜ್‌ಕೋಟ್‌ನಲ್ಲಿ ನಡೆಯಲಿದೆ. ಈ ಟೆಸ್ಟ್‌ನಲ್ಲಿ ವಿರಾಟ್ ಕೊಹ್ಲಿ ತಂಡಕ್ಕೆ ಮರಳುತ್ತಾರೋ ಇಲ್ಲವೋ ಎಂಬುದನ್ನು ಕಾದು ನೋಡಬೇಕಿದೆ. ಮುಂದಿನ 3 ಟೆಸ್ಟ್‌ಗಳಿಗೆ ಬಿಸಿಸಿಐ ತಂಡವನ್ನು ಇನ್ನೂ ಪ್ರಕಟಿಸಿಲ್ಲ. ಆದರೂ ಆರ್‌ಸಿಬಿಯಲ್ಲಿರುವ ಅವರ ಸಹ ಆಟಗಾರ ಎಬಿ ಡಿವಿಲಿಯರ್ಸ್ ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ, ವಿರಾಟ್ ಮನೆಯಲ್ಲಿದ್ದಾರೆ. ಏಕೆಂದರೆ ಅವರ ಪತ್ನಿ ಅನುಷ್ಕಾ ಶರ್ಮಾ ಎರಡನೇ ಬಾರಿಗೆ ತಾಯಿಯಾಗಲಿದ್ದಾರೆ ಎಂದು ಹೇಳಿದ್ದರು.

ಓದಿ: ರಾಜ್ಯ ತಂಡಕ್ಕೆ ಮರಳಿದ ಮಯಾಂಕ್, ದೇವದತ್, ವಿದ್ವತ್; ಮಹತ್ವದ ಪಂದ್ಯಕ್ಕೂ ಮುನ್ನ ಬಲ ಹೆಚ್ಚಿಸಿಕೊಂಡ ಕರ್ನಾಟಕ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.