ಬೆಂಗಳೂರು : 17ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನಲ್ಲಿ ಇಂದು ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣ ತನ್ನ ಮೊದಲ ಪಂದ್ಯಕ್ಕೆ ಆತಿಥ್ಯ ವಹಿಸಲಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ನಡುವೆ ಇಂದು 7:30ಕ್ಕೆ ಆರಂಭವಾಗಲಿರುವ ಪಂದ್ಯದ ವೀಕ್ಷಣೆಗೆ ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಆಗಮಿಸಲಿದ್ದಾರೆ.
ಕ್ರಿಕೆಟ್ ಅಭಿಮಾನಿಗಳಿಗೆ ಅನುಕೂಲವಾಗುವ ರೀತಿಯಲ್ಲಿ ಮೈದಾನದ ಸುತ್ತಮುತ್ತಲಿನ ಸುಗಮ ಸಂಚಾರಕ್ಕಾಗಿ ಕೆಲ ಮಾರ್ಪಾಡುಗಳನ್ನು ಮಾಡಿ ಬೆಂಗಳೂರು ಸಂಚಾರ ಪೊಲೀಸರು ಆದೇಶಿಸಿದ್ದಾರೆ. ಇಂದು ಮಧ್ಯಾಹ್ನ 3 ಗಂಟೆಯಿಂದ ರಾತ್ರಿ 11ರ ವರೆಗೆ ಈ ಕೆಳಕಂಡ ರಸ್ತೆಗಳಲ್ಲಿ ವಾಹನಗಳ ನಿಲುಗಡೆಗೆ ನಿಷೇಧ ಮತ್ತು ಎಲ್ಲೆಲ್ಲಿ ವಾಹನಗಳಿಗೆ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ ಎಂಬ ಮಾಹಿತಿ ನೀಡಿದ್ದಾರೆ.
- ಈ ಕೆಳಕಂಡ ರಸ್ತೆಗಳಲ್ಲಿ ನೋ ಪಾರ್ಕಿಂಗ್..
- ಕ್ವೀನ್ಸ್ ರಸ್ತೆ, ಎಂ.ಜಿ ರಸ್ತೆ, ಎಂ.ಜಿ ರಸ್ತೆಯಿಂದ ಕಬ್ಬನ್ ರಸ್ತೆ, ರಾಜಭವನ ರಸ್ತೆ.
- ಸೆಂಟ್ರಲ್ ಸ್ಟ್ರೀಟ್ ರಸ್ತೆ, ಕಬ್ಬನ್ ರಸ್ತೆ, ಸೇಂಟ್ ಮಾರ್ಕ್ಸ್ ರಸ್ತೆ, ಮ್ಯೂಸಿಯಂ ರಸ್ತೆ
- ಕಸ್ತೂರಿಬಾ ರಸ್ತೆ, ಅಂಬೇಡ್ಕರ್ ವೀದಿ ರಸ್ತೆ, ಟ್ರಿನಿಟಿ ವೃತ್ತ, ಲ್ಯಾವೆಲ್ಲೆ ರಸ್ತೆ
- ವಿಠಲ್ ಮಲ್ಯ ರಸ್ತೆ, ಕಿಂಗ್ಸ್ ರಸ್ತೆ & ನೃಪತುಂಗ ರಸ್ತೆ
- ಸಾರ್ವಜನಿಕ ವಾಹನಗಳ ನಿಲುಗಡೆಗೆ ನಿಗದಿ ಪಡಿಸಿರುವ ಸ್ಥಳಗಳು..
- ಸೇಂಟ್ ಜೋಸೆಫ್ ಇಂಡಿಯನ್ ಸ್ಕೂಲ್ ಮೈದಾನ
- ಯು.ಬಿ ಸಿಟಿ ಪಾರ್ಕಿಂಗ್ ಸ್ಥಳ
- ಬಿಎಂಟಿಸಿ ಬಸ್ ನಿಲ್ದಾಣದ ಮೊದಲನೆ ಮಹಡಿ & ಓಲ್ಡ್ ಕೆಜಿಐಡಿ ಬಿಲ್ಡಿಂಗ್
- ಕಿಂಗ್ಸ್ ರಸ್ತೆ, (ಕಬ್ಬನ್ ಪಾರ್ಕ್ ಒಳಭಾಗ)
- ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಅಭಿಮಾನಿಗಳನ್ನ ಕರೆತರುವ ಓಲಾ, ಉಬರ್, ಆಟೋ, ಕ್ಯಾಬ್ ಇತ್ಯಾದಿ ವಾಹನಗಳು ಪಿಕ್ ಆಪ್ ಮತ್ತು ಡ್ರಾಪ್ ಮಾಡುವ ಸ್ಥಳಗಳು ಹೀಗಿವೆ
- ರಾಜಭವನ ರಸ್ತೆಯಲ್ಲಿ ಸಿಟಿಓ ಜಂಕ್ಷನ್ನಲ್ಲಿ ಪಿಕ್ ಅಪ್ ಹಾಗೂ ಕಬ್ಬನ್ ಪಾರ್ಕ್ ಮೆಟ್ರೋ ಬಳಿ ಡ್ರಾಪ್ ಮಾಡಬಹುದಾಗಿದೆ.
- ಕಬ್ಬನ್ ರಸ್ತೆಯ ಬಿ.ಆರ್.ವಿ ಗ್ರೌಂಡ್ ಬಳಿ ಪಿಕ್ ಅಪ್ ಹಾಗೂ ಗೇಟ್ ನಂಬರ್ 6ರ ಬಳಿ ಡ್ರಾಪ್ ಮಾಡಬಹುದಾಗಿದೆ.
ಓದಿ: IPL: 6 ರನ್‌ಗಳಿಂದ ಮುಂಬೈ ಮಣಿಸಿದ ಗುಜರಾತ್; ಗಿಲ್ ನಾಯಕತ್ವದಲ್ಲಿ ಮೊದಲ ಗೆಲುವು - Gujarat Titans