ETV Bharat / sports

IPL ಇತಿಹಾಸದಲ್ಲೇ ಹೊಸ ದಾಖಲೆ! ರನ್ ಹೊಳೆ ಹರಿಸಿದ ಹೈದರಾಬಾದ್‌; ಆರ್​ಸಿಬಿಗೆ 287 ರನ್​ ಗುರಿ​! - RCB Vs SRH - RCB VS SRH

ಹೈದರಾಬಾದ್​ ತನ್ನ ಹಳೆ ದಾಖಲೆ ಮುರಿದು ಇಂದಿನ ಪಂದ್ಯದಲ್ಲಿ ಹೊಸ ದಾಖಲೆ ಬರೆಯಿತು.

ಸನ್​ರೈಸರ್ಸ್​ ವಿರುದ್ದ ಟಾಸ್​ ಗೆದ್ದು ಬೌಲಿಂಗ್​ ಆಯ್ದುಕೊಂಡ ಆರ್​ಸಿಬಿ

author img

By ETV Bharat Karnataka Team

Published : Apr 15, 2024, 7:34 PM IST

Updated : Apr 15, 2024, 9:37 PM IST

ಬೆಂಗಳೂರು: ಸನ್‌ರೈಸರ್ಸ್ ಹೈದರಾಬಾದ್ ತಂಡ ಇಂದು ರಾಯಲ್​ ಚಾಲೆಂಜರ್ಸ್​ ಬೆಂಗಳೂರು ವಿರುದ್ಧ ಸಿಡಿಲಬ್ಬರದ ಬ್ಯಾಟಿಂಗ್​ ಪ್ರದರ್ಶನ ತೋರಿ ಐಪಿಎಲ್​ ಇತಿಹಾಸದಲ್ಲೇ ಹೊಸ ದಾಖಲೆ ಬರೆದಿದೆ.

ಟಾಸ್​ ಸೋತು ಮೊದಲು ಬ್ಯಾಟ್ ಮಾಡಿದ ಹೈದರಾಬಾದ್ ತಂಡದ ಟ್ರಾವಿಸ್ ಹೆಡ್ ಅವರ ವೇಗದ ಶತಕ ಮತ್ತು ಹೆನ್ರಿಚ್ ಕ್ಲಾಸೆನ್ ಅವರ ಅರ್ಧಶತಕದ ನೆರವಿನಿಂದ 20 ಓವರ್‌ಗಳಲ್ಲಿ ಮೂರು ವಿಕೆಟ್‌ ನಷ್ಟಕ್ಕೆ 287 ರನ್ ಪೇರಿಸಿತು.

ಐಪಿಎಲ್‌ನ ಇದೇ ಋತುವಿನಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಹೈದರಾಬಾದ್ 277 ರನ್ ಗಳಿಸಿತ್ತು. ಇದು ಐಪಿಎಲ್‌ನ ಅತ್ಯಧಿಕ ಸ್ಕೋರ್ ಆಗಿತ್ತು. ಆದರೆ ಇಂದು ತನ್ನದೇ ಆದ ಹಳೆಯ ದಾಖಲೆಯನ್ನು ಅಳಿಸಿ ಹಾಕಿದೆ.

ವೇಗದ ಬೌಲರ್ ಲಾಕಿ ಫರ್ಗುಸನ್ ಆರ್​ಸಿಬಿ ಪರ 2 ವಿಕೆಟ್​ ಪಡೆದ 52 ರನ್‌ ಬಿಟ್ಟು ಕೊಡುವ ಮೂಲಕ ತಂಡದ ಯಶಸ್ವಿ ಬೌಲರ್​ ಎನಿಸಿಕೊಂಡಿದ್ದಾರೆ. ಟಾಪ್ಲೆ 68, ವೈಶಾಕ್​ 64 ರನ್ ಬಿಟ್ಟುಕೊಡುವ ಮೂಲಕ ದುಬಾರಿ ಬೌಲರ್​ ಎನಿಸಿಕೊಂಡರು.

ಆರ್​ಸಿಬಿ ಪ್ರಸಕ್ತ ಋತುವಿನಲ್ಲಿ ಇದುವರೆಗೂ 6 ಪಂದ್ಯಗಳನ್ನಾಡಿದ್ದು, ಅದರಲ್ಲಿ ಕೇವಲ 1ರಲ್ಲಿ ಮಾತ್ರ ಗೆಲುವು ಸಾಧಿಸಿದೆ. ಕಳೆದ 4 ಪಂದ್ಯಗಳಲ್ಲಿ ಸತತವಾಗಿ ಸೋಲು ಕಂಡಿದೆ. ಈ ಪಂದ್ಯವನ್ನು ಶತಾಯಗತಾಯ ಗೆಲ್ಲುವ ಮೂಲಕ ಗೆಲುವಿನ ಟ್ರ್ಯಾಕ್​ಗೆ ಮರಳಲು ಯೋಜನೆ ರೂಪಿಸಿರುವ ತಂಡ 1 ಬದಲಾವಣೆಯೊಂದಿಗೆ ಕಣಕ್ಕಿಳಿದಿದೆ. ಗ್ಲೆನ್ ಮ್ಯಾಕ್ಸ್‌ವೆಲ್ ಅವರನ್ನು ಪಂದ್ಯದಿಂದ ಹೊರಗಿಡಲಾಗಿದ್ದು, ಅವರ ಸ್ಥಾನಕ್ಕೆ ಫರ್ಗುಸನ್‌ ಅವರನ್ನು ಆಯ್ಕೆ ಮಾಡಿದೆ.

ಮತ್ತೊಂದೆಡೆ, ಪ್ರಸಕ್ತ ಸಾಲಿನಲ್ಲಿ ಉತ್ತಮ ಪ್ರದರ್ಶನ ತೋರಿರುವ ಹೈದರಾಬಾದ್ 5 ಪಂದ್ಯಗಳಲ್ಲಿ 3 ಅನ್ನು ಗೆದ್ದು 2ರಲ್ಲಿ ಸೋತಿದೆ. ಕೊನೆಯ ಎರಡು ಪಂದ್ಯಗಳನ್ನು ಗೆದ್ದ ವಿಶ್ವಾಸದಲ್ಲಿ ಎಸ್​ಆರ್​ಹೆಚ್​​ ಕಣಕ್ಕಿಳಿದಿದೆ.

ತಂಡಗಳು- ಆರ್​ಸಿಬಿ: ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾ), ವಿಲ್ ಜಾಕ್ಸ್, ರಜತ್ ಪಾಟಿದಾರ್, ಸೌರವ್ ಚೌಹಾಣ್, ದಿನೇಶ್ ಕಾರ್ತಿಕ್ (ವಿ,ಕೀ), ಮಹಿಪಾಲ್ ಲೊಮ್ರೋರ್, ವಿಜಯ್​ಕುಮಾರ್​ ವೈಶಾಕ್, ರೀಸ್ ಟೋಪ್ಲಿ, ಫರ್ಗುಸನ್, ಯಶ್ ದಯಾಲ್

ಇಂಪ್ಯಾಕ್ಟ್​ ಪ್ಲೇಯರ್ಸ್​: ಸುಯಶ್ ಪ್ರಭುದೇಸಾಯಿ, ಅನುಜ್ ರಾವತ್, ಸ್ವಪ್ನಿಲ್ ಸಿಂಗ್, ಮೊಹಮ್ಮದ್ ಸಿರಾಜ್, ಕರ್ಣ್ ಶರ್ಮಾ

ಹೈದರಾಬಾದ್​: ಟ್ರಾವಿಸ್ ಹೆಡ್, ಅಭಿಷೇಕ್ ಶರ್ಮಾ, ಐಡೆನ್ ಮಾರ್ಕ್ರಾಮ್, ನಿತೀಶ್ ರೆಡ್ಡಿ, ಹೆನ್ರಿಚ್ ಕ್ಲಾಸೆನ್(ವಿ.ಕೀ), ಅಬ್ದುಲ್ ಸಮದ್, ಶಹಬಾಜ್ ಅಹ್ಮದ್, ಪ್ಯಾಟ್ ಕಮಿನ್ಸ್(ನಾ), ಭುವನೇಶ್ವರ್ ಕುಮಾರ್, ಜಯದೇವ್ ಉನಾದ್ಕತ್, ಟಿ ನಟರಾಜನ್

ಇಂಪ್ಯಾಕ್ಟ್​ ಪ್ಲೇಯರ್ಸ್​: ಉಮ್ರಾನ್ ಮಲಿಕ್, ಅನ್ಮೋಲ್ಪ್ರೀತ್ ಸಿಂಗ್, ಮಯಾಂಕ್ ಮಾರ್ಕಂಡೆ, ಗ್ಲೆನ್ ಫಿಲಿಪ್ಸ್, ರಾಹುಲ್ ತ್ರಿಪಾಠಿ

ಇದನ್ನೂ ಓದಿ: ಐಪಿಎಲ್ ಪಂದ್ಯದ​ ವೇಳೆ ವಿಡಿಯೋ, ಫೋಟೋ ತೆಗೆದರೆ ದಂಡ: ಬಿಸಿಸಿಐ ಎಚ್ಚರಿಕೆ - BCCI Warning

Last Updated : Apr 15, 2024, 9:37 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.