ಹೈದರಾಬಾದ್: ಫೆಬ್ರವರಿ 19 ರಿಂದ ಐಸಿಸಿ ಚಾಂಪಿಯನ್ಸ್ ಟ್ರೋಫಿ ಪ್ರಾರಂಭವಾಗಲಿದೆ. ಭಾರತ ಸೇರಿ ಒಟ್ಟು 8 ತಂಡಗಳು ಭಾಗವಹಿಸುತ್ತಿರುವ ಈ ಪ್ರತಿಷ್ಠಿತ ಟ್ರೋಫಿಗೆ ಪಾಕಿಸ್ತಾನ ಆತಿಥ್ಯ ವಹಿಸಿಕೊಂಡಿದೆ. ಆದರೆ ಭದ್ರತಾ ವಿಚಾರವಾಗಿ ಭಾರತ ತಂಡ ಪಾಕಿಸ್ತಾನಕ್ಕೆ ಹೋಗಲು ಹಿಂದೇಟು ಹಾಕಿರುವ ಕಾರಣ ಹೈಬ್ರಿಡ್ ಮಾದರಿಲ್ಲಿ ಪಂದ್ಯಾವಳಿಗಳು ನಡೆಯಲಿವೆ. ಭಾರತ ತನ್ನೆಲ್ಲ ಪಂದ್ಯಗಳನ್ನು ದುಬೈ ಮೈದಾನದಲ್ಲಿ ಆಡಲಿದೆ. ಉಳಿದಂತೆ 7 ತಂಡಗಳು ಪಾಕಿಸ್ತಾನ ಮೈದಾನದಲ್ಲಿ ಪಂದ್ಯವನ್ನು ಆಡಲಿವೆ.
ಏತನ್ಮಧ್ಯೆ, ಐಸಿಸಿ ಚಾಂಪಿಯನ್ಸ್ ಟ್ರೋಫಿ ಮತ್ತು ಇಂಗ್ಲೆಂಡ್ ವಿರುದ್ಧ ಮೂರು ಪಂದ್ಯಗಳ ಏಕದಿನ ಸರಣಿಗಾಗಿ ಇಂದು ಭಾರತ ತಂಡವನ್ನು ಪ್ರಕಟಿಸಲಾಗಿದೆ. ರೋಹಿತ್ ಶರ್ಮಾ ಮತ್ತು ಅಜಿತ್ ಅಗರ್ಕರ್ ಜಂಟಿಯಾಗಿ ಸುದ್ಧಿಗೋಷ್ಠಿ ನಡೆಸಿ ಎರಡು ಸರಣಿಗೆ 15 ಸದಸ್ಯರ ಭಾರತ ತಂಡವನ್ನು ಪ್ರಕಟಿಸಿದ್ದಾರೆ.
ಆದರೆ ಒಳ್ಳೆ ಫಾರ್ಮ್ನಲ್ಲಿರುವ ಸ್ಟಾರ್ ಪ್ಲೇಯರ್ ಸಂಜು ಸ್ಯಾಮ್ಸನ್ ಚಾಂಪಿಯನ್ಸ್ ಟ್ರೋಫಿಗೆ ಆಯ್ಕೆ ಆಗಿಲ್ಲ. ಕಳೆದ ವರ್ಷ ಟೀಂ ಇಂಡಿಯಾಗ ಕಮ್ಬ್ಯಾಕ್ ಮಾಡಿದ್ದ ಸಂಜು ಸ್ಯಾಮ್ಸನ್ 6 ಪಂದ್ಯಗಳಲ್ಲಿ ಮೂರು ಶತಕಗಳನ್ನು ಸಿಡಿಸಿ ಎಲ್ಲರ ಗಮನ ಸೆಳೆದಿದ್ದರು. ಆದರೆ ಸ್ಯಾಮ್ಸನ್ ಮಾಡಿದ ಒಂದೇ ಒಂದು ತಪ್ಪಿನಿಂದ ಚಾಂಪಿಯನ್ಸ್ ಟ್ರೋಫಿಯಿಂದ ಹೊರಗುಳಿದಿದ್ದಾರೆ.
ಹೌದು, ಸಂಜು ಸ್ಯಾಮ್ಸನ್ ದೇಶಿ ಕ್ರಿಕೆಟ್ ಆಡದೇ ಇರುವುದರಿಂದ ಅವರಿಗೆ ಹೊಡೆತ ಬಿದ್ದಿದೆ. ವಿಜಯ್ ಹಜಾರೆ ಟ್ರೋಫಿ ಆಡದೇ ಸಂಜು ಸ್ಯಾಮ್ಸನ್ ಗೈರುಹಾಜರಾಗಿರುವುದು ತೊಂದರೆಗೆ ಕಾರಣವಾಗಿದೆ. ಯಾವುದೇ ಸೂಕ್ತ ಕಾರಣ ಇಲ್ಲಿದೇ ಸಂಜು ದೇಶಿ ಲೀಗ್ನಿಂದ ಹೊರಗುಳಿದಿದ್ದಾರೆ. ಅಲ್ಲದೇ ದೇಶಿ ಕ್ರಿಕೆಟ್‌ನಲ್ಲಿ ಆಡುವ ಮೂಲಕ ಫಿಟ್‌ನೆಸ್ ಮತ್ತು ಫಾರ್ಮ್ ಅನ್ನು ಸಾಬೀತುಪಡಿಸದ ಕಾರಣ ಸ್ಯಾಮ್ಸನ್ ಅವರನ್ನು ಚಾಂಪಿಯನ್ಸ್ ಟ್ರೋಫಿ ಮತ್ತು ಇಂಗ್ಲೆಂಡ್ ವಿರುದ್ಧದ ಸರಣಿಗೆ ತಂಡದಲ್ಲಿ ಸ್ಥಾನ ಪಡೆದುಕೊಳ್ಳುವಲ್ಲಿ ವಿಫಲವಾಗಿದ್ದಾರೆ.
ಈ ಬಗ್ಗೆ ಮಂಡಳಿಯೂ ತಿಳಿಸಿತ್ತು, ಚಾಂಪಿಯನ್ಸ್ ಟ್ರೋಫಿಗೆ ವಿಕೆಟ್ ಕೀಪರ್ ಆಯ್ಕೆಯಲ್ಲಿ ಮುಂಚೂಣಿಯಲ್ಲಿರಬೇಕಾದರೆ ಸಂಜು ಸ್ಯಾಮ್ಸನ್ ದೇಶೀಯ ಕ್ರಿಕೆಟ್‌ನಲ್ಲಿ ತಮ್ಮ ಸಾಮರ್ಥ್ಯವನ್ನು ಸಾಭೀತು ಪಡಿಸುವ ಅಗತ್ಯವಿದೆ ಎಂದು ಹೇಳಿತ್ತು. ಸಧ್ಯ ಬಿಸಿಸಿಐ ಎಲ್ಲಾ ಆಟಗಾರರಿಗೆ ಖಡಕ್ ವಾರ್ನಿಂಗ್ ಮಾಡಿದ್ದು, ದೇಶಿ ಕ್ರಿಕೆಟ್‌ನಲ್ಲಿ ಆಡುವವರು ಮಾತ್ರ ಇನ್ಮುಂದೆ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆದುಕೊಳ್ಳಲಿದ್ದಾರೆ ಎಂದು ತಿಳಿಸಿದೆ. ಈ ಹಿಂದೆ, ಇಶಾನ್ ಕಿಶನ್ ಮತ್ತು ಶ್ರೇಯಸ್ ಅಯ್ಯರ್ ಅವರು ದೇಶೀಯ ಪಂದ್ಯಗಳಿಂದ ಹೊರಗಿದ್ದ ಕಾರಣ ಬಿಸಿಸಿಐ ಒಪ್ಪಂದದಿಂದ ತೆಗೆದು ಹಾಕಲಾಗಿತ್ತು.
ಇದನ್ನೂ ಓದಿ: ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ಬಲಿಷ್ಠ ಭಾರತ ಘೋಷಣೆ: ತಂಡದಲ್ಲಿದ್ದ ಏಕೈಕ ಕನ್ನಡಿಗರು!