ETV Bharat / sports

ಬಂಗಾಳ ವೈದ್ಯೆಯ ಅತ್ಯಾಚಾರ, ಕೊಲೆ ಖಂಡಿಸಿ ಪ್ರತಿಭಟನೆಗೆ ಮುಂದಾದ ಸೌರವ್ ಗಂಗೂಲಿ - Sourav Ganguly

ಬಂಗಾಳದ ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಖಂಡಿಸಿ ಬಿಸಿಸಿಐ ಮಾಜಿ ಅಧ್ಯಕ್ಷ ಸೌರವ್​ ಗಂಗೂಲಿ ಪ್ರತಿಭಟನೆಗೆ ಮುಂದಾಗಿದ್ದಾರೆ.

ಸೌರವ್​ ಗಂಗೂಲಿ
ಸೌರವ್​ ಗಂಗೂಲಿ (ETV Bharat)
author img

By ETV Bharat Sports Team

Published : Aug 20, 2024, 9:35 PM IST

ಕೋಲ್ಕತ್ತಾ(ಪಶ್ಚಿಮ ಬಂಗಾಳ): ಕೋಲ್ಕತ್ತಾದ ಆರ್‌.ಜಿ.ಕರ್‌ ಮೆಡಿಕಲ್‌ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಟ್ರೈನಿ ವೈದ್ಯೆಯೊಬ್ಬರ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಪ್ರಕರಣ ಇಡೀ ದೇಶದಲ್ಲಿ ಸಂಚಲನ ಮೂಡಿಸಿದೆ. ಈ ಘಟನೆ ಖಂಡಿಸಿ ಎಲ್ಲೆಡೆ ಪ್ರತಿಭಟನೆಗಳು ನಡೆಯುತ್ತಿವೆ.

ಸಾಮಾಜಿಕ ಜಾಲತಾಣ ಬಳಕೆದಾರರು ತಮ್ಮ ಪ್ರೊಫೈಲ್ ಚಿತ್ರಗಳನ್ನು ಕಪ್ಪು ಬಣ್ಣಕ್ಕೆ ಬದಲಾಯಿಸುವ ಮೂಲಕ ತಮ್ಮ ಒಗ್ಗಟ್ಟು ಪ್ರದರ್ಶಿಸುತ್ತಿದ್ದಾರೆ. ಬಿಸಿಸಿಐ ಮಾಜಿ ನಾಯಕ ಸೌರವ್ ಗಂಗೂಲಿ ಕೂಡ ಇದರ ವಿರುದ್ಧ ಧ್ವನಿ ಎತ್ತಿದ್ದು ಸಾಮಾಜಿಕ ಜಾಲತಾಣದಲ್ಲಿ ತಮ್ಮ ಪ್ರೊಫೈಲ್ ಅನ್ನು ಕಪ್ಪು ಬಣ್ಣಕ್ಕೆ ಬದಲಾಯಿಸಿದ್ದಾರೆ. ಪ್ರತಿಭಟನೆಯಲ್ಲೂ ಭಾಗಿಯಾಗಲಿದ್ದಾರೆ ಎಂದು ವರದಿಯಾಗಿದೆ.

ಬುಧವಾರ ಗಂಗೂಲಿ ಅವರ ಪತ್ನಿ ಡೊನ್ನಾ ಅವರ ನೃತ್ಯ ಶಾಲೆ ದೀಕ್ಷಾ ಮಂಜರಿಯಿಂದ ಪ್ರತಿಭಟನಾ ರ್ಯಾಲಿ ಆಯೋಜಿಸಲಾಗಿದೆ. ಇದರಲ್ಲಿ ಗಂಗೂಲಿ ಪಾಲ್ಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ. ಸಂಜೆ 7.30ಕ್ಕೆ ರ್ಯಾಲಿ ಆರಂಭವಾಗಲಿದೆ.

ನೆಟ್ಟಿಗರ ಟೀಕೆ: ಗಂಗೂಲಿ ತಮ್ಮ ಎಕ್ಸ್​ ಖಾತೆಯ ಪ್ರೊಫೈಲ್​ ಅನ್ನು ಕಪ್ಪುಬಣ್ಣಕ್ಕೆ ಬದಲಾಯಿಸಿರುವ ಕುರಿತು ನೆಟ್ಟಿಗರು ತರಾಟೆಗೆ ತೆಗೆದುಕೊಳ್ಳುತ್ತಿದ್ದಾರೆ. ಕಾರಣ ಕಳೆದ ಎರಡು ದಿನಗಳ ಹಿಂದೆ ಗಂಗೂಲಿ ಘಟನೆ ಸಂಬಂಧ ಹೇಳಿಕೆ ನೀಡಿದ್ದರು. ಇದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿತ್ತು. ಗಂಗೂಲಿ ಮಾಧ್ಯಮಗಳೊಂದಿಗೆ ಮಾತನಾಡುವಾಗ, ತಪ್ಪಿತಸ್ಥರಿಗೆ ಅತ್ಯಂತ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದ್ದರು.

ಇದೇ ವೇಳೆ, ಈ ಒಂದು ಘಟನೆಯಿಂದ ಇಡೀ ಪಶ್ಚಿಮ ಬಂಗಾಳ ಮತ್ತು ಕೋಲ್ಕತ್ತಾ ಸುರಕ್ಷಿತ ಸ್ಥಳವಲ್ಲ ಎಂದು ಹೇಳಿಕೆ ನೀಡುವುದು ಸರಿಯಲ್ಲ. ಇಂತಹ ಘಟನೆಗಳು ಪ್ರಪಂಚದಾದ್ಯಂತ ನಡೆಯುತ್ತವೆ. ಹೆಣ್ಣುಮಕ್ಕಳು ಸುರಕ್ಷಿತವಾಗಿಲ್ಲ ಎಂದು ಭಾವಿಸುವುದು ತಪ್ಪು. ಪಶ್ಚಿಮ ಬಂಗಾಳದಲ್ಲಿ ಮಾತ್ರವಲ್ಲ, ಭಾರತದಾದ್ಯಂತ ಮಹಿಳೆಯರು ಸುರಕ್ಷಿತವಾಗಿದ್ದಾರೆ. ನಾವು ವಾಸಿಸುವ ಸ್ಥಳ ಅತ್ಯುತ್ತಮ ಸ್ಥಳವಾಗಿದೆ. ಒಂದು ಘಟನೆಯಿಂದ ಎಲ್ಲವನ್ನೂ ನಿರ್ಣಯಿಸಬಾರದು ಎಂದಿದ್ದರು.

ಇದೀಗ ಅವರು ಪ್ರೊಫೈಲ್​ ಅನ್ನು ಕಪ್ಪು ಬಣ್ಣಕ್ಕೆ ಬದಲಾಯಿಸಿದ್ದಕ್ಕೆ ಓರ್ವ ನೆಟ್ಟಿಗರು, ಗಂಗೂಲಿ ಈ ಹಿಂದೆ ಹೇಳಿರುವ ಹೇಳಿಕೆಯನ್ನು ಮರೆಮಾಚಲು ಈ ರೀತಿ ಪ್ರೊಫೈಲ್​ ಬದಲಾಯಿಸಿದ್ದಾರೆ ಎಂದಿದ್ದಾರೆ. ಮತ್ತೊಬ್ಬ ಬಳಕೆದಾರರು, ಮೊನ್ನೆ ನೀಡಿದ ಹೇಳಿಕೆಗೆ ಟೀಕೆಗಳು ವ್ಯಕ್ತವಾದ ಬೆನ್ನಲ್ಲೇ ಇದೀಗ ನಾಟಕ ಮಾಡುತ್ತಿದ್ದಾರೆ ಎಂದಿದ್ದಾರೆ. ಮತ್ತೆ ಕೆಲವರು ಇತ್ತೀಚೆಗೆ ಹೇಳಿರುವ ಹೇಳಿಕೆಗೆ ಕ್ಷಮೆಯಾಚಿಸುವಂತೆ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಅಬ್ಬಾ! 2023ರ ಐಪಿಎಲ್​ನಿಂದ ಬಿಸಿಸಿಐ ಗಳಿಸಿದ ಲಾಭ ಎಷ್ಟು ಗೊತ್ತಾ?: ಇದು ಪಾಕ್​ ಕ್ರಿಕೆಟ್​ ಬಜೆಟ್​ಗಿಂತಲೂ ಅಧಿಕ! - BCCI Profit

ETV Bharat Logo

Copyright © 2024 Ushodaya Enterprises Pvt. Ltd., All Rights Reserved.