ETV Bharat / sports

T20 World Cup: ಇಂದು ಶ್ರೀಲಂಕಾ Vs ದಕ್ಷಿಣ ಆಫ್ರಿಕಾ ಮೊದಲ ಬಿಗ್​​ ಫೈಟ್​ - SL VS RSA

author img

By ETV Bharat Karnataka Team

Published : Jun 3, 2024, 2:25 PM IST

ಟಿ20 ವಿಶ್ವಕಪ್​ನ ಇಂದಿನ ಪಂದ್ಯದಲ್ಲಿ ಶ್ರೀಲಂಕಾ ಮತ್ತು ದಕ್ಷಿಣ ಆಫ್ರಿಕಾ ಸೆಣಸಲಿವೆ.

ಶ್ರೀಲಂಕಾ Vs ದಕ್ಷಿಣ ಆಫ್ರಿಕಾ
ಶ್ರೀಲಂಕಾ Vs ದಕ್ಷಿಣ ಆಫ್ರಿಕಾ (ETV Bharat)

ನ್ಯೂಯಾರ್ಕ್​: ಟಿ20 ವಿಶ್ವಕಪ್​ನ 4ನೇ ಪಂದ್ಯದಲ್ಲಿಂದು ಶ್ರೀಲಂಕಾ ಮತ್ತು ದಕ್ಷಿಣ ಆಫ್ರಿಕಾ ತಂಡಗಳು ಮುಖಾಮುಖಿಯಾಗಲಿವೆ. ನ್ಯೂಯಾರ್ಕ್​ನ ನಸ್ಸೌ ಕೌಂಟಿ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ಉಭಯ ತಂಡಗಳು T20 ವಿಶ್ವಕಪ್ ಅಭಿಯಾನ ಪ್ರಾರಂಭಿಸಲಿವೆ. ಈ ಕ್ರೀಡಾಂಗಣದಲ್ಲಿ ಇದೇ ಮೊದಲ ಅಧಿಕೃತ ಪಂದ್ಯವಾಗಿದೆ. ಇದಕ್ಕೂ ಮುನ್ನ ಇಲ್ಲಿ ಅಭ್ಯಾಸ ಪಂದ್ಯಗಳು ನಡೆದಿವೆ. ಈ ಹಿಂದೆ 2012ರಲ್ಲಿ ಶ್ರೀಲಂಕಾ ಟಿ20 ವಿಶ್ವಕಪ್ ಪ್ರಶಸ್ತಿ ಜಯಿಸಿತ್ತು. ದಕ್ಷಿಣ ಆಫ್ರಿಕಾ ಚೊಚ್ಚಲ ಟ್ರೋಫಿಗಾಗಿ ಕಾಯುತ್ತಿದೆ.

ಪಿಚ್​ ವರದಿ: ಟಿ20 ವಿಶ್ವಕಪ್​ಗಾಗಿ ನಿರ್ಮಾಣಗೊಂಡಿರುವ ನಸ್ಸೌ ಕೌಂಟಿ ಕ್ರಿಕೆಟ್​ ಮೈದಾನದಲ್ಲಿ ಮೊದಲು ಬ್ಯಾಟ್​ ಮಾಡುವ ತಂಡಕ್ಕೆ ಪಿಚ್ ನೆರವಾಗಿರಲಿದೆ. ಪಂದ್ಯ ಸಾಗುತ್ತಿದ್ದಂತೆ ಸ್ಪಿನ್ನರ್​​ಗಳು ಪಿಚ್​ನ ಸಹಾಯ ಪಡೆಯಲಿದ್ದಾರೆ.

ಹೆಡ್​ ಟು ಹೆಡ್​: ಶ್ರೀಲಂಕಾ ಮತ್ತು ದಕ್ಷಿಣ ಆಫ್ರಿಕಾ ಟಿ20ಯಲ್ಲಿ ಇದೂವರೆಗೂ 17 ಬಾರಿ ಮುಖಾಮುಖಿಯಾಗಿದ್ದು ಈ ಪೈಕಿ ಶ್ರೀಲಂಕಾ 12 ಪಂದ್ಯಗಳಲ್ಲಿ ಗೆದ್ದು ಮೇಲುಗೈ ಸಾಧಿಸಿದ್ದರೇ, ದಕ್ಷಿಣ ಆಫ್ರಿಕಾ 5 ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ.

ಪಂದ್ಯ ಆರಂಭದ ಸಮಯ: ರಾತ್ರಿ 8 ಗಂಟೆಗೆ

ನೇರ ಪ್ರಸಾರ: ಸ್ಟಾರ್​​ಸ್ಪೋರ್ಟ್ಸ್​

ಸಂಭಾವ್ಯ ತಂಡಗಳು - ಶ್ರೀಲಂಕಾ: ಪಾತುಮ್ ನಿಸ್ಸಾಂಕ, ಕುಸಾಲ್ ಮೆಂಡಿಸ್, ಕಮಿಂದು ಮೆಂಡಿಸ್, ಧನಂಜಯ ಡಿ ಸಿಲ್ವ, ಚರಿತ್ ಅಸಲಂಕ, ವನಿಂದು ಹಸರಂಗ (ನಾ), ಏಂಜೆಲೊ ಮ್ಯಾಥ್ಯೂಸ್, ದಸುನ್ ಶನಕ, ಮಹೀಶ್ ತೀಕ್ಷಣ, ಮಥೀಶ ಪತಿರಣ, ದಿಲ್ಶನ್ ಮಧುಶಂಕ

ದಕ್ಷಿಣ ಆಫ್ರಿಕಾ: ಕ್ವಿಂಟನ್ ಡಿ ಕಾಕ್, ರೀಜಾ ಹೆಂಡ್ರಿಕ್ಸ್, ರಿಯಾನ್ ರಿಕೆಲ್ಟನ್, ಐಡೆನ್ ಮಾರ್ಕ್ರಾಮ್ (ಸಿ), ಡೇವಿಡ್ ಮಿಲ್ಲರ್, ಹೆನ್ರಿಕ್ ಕ್ಲಾಸೆನ್, ಟ್ರಿಸ್ಟಾನ್ ಸ್ಟಬ್ಸ್, ಕೇಶವ್ ಮಹಾರಾಜ್, ಕಗಿಸೊ ರಬಾಡಾ, ಅನ್ರಿಚ್ ನಾರ್ಟ್ಜೆ, ತಬ್ರೈಜ್ ಶಮ್ಸಿ

ಇದನ್ನೂ ಓದಿ: ಟಿ20 ವಿಶ್ವಕಪ್: ರೋಚಕ ಸೂಪರ್​ ಓವರ್​​ನಲ್ಲಿ ಓಮನ್‌ ಮಣಿಸಿದ ನಮೀಬಿಯಾ - Namibia beats Oman

ETV Bharat Logo

Copyright © 2024 Ushodaya Enterprises Pvt. Ltd., All Rights Reserved.