ನವದೆಹಲಿ: ಟಿ20 ವಿಶ್ವಕಪ್ 2024ರ ಸೂಪರ್ - 8 ಹಂತದ ತನ್ನ ಎರಡನೇ ಪಂದ್ಯದಲ್ಲಿ ಭಾರತ ಇಂದು ಬಾಂಗ್ಲಾದೇಶವನ್ನು ಎದುರಿಸಲಿದೆ. ಈ ಪಂದ್ಯ ಆಂಟಿಗುವಾದ ಸರ್ ವಿವಿಯನ್ ರಿಚರ್ಡ್ಸ್ ಕ್ರೀಡಾಂಗಣದಲ್ಲಿ ಭಾರತೀಯ ಕಾಲಮಾನ ರಾತ್ರಿ 8 ಗಂಟೆಗೆ ನಡೆಯಲಿದೆ. ಈ ಪಂದ್ಯವನ್ನು ಗೆಲ್ಲುವ ಮೂಲಕ ಸೆಮಿಫೈನಲ್‌ಗೆ ಪ್ರವೇಶಿಸುವ ಗುರಿಯನ್ನು ಭಾರತ ಹೊಂದಿದೆ. ಟೂರ್ನಿಯಲ್ಲಿ ಇಲ್ಲಿಯವರೆಗೆ ಸೋಲನುಭವಿಸದ ಭಾರತ ತಂಡವು ಈ ಪಂದ್ಯದ ನೆಚ್ಚಿನ ತಂಡವಾಗಿದೆ. ಆದರೂ, ಬಾಂಗ್ಲಾದೇಶವನ್ನು ಹಗುರವಾಗಿ ಅಂದಾಜು ಮಾಡುವುದು ಸರಿಯಲ್ಲ. ಪಂದ್ಯದ ಮೊದಲು ಪಿಚ್ ವರದಿ, ಹೆಡ್ ಟು ಹೆಡ್ ರೆಕಾರ್ಡ್ ಮತ್ತು ಸಂಭವನೀಯ ಆಟಗಾರರನ್ನು ತಿಳಿದುಕೊಳ್ಳೋಣ.
ಹೆಡ್ ಟು ಹೆಡ್ ದಾಖಲೆಗಳು: ಭಾರತ ಮತ್ತು ಬಾಂಗ್ಲಾದೇಶ ನಡುವಿನ ಟಿ20 ದಾಖಲೆಗಳ ಬಗ್ಗೆ ಮಾತನಾಡುವುದಾದರೇ, ಎರಡು ತಂಡಗಳ ನಡುವೆ ಇದುವರೆಗೆ ಒಟ್ಟು 13 ಪಂದ್ಯಗಳು ನಡೆದಿವೆ. ಈ ಅವಧಿಯಲ್ಲಿ ಭಾರತ ತಂಡ ಪ್ರಾಬಲ್ಯ ಮೆರೆದಿದೆ. ಭಾರತ 13 ಪಂದ್ಯಗಳ ಪೈಕಿ 12ರಲ್ಲಿ ಗೆದ್ದಿದೆ. ಆದರೆ, ಬಾಂಗ್ಲಾದೇಶ ಕೇವಲ 1 ಪಂದ್ಯದಲ್ಲಿ ಗೆಲುವು ಸಾಧಿಸಿದೆ. ಇಂದು ನಡೆಯಲಿರುವ ಪಂದ್ಯಕ್ಕೂ ಮುನ್ನವೇ ಬಾಂಗ್ಲಾದೇಶಕ್ಕೆ ಬಲಿಷ್ಠ ಭಾರತ ತಂಡವನ್ನು ಸೋಲಿಸುವುದು ಕಷ್ಟ ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಆದರೂ, ಕ್ರಿಕೆಟ್ ಅನಿಶ್ಚಿತತೆಯ ಆಟವಾಗಿದೆ, ಇದರಲ್ಲಿ ಯಾವುದೂ ಅಸಾಧ್ಯವಲ್ಲ.
ಪಿಚ್ ವರದಿ: ಆಂಟಿಗುವಾದ ಸರ್ ವಿವಿಯನ್ ರಿಚರ್ಡ್ಸ್ ಕ್ರೀಡಾಂಗಣದ ಪಿಚ್ ನಿಧಾನ ಎಂದು ಪರಿಗಣಿಸಲಾಗಿದೆ. ಈ ಪಿಚ್ ಸ್ಪಿನ್ನರ್‌ಗಳಿಗೆ ವರದಾನವಾಗಿದೆ. ಇಲ್ಲಿ ಬ್ಯಾಟ್ಸ್‌ಮನ್‌ಗಳು ರನ್ ಗಳಿಸುವುದು ಸುಲಭವಲ್ಲ. ಆದರೆ ಸ್ಪಿನ್ನರ್‌ಗಳು ಈ ಪಿಚ್‌ನಿಂದ ಸಾಕಷ್ಟು ಸಹಾಯವನ್ನು ಪಡೆಯುತ್ತಾರೆ. ಇಂತಹ ಪರಿಸ್ಥಿತಿಯಲ್ಲಿ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಇಂದಿನ ಪಂದ್ಯದಲ್ಲಿ ಉಭಯ ತಂಡಗಳ ಸ್ಪಿನ್ ಬೌಲರ್‌ಗಳು ಹೆಚ್ಚು ಉಪಯುಕ್ತ ಎಂದು ಸಾಬೀತುಪಡಿಸಲಿದ್ದಾರೆ. ಇಂದಿನ ಬಾಂಗ್ಲಾದೇಶದ ವಿರುದ್ಧದ ಮಹತ್ವದ ಪಂದ್ಯದಲ್ಲಿ ರನ್ ಗಳಿಸುವ ಜವಾಬ್ದಾರಿಯು ಅತ್ಯುತ್ತಮ ಫಾರ್ಮ್‌ನಲ್ಲಿರುವ ಸೂರ್ಯಕುಮಾರ್ ಯಾದವ್ ಮತ್ತು ರಿಷಭ್ ಪಂತ್ ಅವರ ಮೇಲಿದೆ. ಈ ಇಬ್ಬರು ಆಟಗಾರರು ಅಗ್ರ ಕ್ರಮಾಂಕದ ವೈಫಲ್ಯದ ನಂತರ ಹಲವು ಬಾರಿ ಟೀಂ ಇಂಡಿಯಾವನ್ನು ಸಂಕಷ್ಟದಿಂದ ಪಾರು ಮಾಡಿದ್ದಾರೆ. ಅದೇ ಸಮಯದಲ್ಲಿ, ಬೌಲಿಂಗ್‌ನಲ್ಲಿ, ಆರಂಭಿಕ ವಿಕೆಟ್‌ಗಳನ್ನು ಪಡೆಯುವ ಜವಾಬ್ದಾರಿ ಜಸ್ಪ್ರೀತ್ ಬುಮ್ರಾ ಮತ್ತು ಅರ್ಷ್‌ದೀಪ್ ಸಿಂಗ್ ಅವರ ಮೇಲಿದೆ. ಸ್ಪಿನ್ ಪಿಚ್ ಅನ್ನು ಗಮನದಲ್ಲಿಟ್ಟುಕೊಂಡು, ಕುಲದೀಪ್ ಯಾದವ್, ರವೀಂದ್ರ ಜಡೇಜಾ ಮತ್ತು ಅಕ್ಷರ್ ಪಟೇಲ್ ಮಧ್ಯಮ ಓವರ್‌ಗಳಲ್ಲಿ ಅದ್ಭುತವಾಗಿ ಬೌಲಿಂಗ್ ಮಾಡುವ ನಿರೀಕ್ಷೆಯಿದೆ.
ಸಾಮರ್ಥ್ಯ ಮತ್ತು ದೌರ್ಬಲ್ಯ: ಈ ಪಂದ್ಯಾದಲ್ಲಿ ಭಾರತೀಯ ಕ್ರಿಕೆಟ್ ತಂಡವು ಆಟದ ಪ್ರತಿಯೊಂದು ವಿಭಾಗದಲ್ಲೂ ಅದ್ಭುತ ಪ್ರದರ್ಶನ ನೀಡಿದೆ. ಟೀಂ ಇಂಡಿಯಾ ಸಾಕಷ್ಟು ಸಮತೋಲಿತವಾಗಿ ಕಾಣುತ್ತಿದೆ. ಟೀಂ ಇಂಡಿಯಾದ ದೊಡ್ಡ ಶಕ್ತಿ ಎಂದರೆ ಅದರ ಬಲಿಷ್ಠ ಬ್ಯಾಟಿಂಗ್ ಲೈನ್ ಅಪ್. ಆರಂಭದಲ್ಲೇ ವಿಕೆಟ್ ಕಳೆದುಕೊಂಡರೂ ಟೀಂ ಇಂಡಿಯಾ ಬೃಹತ್ ಸ್ಕೋರ್ ತಲುಪುವಲ್ಲಿ ಯಶಸ್ವಿಯಾಗಿದೆ. ಬುಮ್ರಾ ಬೌಲಿಂಗ್‌ನಲ್ಲಿ ತಮ್ಮ ಪ್ರತಿಭೆ ತೋರಿದ್ದಾರೆ. ಭಾರತ ತಂಡದ ದೌರ್ಬಲ್ಯ ಎಂದರೆ ಕಳಪೆ ಆರಂಭಿಕ. ಆರಂಭಿಕರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ತಂಡಕ್ಕೆ ಉತ್ತಮ ಆರಂಭ ನೀಡುವಲ್ಲಿ ವಿಫಲರಾಗಿದ್ದಾರೆ. ಎಡಗೈ ಬ್ಯಾಟ್ಸ್‌ಮನ್ ಶಿವಂ ದುಬೆ ಕೂಡ ತಮ್ಮ ಕಳಪೆ ಪ್ರದರ್ಶನದಿಂದ ನಿರಾಸೆ ಮೂಡಿಸಿದ್ದಾರೆ.
ಬೌಲಿಂಗ್ ಬಾಂಗ್ಲಾದೇಶದ ಬಲಿಷ್ಠ ತಂಡವಾಗಿದೆ ಮತ್ತು ಬಾಂಗ್ಲಾದೇಶವನ್ನು ಹಗುರವಾಗಿ ಪರಿಗಣಿಸುವಂತಿಲ್ಲ. ಬಾಂಗ್ಲಾದೇಶದ ವೇಗದ ಬೌಲರ್‌ಗಳಾದ ತಸ್ಕಿನ್ ಅಹ್ಮದ್, ಮುಸ್ತಾಫಿಜುರ್ ರೆಹಮಾನ್ ಮತ್ತು ತಂಝೀಮ್ ಶಾಕಿಬ್ ಯಾವುದೇ ಬ್ಯಾಟಿಂಗ್ ಲೈನ್‌ಅಪ್ ಅನ್ನು ಕಟ್ಟಿ ಹಾಕುವ ಸಾಮರ್ಥ್ಯವನ್ನು ಹೊಂದಿದ್ದಾರೆ. ಆಲ್ ರೌಂಡರ್ ಶಕೀಬ್ ಅಲ್ ಹಸನ್ ಬೌಲಿಂಗ್ ಮತ್ತು ಬ್ಯಾಟಿಂಗ್ನಲ್ಲೂ ಯಾವುದೇ ಸಮಯದಲ್ಲಿ ಪಂದ್ಯದ ದಿಕ್ಕನ್ನು ಬದಲಾಯಿಸುವ ಶಕ್ತಿ ಅವರಲ್ಲಿದೆ. ಆದರೆ, ಬಾಂಗ್ಲಾದೇಶದ ದೌರ್ಬಲ್ಯ ಎಂದರೆ ಅದರ ಬ್ಯಾಟಿಂಗ್. 2024ರ ಟಿ20 ವಿಶ್ವಕಪ್‌ನಲ್ಲಿ ಬಾಂಗ್ಲಾದೇಶ ಬ್ಯಾಟ್ಸ್‌ಮನ್‌ಗಳು ಪ್ರಭಾವ ಬೀರಲು ವಿಫಲರಾಗಿದ್ದಾರೆ.
ಎರಡೂ ತಂಡಗಳ ಸಂಭಾವ್ಯ ಆಟಗಾರರ ಪಟ್ಟಿ
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ರಿಷಭ್ ಪಂತ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಶಿವಂ ದುಬೆ, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಅರ್ಶ್ದೀಪ್ ಸಿಂಗ್.
ಬಾಂಗ್ಲಾದೇಶ ತಂಡ: ತಂಝೀದ್ ಹಸನ್ ತಮೀಮ್, ನಜ್ಮುಲ್ ಹೊಸೈನ್ ಶಾಂಟೊ (ನಾಯಕ), ಲಿಟನ್ ಕುಮಾರ್ ದಾಸ್ (ವಿಕೆಟ್ ಕೀಪರ್), ಶಕೀಬ್ ಅಲ್ ಹಸನ್, ತೌಹೀದ್ ಹೃದಯ್, ಮಹಮ್ಮದುಲ್ಲಾ, ಜಖರ್ ಅಲಿ, ರಿಶಾದ್ ಹೊಸೈನ್, ತಸ್ಕಿನ್ ಅಹ್ಮದ್, ಮುಸ್ತಾಫಿಜುರ್ ರಹಮಾನ್ ಮತ್ತು ತಂಝೀಮ್ ಶಕೀಬ್.
ಓದಿ: ಕೆರಿಬಿಯನ್ನರ ಅಬ್ಬರಕ್ಕೆ ತತ್ತರಿಸಿದ ಅಮೆರಿಕ: ಯುಎಸ್ಗೆ ಸತತ ಎರಡನೇ ಸೋಲು - West Indies Crush USA