ಹೈದರಾಬಾದ್: ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿ ಮುಗಿದ ಬೆನ್ನಲ್ಲೇ ಟೀಂ ಇಂಡಿಯಾದಿಂದ ನಿವೃತ್ತಿಯ ಮಾತುಗಳು ಕೇಳಿಬರುತ್ತಿವೆ. ಏತನ್ಮಧ್ಯೆ, ಸ್ಟಾರ್ ಆಲ್ರೌಂಡರ್ವೊಬ್ಬರು ನಿಯಮಿತ ಓವರ್‌ಗಳ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ.
ರಿಷಿ ಧವನ್ ಏಕದಿನ ಮತ್ತು ಟಿ20 ಸ್ವರೂಪಕ್ಕೆ ನಿವೃತ್ತಿ ಹೇಳಿದ್ದಾರೆ. ವಿಜಯ್ ಹಜಾರೆ ಟ್ರೋಫಿ 2024-25ರ ಗುಂಪು ಹಂತದ ಪಂದ್ಯಗಳ ಬಳಿಕ ಈ ನಿರ್ಧಾರ ತೆಗೆದುಕೊಂಡಿದ್ದಾರೆ.
34 ವರ್ಷದ ಆಲ್‌ರೌಂಡರ್ ರಿಷಿ, ದೇಶೀಯ ಕ್ರಿಕೆಟ್‌ನಲ್ಲಿ ಹಿಮಾಚಲ ಪ್ರದೇಶವನ್ನು ಪ್ರತಿನಿಧಿಸಿದ್ದರು. ಅಲ್ಲದೇ, ರಾಷ್ಟ್ರೀಯ ತಂಡವನ್ನೂ ಪ್ರತಿನಿಧಿಸಿ ಏಕದಿನ ಮತ್ತು ಟಿ20 ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದಾರೆ.
ನಿವೃತ್ತಿ ಕುರಿತು ರಿಷಿ ಧವನ್ ತಮ್ಮ ಸಾಮಾಜಿಕ ಮಾಧ್ಯಮ ಇನ್ಸ್ಟಾಗ್ರಾಂ ಮೂಲಕ ಮಾಹಿತಿ ಹಂಚಿಕೊಂಡು, "ನಾನು ಸೀಮಿತ ಓವರ್‌ಗಳ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸುತ್ತಿದ್ದೇನೆ. ಕಳೆದ 20 ವರ್ಷಗಳಿಂದ ನನ್ನ ಜೀವನವನ್ನು ವ್ಯಾಖ್ಯಾನಿಸಿದ ಆಟ ಕ್ರಿಕೆಟ್. ಇದು ನನಗೆ ಅಪಾರ ಸಂತೋಷ ಮತ್ತು ಅಸಂಖ್ಯಾತ ನೆನಪುಗಳನ್ನು ನೀಡಿದೆ. ಆ ನೆನಪುಗಳು ಯಾವಾಗಲೂ ನನ್ನ ಹೃದಯಕ್ಕೆ ಹತ್ತಿರವಾಗಿರುತ್ತವೆ. ನನಗೆ ನೀಡಿದ ಅವಕಾಶಗಳಿಗಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ, ಹಿಮಾಚಲ ಪ್ರದೇಶ ಕ್ರಿಕೆಟ್ ಸಂಸ್ಥೆ, ಕೋಲ್ಕತ್ತಾ ನೈಟ್ ರೈಡರ್ಸ್, ಮುಂಬೈ ಇಂಡಿಯನ್ಸ್ ಮತ್ತು ಪಂಜಾಬ್ ಕಿಂಗ್ಸ್‌ಗೆ ಕೃತಜ್ಞತೆ ಸಲ್ಲಿಸುತ್ತೇನೆ" ಎಂದು ಬರೆದಿದ್ದಾರೆ.
ರಿಷಿ ಧವನ್ 2016ರಲ್ಲಿ ಆಸ್ಟ್ರೇಲಿಯಾ ವಿರುದ್ಧ ತಮ್ಮ ಚೊಚ್ಚಲ ಏಕದಿನ ಪಂದ್ಯ ಆಡಿದ್ದರು. ಅದೇ ವರ್ಷ, ಜಿಂಬಾಬ್ವೆ ವಿರುದ್ಧ ಚೊಚ್ಚಲ ಟಿ20 ಪಂದ್ಯ ಆಡಿದ್ದರು. ಭಾರತದ ಪರ 3 ಏಕದಿನ ಮತ್ತು ಏಕೈಕ ಅಂತಾರಾಷ್ಟ್ರೀಯ ಟಿ20 ಪಂದ್ಯ ಆಡಿದ್ದಾರೆ. ಮೂರು ಪಂದ್ಯಗಳ ಎರಡು ಇನ್ನಿಂಗ್ಸ್‌ನಲ್ಲಿ 12 ರನ್ ಗಳಿಸಿದ್ದಾರೆ. ಒಂದು ವಿಕೆಟ್ ಕೂಡ ಪಡೆದಿದ್ದಾರೆ. ಟಿ20 ಪಂದ್ಯದಲ್ಲಿ ಒಂದು ರನ್ ಹಾಗೂ ಒಂದು ವಿಕೆಟ್ ಉರುಳಿಸಿದ್ದಾರೆ.
ಐಪಿಎಲ್ ದಾಖಲೆ: ರಿಷಿ ಧವನ್ 2013ರಿಂದ ಇಂಡಿಯನ್ ಪ್ರೀಮಿಯರ್ ಲೀಗ್ ಆರಂಭಿಸಿದ್ದರು. 2013ರಲ್ಲಿ ಮುಂಬೈ ಇಂಡಿಯನ್ಸ್ ಭಾಗವಾಗಿದ್ದು ನಂತರ 2014ರಿಂದ 2024ರವರೆಗೆ ಪಂಜಾಬ್ ಕಿಂಗ್ಸ್ ಅಂತಿಮವಾಗಿ ಕೋಲ್ಕತ್ತಾ ನೈಟ್ ರೈಡರ್ಸ್ ಪರ ಆಡಿದ್ದರು. ಮೇ 19, 2024ರಂದು ಸನ್ ರೈಸರ್ಸ್ ಹೈದರಾಬಾದ್ ಪರ ಕೊನೆಯ ಐಪಿಎಲ್ ಆಡಿದ್ದರು. ಐಪಿಎಲ್ 2025ರ ಮೆಗಾ ಹರಾಜಿನಲ್ಲಿ ಅನ್‌ಸೋಲ್ಡ್ ಆಟಗಾರನಾಗಿ ಉಳಿದರು. ರಿಷಿ ಐಪಿಎಲ್ನಲ್ಲಿ ಈವರೆಗೂ 39 ಪಂದ್ಯಗಳನ್ನಾಡಿದ್ದು 24 ಇನ್ನಿಂಗ್ಸ್‌ಗಳಲ್ಲಿ 19.09 ಸರಾಸರಿಯಲ್ಲಿ 210 ರನ್ ಗಳಿಸಿದ್ದಾರೆ. 36 ಇನ್ನಿಂಗ್ಸ್‌ನಲ್ಲಿ ಬೌಲಿಂಗ್ ಮಾಡಿ 25 ವಿಕೆಟ್ ಪಡೆದಿದ್ದಾರೆ.
ಕ್ರಿಕೆಟ್ ವೃತ್ತಿಜೀವನದಲ್ಲಿ 9 ಸಾವಿರ ರನ್: ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ ಧವನ್, 98 ಪಂದ್ಯಗಳಲ್ಲಿ 4,824 ರನ್ ಗಳಿಸಿದ್ದು, 353 ವಿಕೆಟ್ ಪಡೆದಿದ್ದಾರೆ. 134 ಲಿಸ್ಟ್-ಎ ಪಂದ್ಯಗಳಲ್ಲಿ 2,906 ರನ್ ಹಾಗೂ 186 ವಿಕೆಟ್ ಪಡೆದಿದ್ದಾರೆ. ಟಿ20ಯಲ್ಲಿ 135 ಪಂದ್ಯಗಳನ್ನಾಡಿ 1,740 ರನ್ ಮತ್ತು 118 ವಿಕೆಟ್ ಪಡೆದಿದ್ದಾರೆ. ವಿಜಯ್ ಹಜಾರೆ ಟ್ರೋಫಿಯ ಈ ಋತುವಿನಲ್ಲಿ, ಧವನ್ 79.40ರ ಅತ್ಯುತ್ತಮ ಸರಾಸರಿಯಲ್ಲಿ 397 ರನ್ಗಳನ್ನು ಗಳಿಸಿ 28.45ರ ಸರಾಸರಿಯಲ್ಲಿ 11 ವಿಕೆಟ್ ಉರುಳಿಸಿದ್ದಾರೆ.
ಇದನ್ನೂ ಓದಿ: ವಿಶ್ವದ ಈ ಐವರು ಹಾಕಿ ಆಟಗಾರರು ಸಾವಿರಾರು ಕೋಟಿ ಆಸ್ತಿಗೆ ಒಡೆಯರು!