ETV Bharat / sports

4ನೇ ಬಾರಿಗೆ ಐಸಿಸಿ ವರ್ಷದ ಏಕದಿನ ಕ್ರಿಕೆಟಿಗ ಗೌರವಕ್ಕೆ ಪಾತ್ರರಾದ ವಿರಾಟ್ ಕೊಹ್ಲಿ - ODI Cricketer of the Year

ಚೇಸ್​ ಮಾಸ್ಟರ್​ ವಿರಾಟ್​ ಕೊಹ್ಲಿ 4ನೇ ಬಾರಿಗೆ ಐಸಿಸಿ ವರ್ಷದ ಏಕದಿನ ಆಟಗಾರ ಗೌರವಕ್ಕೆ ಪಾತ್ರರಾಗಿದ್ದಾರೆ.

ವಿರಾಟ್ ಕೊಹ್ಲಿ
ವಿರಾಟ್ ಕೊಹ್ಲಿ
author img

By ETV Bharat Karnataka Team

Published : Jan 25, 2024, 10:44 PM IST

ದುಬೈ: ವಿಶ್ವಕಪ್​ ಸೇರಿದಂತೆ ಏಕದಿನದಲ್ಲಿ ರನ್​ ಶಿಖರವನ್ನೇ ಕಟ್ಟಿದ್ದ ಕ್ರಿಕೆಟ್​​ನ ಅನಭಿಷಿಕ್ತ ದೊರೆಯಂತೆ ಮೆರೆಯುತ್ತಿರುವ ಬ್ಯಾಟಿಂಗ್​ ಕಿಂಗ್​ ವಿರಾಟ್​ ಕೊಹ್ಲಿ ಐಸಿಸಿ ಪುರುಷರ 2023ನೇ ಸಾಲಿನ ವರ್ಷದ 'ಏಕದಿನ ಕ್ರಿಕೆಟಿಗ' ಪ್ರಶಸ್ತಿಗೆ ಭಾಜನರಾಗಿದ್ದಾರೆ. ಇದು ಅವರ ನಾಲ್ಕನೇ ಪ್ರಶಸ್ತಿಯಾಗಿದೆ.

ಕಳೆದ ವರ್ಷ ನಡೆದ ಏಕದಿನ ವಿಶ್ವಕಪ್​ನಲ್ಲಿ ಅದ್ಭುತ ಪ್ರದರ್ಶನ ನೀಡಿದ್ದ, ವಿರಾಟ್​ ಕೊಹ್ಲಿ ಟೂರ್ನಿಯ ಶ್ರೇಷ್ಠ ಪ್ರಶಸ್ತಿ ಪಡೆದಿದ್ದರು. ಅಲ್ಲದೇ, ಯಾವುದೇ ವಿಶ್ವಕಪ್​ನಲ್ಲಿ ಅತಿ ಹೆಚ್ಚು ರನ್​ ಗಳಿಸಿದ ಆಟಗಾರ ಎಂಬ ದಾಖಲೆಯನ್ನು ಬರೆದಿದ್ದರು. ವಿಶ್ವಕಪ್ಪ್​ನಲ್ಲಿ ವಿರಾಟ್​ ಆಡಿದ 11 ಪಂದ್ಯಗಳಲ್ಲಿ 765 ರನ್​ ಬಾರಿಸಿದ್ದಾರೆ. ಇದರಲ್ಲಿ 9 ಅರ್ಧಶತಕ ಬಾರಿಸಿದ್ದಾರೆ. ಜೊತೆಗೆ ಮೂರು ಶತಕಗಳೂ ಇವೆ. ಇದು ಪುರುಷರ ಕ್ರಿಕೆಟ್ ವಿಶ್ವಕಪ್‌ನಲ್ಲಿ ಅತಿ ಹೆಚ್ಚು ವೈಯಕ್ತಿಕ ಮೊತ್ತವಾಗಿದೆ. 2003 ರಲ್ಲಿ ಕ್ರಿಕೆಟ್​ ದೇವರು ಸಚಿನ್ ತೆಂಡೂಲ್ಕರ್ 700 ಕ್ಕೂ ಅಧಿಕ ರನ್​ ಗಳಿಸಿದ ದಾಖಲೆ ಮುರಿದಿದ್ದರು.

ಕೊಹ್ಲಿಯ ಅಸಾಧಾರಣ ಲಯಕ್ಕೆ ಅಂಕಿ - ಅಂಶಗಳೇ ಸಾಕ್ಷಿ. 95.62 ಸರಾಸರಿ, 90.31 ಸ್ಟ್ರೈಕ್​ರೇಟ್ ಹೊಂದಿದ್ದ ಬ್ಯಾಟಿಂಗ್​ ಕಿಂಗ್​ ನ್ಯೂಜಿಲೆಂಡ್ ವಿರುದ್ಧದ ಸೆಮಿ ಫೈನಲ್‌ನಲ್ಲಿ ಸ್ಮರಣೀಯ ಬ್ಯಾಟಿಂಗ್​ ಪ್ರದರ್ಶನ ನೀಡಿದ್ದರು. ಸೆಮಿ ಫೈನಲ್‌ನಲ್ಲಿ ಏಕದಿನ ಮಾದರಿಯಲ್ಲಿ ಅವರ ದಾಖಲೆಯ 50ನೇ ಶತಕವನ್ನು ಪೂರ್ಣಗೊಳಿಸಿದ್ದರು.

ಕ್ಯಾಲೆಂಡರ್​ ವರ್ಷದಲ್ಲಿ ಸಾವಿರ ರನ್​: ಇನ್ನು, ಚೇಸ್​ ಮಾಸ್ಟರ್​ ಕೊಹ್ಲಿ ಕ್ಯಾಲೆಂಡರ್​ ವರ್ಷದಲ್ಲಿ 1 ಸಾವಿರಕ್ಕೂ ಅಧಿಕ ರನ್​ ಗಳಿಸಿದ್ದಾರೆ. ಭಾರತೀಯ ಬ್ಯಾಟಿಂಗ್ ಮಾಂತ್ರಿಕ 72.47 ರ ಸರಾಸರಿಯಲ್ಲಿ 1377 ರನ್‌ಗಳೊಂದಿಗೆ ವರ್ಷವನ್ನು ಮುಕ್ತಾಯಗೊಳಿಸಿದ್ದಾರೆ. ಇದು ಅವರ ಸ್ಥಿರತೆ ಮತ್ತು ಸಾಮರ್ಥ್ಯದ ಪ್ರತಿಬಿಂಬವಾಗಿದೆ. ಒಟ್ಟಾರೆ 24 ಇನ್ನಿಂಗ್ಸ್‌ಗಳಲ್ಲಿ 6 ಶತಕಗಳು ಮತ್ತು 8 ಅರ್ಧ ಶತಕಗಳನ್ನು ಗಳಿಸಿದ್ದಾರೆ.

ಇಂಗ್ಲೆಂಡ್​ ವಿರುದ್ಧದ ಐದು ಪಂದ್ಯಗಳ ಟೆಸ್ಟ್​ ಸರಣಿಯಲ್ಲಿ ವಿರಾಟ್​ ಕೊಹ್ಲಿ ಮೊದಲೆರಡು ಪಂದ್ಯಗಳಿಂದ ವೈಯಕ್ತಿಕ ಕಾರಣಕ್ಕಾಗಿ ಹೊರಗುಳಿದಿದ್ದಾರೆ. ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಈ ಮಾಹಿತಿ ಹಂಚಿಕೊಂಡಿದೆ. ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಇಂದು ಮಾಧ್ಯಮ ಹೇಳಿಕೆ ನೀಡಿದ್ದು, ವೈಯಕ್ತಿಕ ಕಾರಣಗಳನ್ನು ಉಲ್ಲೇಖಿಸಿ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಮೊದಲ ಎರಡು ಟೆಸ್ಟ್‌ಗಳಿಂದ ಬಿಸಿಸಿಐ ತಮ್ಮ ಹೆಸರನ್ನು ಹಿಂತೆಗೆದುಕೊಳ್ಳುವಂತೆ ವಿರಾಟ್ ಕೊಹ್ಲಿ ಮನವಿ ಮಾಡಿದ್ದಾರೆ ಎಂದು ತಿಳಿಸಿದ್ದರು.

ಇದನ್ನೂ ಓದಿ: ಇಂಗ್ಲೆಂಡ್ ವಿರುದ್ಧದ ಮೊದಲೆರಡು ಟೆಸ್ಟ್‌ ಪಂದ್ಯಗಳಿಗೆ ಕೊಹ್ಲಿ ಅಲಭ್ಯ: ದ್ರಾವಿಡ್ ಹೇಳಿದ್ದೇನು?

ETV Bharat Logo

Copyright © 2024 Ushodaya Enterprises Pvt. Ltd., All Rights Reserved.