ಹೈದರಾಬಾದ್: ಭಾರತದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಎರಡು ಪಂದ್ಯಗಳಿಂದ ಹೊರಗುಳಿಯಲಿದ್ದಾರೆ. ಸ್ವತಃ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಈ ಮಾಹಿತಿ ಹಂಚಿಕೊಂಡಿದೆ. ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಇಂದು ಮಾಧ್ಯಮ ಹೇಳಿಕೆಯಲ್ಲಿ, "ವೈಯಕ್ತಿಕ ಕಾರಣಗಳನ್ನು ಉಲ್ಲೇಖಿಸಿ ಮುಂಬರುವ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಮೊದಲ ಎರಡು ಟೆಸ್ಟ್‌ಗಳಿಂದ ಬಿಸಿಸಿಐ ತಮ್ಮ ಹೆಸರನ್ನು ಹಿಂತೆಗೆದುಕೊಳ್ಳುವಂತೆ ವಿರಾಟ್ ಕೊಹ್ಲಿ ಮನವಿ ಮಾಡಿದ್ದಾರೆ" ಎಂದು ಹೇಳಿದ್ದಾರೆ.
-
🚨 NEWS 🚨
— BCCI (@BCCI) January 22, 2024 " class="align-text-top noRightClick twitterSection" data="
Virat Kohli withdraws from first two Tests against England citing personal reasons.
Details 🔽 #TeamIndia | #INDvENGhttps://t.co/q1YfOczwWJ
">🚨 NEWS 🚨
— BCCI (@BCCI) January 22, 2024
Virat Kohli withdraws from first two Tests against England citing personal reasons.
Details 🔽 #TeamIndia | #INDvENGhttps://t.co/q1YfOczwWJ🚨 NEWS 🚨
— BCCI (@BCCI) January 22, 2024
Virat Kohli withdraws from first two Tests against England citing personal reasons.
Details 🔽 #TeamIndia | #INDvENGhttps://t.co/q1YfOczwWJ
ಜನವರಿ 25 ರಿಂದ ಹೈದರಾಬಾದ್‌ನ ರಾಜೀವ್ ಗಾಂಧಿ ಸ್ಟೇಡಿಯಂನಲ್ಲಿ ನಡೆಯಲಿರುವ ಮೊದಲ ಟೆಸ್ಟ್‌ನೊಂದಿಗೆ ಐದು ಟೆಸ್ಟ್ ಪಂದ್ಯಗಳ ಸರಣಿ ಆರಂಭವಾಗಲಿದೆ. ನಾಯಕ ರೋಹಿತ್ ಶರ್ಮಾ, ತಂಡದ ಮ್ಯಾನೇಜ್‌ಮೆಂಟ್ ಮತ್ತು ಆಯ್ಕೆದಾರರೊಂದಿಗೆ ವಿರಾಟ್ ಈ ಬಗ್ಗೆ ಮಾತನಾಡಿದ್ದಾರೆ. ಅಲ್ಲದೇ ದೇಶವನ್ನು ಪ್ರತಿನಿಧಿಸುವುದು ಯಾವಾಗಲೂ ತನ್ನ ಪ್ರಮುಖ ಆದ್ಯತೆಯಾಗಿದೆ ಎಂದೂ ಹೇಳಿದ್ದಾರೆ.
ಆದರೇ ವೈಯಕ್ತಿಕ ಕಾರಣದಿಂದ ಎರಡು ಪಂದ್ಯಗಳಿಂದ ಹೊರಗುಳಿಲಿದ್ದಾರೆ. ಅವರ ನಿರ್ಧಾರವನ್ನು ಬಿಸಿಸಿಐ ಗೌರವಿಸುತ್ತದೆ. ಟೆಸ್ಟ್ ಸರಣಿಯಲ್ಲಿ ಶ್ಲಾಘನೀಯ ಪ್ರದರ್ಶನ ನೀಡಲು ತಂಡದ ಉಳಿದ ಆಟಗಾರರ ಮೇಲೆ ಸಂಪೂರ್ಣ ವಿಶ್ವಾಸವಿದೆ ಎಂದು ಶಾ ಹೇಳಿದ್ದಾರೆ.
ಶೀಘ್ರದಲ್ಲೇ ಕೊಹ್ಲಿ ಬದಲಿ ಆಟಗಾರನನ್ನು ಘೋಷಿಸಲಿದೆ ಎಂದು ಬಿಸಿಸಿಐ ಪ್ರಕಟಣೆಯಲ್ಲಿ ಉಲ್ಲೇಖಿಸಲಾಗಿದೆ. ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಎರಡು ಪಂದ್ಯಗಳಿಗೆ ಟೀಂ ಇಂಡಿಯಾವನ್ನು ಘೋಷಿಸಲಾಗಿದೆ, ಇದರಲ್ಲಿ ವಿರಾಟ್ ಕೊಹ್ಲಿ ಅವರ ಹೆಸರೂ ಸೇರಿತ್ತು. ಆದರೆ, ಈಗ ಭಾರತದ ಸ್ಟಾರ್ ಬ್ಯಾಟ್ಸ್‌ಮನ್ ಅವರ ಹೆಸರನ್ನು ಹಿಂಪಡೆದಿದ್ದಾರೆ, ಇದರಿಂದಾಗಿ ಅವರ ಸ್ಥಾನ ಶೀಘ್ರದಲ್ಲೇ ಪ್ರಕಟಿಸಲಾಗುವುದು. ಭಾರತದ ಮಾಜಿ ವೇಗಿ ಅಜಿತ್ ಅಗರ್ಕರ್ ನೇತೃತ್ವದ ಹಿರಿಯ ಆಯ್ಕೆ ಸಮಿತಿಯು ಶೀಘ್ರದಲ್ಲೇ ಬದಲಿ ಆಟಗಾರನನ್ನು ಹೆಸರಿಸಲಿದೆ.
ಮೊದಲ ಎರಡು ಟೆಸ್ಟ್ ಪಂದ್ಯಗಳಿಗೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಜಸ್ಪ್ರೀತ್ ಬುಮ್ರಾ (ಉಪನಾಯಕ), ಶುಭಮನ್ ಗಿಲ್, ಶ್ರೇಯಸ್ ಅಯ್ಯರ್, ಯಶಸ್ವಿ ಜೈಸ್ವಾಲ್, ಕೆಎಸ್ ಭರತ್ (ವಿಕೆಟ್ ಕೀಪರ್), ಕೆಎಲ್ ರಾಹುಲ್ (ವಿಕೆಟ್ ಕೀಪರ್), ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಕುಲದೀಪ್ ಯಾದವ್, ಅಕ್ಷರ್ ಪಟೇಲ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಅವೇಶ್ ಖಾನ್.
ಭಾರತ Vs ಇಂಗ್ಲೆಂಡ್ ಟೆಸ್ಟ್ ವೇಳಾಪಟ್ಟಿ
1ನೇ ಟೆಸ್ಟ್: ಜನವರಿ 25 ರಿಂದ 29ರ ವರೆಗೆ, ಹೈದರಾಬಾದ್
2 ನೇ ಟೆಸ್ಟ್: ಫೆಬ್ರವರಿ 2 ರಿಂದ 6ರ ವರೆಗೆ ವಿಶಾಖಪಟ್ಟಣಂ
3 ನೇ ಟೆಸ್ಟ್: ಫೆಬ್ರವರಿ 15ರಿಂದ19ರ ವರೆಗೆ , ರಾಜ್ಕೋಟ್
4 ನೇ ಟೆಸ್ಟ್: ಫೆಬ್ರವರಿ 23 ರಿಂದ 27ರ ವರೆಗೆ ರಾಂಚಿ
5 ನೇ ಟೆಸ್ಟ್: ಮಾರ್ಚ್ 7 ರಿಂದ 11ರ ವರೆಗೆ ಧರ್ಮಶಾಲಾ
ಇದನ್ನೂ ಓದಿ: ಗ್ರ್ಯಾಂಡ್ ಮಾಸ್ಟರ್ ಸೋಲಿಸಿದ ಅತಿ ಕಿರಿಯ ಆಟಗಾರ ಲಿಯೋನಿಡ್ ಇವಾನೊವಿಕ್