Yuzvendra Chahal and Dhanashree Verma: ಕಳೆದ ವರ್ಷ ಟೀಂ ಇಂಡಿಯಾದ ಸ್ಟಾರ್ ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ - ನತಾಶಾ ವಿಚ್ಛೇದನ ಪಡೆದಿದ್ದು ಗೊತ್ತೇ ಇದೆ. ಪ್ರೀತಿಸಿ ಮದುವೆಯಾಗಿದ್ದ ಈ ಜೋಡಿ ಮಗ ಹುಟ್ಟಿದ ನಂತರ ಬೇರ್ಪಟ್ಟಿತ್ತು. ಇದೀಗ ಭಾರತದ ಮತ್ತೋರ್ವ ಕ್ರಿಕೆಟಿಗ ಪಾಂಡ್ಯ ಹಾದಿಯಲ್ಲೇ ಸಾಗುತ್ತಿರುವಂತೆ ಕಾಣುತ್ತಿದೆ.
ಹೌದು, ಭಾರತದ ಸ್ಟಾರ್ ಬೌಲರ್ ಯಜುವೇಂದ್ರ ಚಹಾಲ್ ಮತ್ತು ಪತ್ನಿ ಧನಶ್ರೀ ವರ್ಮಾ ವಿಚ್ಛೇದನ ಪಡೆಯಲು ತಯಾರಿ ನಡೆಸುತ್ತಿದ್ದಾರೆ ಎಂಬ ಊಹಾಪೋಹಗಳು ಕೇಳಿ ಬರುತ್ತಿವೆ. ದಂಪತಿಗಳು ಈಗಾಗಲೇ ಇನ್‌ಸ್ಟಾದಲ್ಲಿ ಪರಸ್ಪರ ಅನ್‌ಫಾಲೋ ಮಾಡಿಕೊಂಡಿದ್ದಾರೆ. ಅಲ್ಲದೇ ಚಹಾಲ್ ಇತ್ತೀಚೆಗಷ್ಟೇ ತನ್ನ ಪತ್ನಿಯ ಫೋಟೋಗಳನ್ನು ಇನ್‌ಸ್ಟಾದಲ್ಲಿ ಡಿಲೀಟ್ ಮಾಡಿದ್ದಾರೆ. ಇದು ಊಹಾಪೋಹಗಳಿಗೆ ಪುಷ್ಠಿ ನೀಡಿದಂತಿದೆ. ಆದರೆ, ಧನಶ್ರೀ ಮಾತ್ರ ತಮ್ಮ ಖಾತೆಯಲ್ಲಿ ಚಹಾಲ್ ಜೊತೆಗಿರುವ ಫೋಟೋಗಳನ್ನು ಡಿಲೀಟ್ ಮಾಡಿಲ್ಲ.
ಮೂಲಗಳ ಪ್ರಕಾರ, ದಂಪತಿಗಳು ವಿಚ್ಛೇದನ ಪಡೆಯುವ ಸಾಧ್ಯತೆ ಇದೆ. ಆದರೆ, ಅಧಿಕೃತವಾಗಿ ಘೋಷಿಸಲು ಸ್ವಲ್ಪ ಸಮಯ ತೆಗೆದುಕೊಳ್ಳಬಹುದು ಎನ್ನಲಾಗುತ್ತಿದೆ. ಆದರೆ, ಈ ಚಹಾಲ್ ದಂಪತಿ ಬೇರ್ಪಡುವಿಕೆಗೆ ನಿಖರವಾದ ಕಾರಣಗಳು ತಿಳಿದುಬಂದಿಲ್ಲ.
ಏತನ್ಮಧ್ಯೆ, ಚಹಾಲ್ ಮತ್ತು ಧನಶ್ರೀ ವರ್ಮಾ ಅವರನ್ನು ಡಿಸೆಂಬರ್ 22, 2020 ರಂದು ವಿವಾಹವಾಗಿದ್ದರು. ಮದುವೆಯ ನಂತರ ಇಬ್ಬರೂ ಇನ್‌ಸ್ಟಾದಲ್ಲಿ ರೀಲ್ ಮಾಡುವ ಮೂಲಕ ತಮ್ಮ ಅಭಿಮಾನಿಗಳನ್ನು ರಂಜಿಸಿದ್ದರು. ಆದರೆ, ಇತ್ತೀಚೆಗಷ್ಟೇ ಧನಶ್ರೀ ತಮ್ಮ ಇನ್ಸ್ಟಾ ಖಾತೆಯಲ್ಲಿ 'ಚಹಾಲ್' ಎಂಬ ಹೆಸರನ್ನು ತೆಗೆದು ಹಾಕಿದ್ದರು. ಇದರ ಬೆನ್ನಲೆ ದಂಪತಿ ವಿಚ್ಛೇದನಕ್ಕೆ ಮುಂದಾಗಿದ್ದಾರೆ ಎಂಬ ವದಂತಿ ಶುರುವಾಗಿತ್ತು.
ಇದರ ಬೆನ್ನಲ್ಲೇ ಚಹಾಲ್ ತಮ್ಮ ಇನ್ಸ್ಟಾಗ್ರಾಂ ಸ್ಟೋರಿಯಲ್ಲಿ 'ಹೊಸ ಜೀವನ ಲೋಡ್ ಅಗುತ್ತಿದೆ' ಎಂದು ಬರೆದುಕೊಂಡಿದ್ದರು. ಇದರೊಂದಿಗೆ ಅವರು ವಿಚ್ಛೇದನ ಪಡೆಯುವುದು ಖಚಿತ ಎಂಬ ಸುದ್ದಿಗಳು ಹರಿದಾಡಿದ್ದವು. ಈ ಕ್ರಮದಲ್ಲಿ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿ ಒಬ್ಬರನ್ನೊಬ್ಬರು ಅನ್ ಫಾಲೋ ಮಾಡಿದ್ದು ಊಹಾಪೋಹಗಳಿಗೆ ಪುಷ್ಠಿ ನೀಡಿದೆ. ಇದೀಗ ಚಹಾಲ್ ತಮ್ಮ ಪತ್ನಿಯ ಫೋಟೋಗಳನ್ನು ಡಿಲೀಟ್ ಮಾಡಿದ್ದು, ಅವರ ವಿಚ್ಛೇದನದ ವಿಷಯ ಮತ್ತೊಮ್ಮೆ ಚರ್ಚೆಗೆ ಗ್ರಾಸವಾಗಿದೆ.
ಇದನ್ನೂ ಓದಿ: ರಿಷಭ್ ಪಂತ್ ಸ್ಪೋಟಕ ಬ್ಯಾಟಿಂಗ್ಗೆ 129 ವರ್ಷದ ಹಳೆ ದಾಖಲೆ ಉಡೀಸ್