ETV Bharat / state

ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ 100 ಕೋಟಿ ರೂ. ಮೀಸಲು: 30 ಕೋಟಿ ರೂ. ಬಿಡುಗಡೆಗೆ ಪ್ರಸ್ತಾವನೆ - ಶಿವರಾಜ್ ತಂಗಡಗಿ - Minister Shivaraj Thangadagi - MINISTER SHIVARAJ THANGADAGI

ವಿಧಾನಸಭಾ ಕಲಾಪದಲ್ಲಿ ಇಂದು ಪ್ರಶ್ನೋತ್ತರ ವೇಳೆಯಲ್ಲಿ ಮಂಡ್ಯ ಶಾಸಕ ರವಿಕುಮಾರ್ ಗಣಿಗ ಅವರ ಪ್ರಶ್ನೆಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಉತ್ತರಿಸಿದರು.

Minister Shivaraj Thangadagi
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ (ETV Bharat)
author img

By ETV Bharat Karnataka Team

Published : Jul 24, 2024, 5:17 PM IST

ಬೆಂಗಳೂರು: "ಮಂಡ್ಯದಲ್ಲಿ ನಡೆಯಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ 100 ಕೋಟಿ ರೂಪಾಯಿಗಳನ್ನು ಮೀಸಲಿರಿಸಲಾಗಿದ್ದು, 30 ಕೋಟಿ ರೂಪಾಯಿಗಳ ಬಿಡುಗಡೆಗೆ ಪ್ರಸ್ತಾವನೆ ಸಲ್ಲಿಕೆಯಾಗಿದೆ" ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ವಿಧಾನಸಭೆಯಲ್ಲಿ ತಿಳಿಸಿದ್ದಾರೆ.

ಇಂದು ಪ್ರಶ್ನೋತ್ತರದ ವೇಳೆಯಲ್ಲಿ ಮಂಡ್ಯ ಶಾಸಕ ರವಿಕುಮಾರ್ ಗಣಿಗ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, "ಡಿಸೆಂಬರ್ 20, 21 ರಂದು ಆಯೋಜಿಸಲಾಗಿರುವ ಸಾಹಿತ್ಯ ಸಮ್ಮೇಳನಕ್ಕೆ ಅನುದಾನ ಬಿಡುಗಡೆ ಮಾಡುವ ಕುರಿತು ಪರಿಶೀಲಿಸಲಾಗುತ್ತಿದೆ. ಈಗಾಗಲೇ 2024 25ನೇ ಸಾಲಿನ ಕ್ರಿಯಾ ಯೋಜನೆಯಲ್ಲಿ ಸಾಹಿತ್ಯ ಸಮ್ಮೇಳನಕ್ಕೆ ಅನುದಾನ ಮೀಸಲಿರಿಸಲಾಗಿದೆ" ಎಂದು ಹೇಳಿದರು.

ಆರಂಭದಲ್ಲಿ ಸಭಾಧ್ಯಕ್ಷರು ಪ್ರಶ್ನೆ ಕೇಳಲು ಶಾಸಕರನ್ನು ಆಹ್ವಾನಿಸುವ ಸಂದರ್ಭದಲ್ಲಿ ರವಿಕುಮಾರ್ ಗಾಣಿಗ ಎಂದು ಉಲ್ಲೇಖಿಸಿದರು. ಇದಕ್ಕೆ ಸ್ಪಷ್ಟನೆ ನೀಡಿದ ಶಾಸಕರು, ಅದು ಗಾಣಿಗ ಅಲ್ಲ, ಗಣಿಗ ಎಂದು ತಿದ್ದುಪಡಿ ಮಾಡಿದರು. ಇದಕ್ಕೂ ಮೊದಲು ಉಮೇಶ್ ಕತ್ತಿ ಅವರ ಹೆಸರನ್ನು ಕೂಗುವಾಗಲೂ ಸಭಾಧ್ಯಕ್ಷರು ಉಮೇಶ್ ಹುಕ್ಕೇರಿ ಎಂದು ಹೇಳಿದಾಗ, ಬಿಜೆಪಿಯ ಶಾಸಕರು ಲೋಪವನ್ನು ಸರಿಪಡಿಸಿದರು.

ಅರಸು ಭವನ ಕಾಮಗಾರಿ: ದಿ. ದೇವರಾಜ್ ಅರಸು ಜನ ಜನ್ಮದಿನೋತ್ಸವದ ಅಂಗವಾಗಿ ಹುಣಸೂರಿನಲ್ಲಿ ನಿರ್ಮಿಸಲು ಉದ್ದೇಶಿಸಿರುವ ಅರಸು ಭವನ ಕಾಮಗಾರಿಯನ್ನು ಇದೇ ವರ್ಷದ ಸೆಪ್ಟಂಬರ್ ಅಂತ್ಯಕ್ಕೆ ಪೂರ್ಣಗೊಳಿಸುವುದಾಗಿ ಸಚಿವ ಶಿವರಾಜ್ ತಂಗಡಗಿ ತಿಳಿಸಿದರು. ಹುಣಸೂರು ಕ್ಷೇತ್ರದ ಜೆಡಿಎಸ್ ಶಾಸಕ ಜಿ.ಟಿ ಹರೀಶ್ ಗೌಡ ಪ್ರಶ್ನೆಗೆ ಉತ್ತರಿಸಿದರು.

ದೇವರಾಜ ಅರಸು ಜನ್ಮದಿನೋತ್ಸವದ ನಿಮಿತ್ತ ಮೈಸೂರು ಜಿಲ್ಲೆಯ ಹುಣಸೂರು ಪಟ್ಟಣದಲ್ಲಿ 7.9 ಕೋಟಿ ರೂ. ವೆಚ್ಚದಲ್ಲಿ ಡಿ. ದೇವರಾಜ ಅರಸು ಭವನ ನಿರ್ಮಾಣ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿತ್ತು. ಅದರ ನಿರ್ಮಾಣ ಕೆಲಸ ಪೂರ್ಣಗೊಂಡಿದೆ. ಒಳಾಂಗಣ ವಿನ್ಯಾಸ ಹಾಗೂ ಹೊರಾಂಗಣದ ಗೋಡೆ ನಿರ್ಮಾಣ ಬಾಕಿ ಇದೆ. ಇದಕ್ಕಾಗಿ 1.9 ಕೋಟಿ ರೂ. ಅಗತ್ಯವಿದೆ ಎಂದು ಬೇಡಿಕೆ ಬಂದಿತ್ತು. ರಾಜ್ಯ ಸರ್ಕಾರ ಈಗಾಗಲೇ ಹಣ ಬಿಡುಗಡೆ ಮಾಡಿದ್ದು, ಜಿಲ್ಲಾಧಿಕಾರಿಗಳ ಪಿಡಿ ಖಾತೆಯಲ್ಲಿ ಹಣ ಇದೆ. ಬಹುತೇಕ ಸೆಪ್ಟೆಂಬರ್ ಬೆಳಗ್ಗೆ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ಸ್ಪಷ್ಟಪಡಿಸಿದರು.

ಆರಂಭದಲ್ಲಿ ವಿಷಯ ಪ್ರಸ್ತಾಪಿಸಿದ ಶಾಸಕ ಹರೀಶ್ ಗೌಡ, ದೇವರಾಜ ಅರಸು ಅವರ ಜನ್ಮ ಶತಮಾನೋತ್ಸವದ ನಿಮಿತ್ತ ಭವನ ನಿರ್ಮಾಣ ಕಾಮಗಾರಿಯನ್ನು ಪೂರ್ಣಗೊಳಿಸಬೇಕು. ಜೊತೆಗೆ ಅವರ ಹೆಸರಿನಲ್ಲಿ ನಿರ್ಮಿಸಲಾಗುತ್ತಿರುವ ಆಸ್ಪತ್ರೆಯ ಕೆಲಸವು ಬಾಕಿ ಉಳಿದಿದ್ದು, ಅದನ್ನು ಆದ್ಯತೆ ಮೇರೆಗೆ ಕೈಗೆತ್ತಿಕೊಳ್ಳಬೇಕು. ದೇವರಾಜು ಅರಸು ಅವರ ಹುಟ್ಟೂರು ಕಲ್ಲಳ್ಳಿಯ ಸಮಗ್ರ ಅಭಿವೃದ್ಧಿಗೆ ಯೋಜನೆ ರೂಪಿಸಬೇಕು ಎಂದು ಆಗ್ರಹಿಸಿದರು.

ಇದನ್ನೂ ಓದಿ: ಬೆಂಗಳೂರಿನಲ್ಲಿ ಕೆರೆ ಒತ್ತುವರಿ ಯಾವುದೇ ಮುಲಾಜಿಲ್ಲದೆ ತೆರವು : ಡಿ ಕೆ ಶಿವಕುಮಾರ್ - Lake encroachment

ETV Bharat Logo

Copyright © 2025 Ushodaya Enterprises Pvt. Ltd., All Rights Reserved.