ETV Bharat / state

ಸರ್ಕಾರದಿಂದ ವೇತನ ಪಾವತಿ ಬಾಕಿ ಇಲ್ಲ, 108 ಆಂಬ್ಯುಲೆನ್ಸ್ ಸಿಬ್ಬಂದಿ ಮುಷ್ಕರ ಕೈಬಿಟ್ಟಿದ್ದಾರೆ: ದಿನೇಶ್ ಗುಂಡೂರಾವ್ - Dinesh Gundurao

108 ಆಂಬ್ಯುಲೆನ್ಸ್ ಸಿಬ್ಬಂದಿಗಳಿಗೆ ನೀಡಬೇಕಾದ ವೇತನವನ್ನ ನಿಯಮನುಸಾರ ಪಾವತಿಸಲಾಗಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ದಿನೇಶ್ ಗುಂಡೂರಾವ್
ದಿನೇಶ್ ಗುಂಡೂರಾವ್ (ETV Bharat)
author img

By ETV Bharat Karnataka Team

Published : May 7, 2024, 10:16 PM IST

Updated : May 7, 2024, 10:55 PM IST

ದಿನೇಶ್ ಗುಂಡೂರಾವ್ (ETV Bharat)

ಬೆಂಗಳೂರು: 108 ಆಂಬ್ಯುಲೆನ್ಸ್ ಸಿಬ್ಬಂದಿ ತಮ್ಮ ಮುಷ್ಕರದಿಂದ ಹಿಂದೆ ಸರಿದಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಆರೋಗ್ಯ ಇಲಾಖೆ ಅಧಿಕಾರಿಗಳು ಸಿಬ್ಬಂದಿಗಳೊಂದಿಗೆ ಹಾಗೂ ಜಿವಿಕೆ ಇಎಂಆರ್ ಸಂಸ್ಥೆಯವರೊಂದಿಗೆ ಚರ್ಚೆ ನಡೆಸಿದ್ದಾರೆ. ಸರ್ಕಾರದಿಂದ ಯಾವುದೇ ವೇತನವನ್ನ ಬಾಕಿ ಉಳಿಸಿಕೊಂಡಿಲ್ಲ ಎಂದರು.

ಸರ್ಕಾರದ ಬಳಿ ಹಣಕಾಸಿನ ಕೊರತೆಯಿಲ್ಲ. 108 ಆಂಬ್ಯುಲೆನ್ಸ್ ಸಿಬ್ಬಂದಿಗೆ ನೀಡಬೇಕಾದ ವೇತನವನ್ನ ನಿಯಮನುಸಾರ ಪಾವತಿಸಲಾಗಿದೆ. 108 ಆಂಬ್ಯುಲೆನ್ಸ್ ಸಿಬ್ಬಂದಿಗೆ ಯೋಜನೆಯನ್ನ ನಿರ್ವಹಿಸುತ್ತಿರುವ ಸಂಸ್ಥೆ ಜಿವಿಕೆ ಇಎಂಆರ್ ನವರು ವೇತನ ನೀಡಬೇಕು. ಸಂಸ್ಥೆಯವರೊಂದಿಗೆ ಒಡಂಬಡಿಕೆಯ ಪ್ರಕಾರ ಸರ್ಕಾರದಿಂದ ಕೊಡಬೇಕಾದ ಅನುದಾನವನ್ನ ಪಾವತಿಸಲಾಗಿದೆ. ಅನಗತ್ಯವಾಗಿ ವಿಪಕ್ಷಗಳು ಸರ್ಕಾರದ ಮೇಲೆ ಬೊಟ್ಟು ಮಾಡಿ ತೋರಿಸುವುದು ಸರಿಯಲ್ಲ ಎಂದು ಹೇಳಿದರು.

ಏಜೆನ್ಸಿಯವರಿಂದ ಸಿಬ್ಬಂದಿಗೆ ವೇತನ ಪಾವತಿಯಲ್ಲಿ ವ್ಯತ್ಯಾಸಗಳಾಗಿದ್ದರೆ ಅದನ್ನು ಸರಿಪಡಿಸುವಂತೆ ಸಂಸ್ಥೆಯವರಿಗೆ ತಿಳಿಸಲಾಗಿದೆ. 108 ಸಿಬ್ಬಂದಿಗಳ ಇನ್ನತರ ಕೆಲವು ಬೇಡಿಕೆಗಳಿವೆ. ಅದನ್ನು ಚುನಾವಣಾ ನೀತಿ ಸಂಹಿತೆ ಮುಗಿದ ಬಳಿಕ ಚರ್ಚಿಸೋಣ ಎಂದು ಮನವರಿಕೆ ಮಾಡಿಕೊಡಲಾಗಿದೆ. ಆಂಬ್ಯುಲೆನ್ಸ್ ಸಿಬ್ಬಂದಿ ಮುಷ್ಕರ ನಡೆಸುವ ಬಗ್ಗೆ ಮಾಧ್ಯಮಗಳಲ್ಲಿ ವರದಿ ಕೇಳಿಬಂದ ಹಿನ್ನೆಲೆಯಲ್ಲಿ ಸಮಸ್ಯೆ ಬಗ್ಗೆ ಪರಿಶೀಲಿಸುವಂತೆ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಸೂಚಿಸಿದ್ದೆ. ಸೂಚನೆ ಮೇರೆಗೆ ಆರೋಗ್ಯ ಇಲಾಖೆ ಆಯುಕ್ತರಾದ ರಂದೀಪ್ 108 ಸಿಬ್ಬಂದಿ ಜೊತೆ ಚರ್ಚೆ ನಡೆಸಿದ್ದು, ಆರೋಗ್ಯ ಇಲಾಖೆಯಿಂದ ಕೊಡಬೇಕಾಗಿರುವ ಯಾವುದೇ ವೇತನ ಬಾಕಿ ಉಳಿಸಿಕೊಂಡಿಲ್ಲ ಎಂಬುದನ್ನ ಮನವರಿಕೆ ಮಾಡಿಕೊಟ್ಟರು ಎಂದರು.

ಸಿಬ್ಬಂದಿಗಳಿಗೆ ವೇತನ ಪಾವತಿ ಮಾಡಿಬೇಕಾಗಿರುವ ಜಿವಿಕೆ ಇಎಂಆರ್ ಸಂಸ್ಥೆಯಿಂದ ಸಮಸ್ಯೆಗಳಾಗಿದ್ದರೆ, ಅದನ್ನ ಸಂಸ್ಥೆಯವರೊಂದಿಗೆ ಚರ್ಚಿಸಿ ಸರಿಪಡಿಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ಸರ್ಕಾರದಿಂದ ಅಗತ್ಯ ಸಹಕಾರ ದೊರೆಯಲಿದೆ ಎಂದು ಆಂಬ್ಯುಲೆನ್ಸ್ ಸಿಬ್ಬಂದಿಗಳಿಗೆ ಸ್ಪಷ್ಟಪಡಿಸಲಾಗಿದೆ. ಈ ಹಿನ್ನೆಲೆಯಲ್ಲಿ 108 ಸಿಬ್ಬಂದಿಗಳು ಮುಷ್ಕರದಿಂದ ಹಿಂದೆ ಸರಿದಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ: 108 ಆಂಬ್ಯುಲೆನ್ಸ್ ಸಿಬ್ಬಂದಿಗೆ ಸರ್ಕಾರದಿಂದ ವೇತನ ಬಾಕಿ ಉಳಿಸಿಕೊಂಡಿಲ್ಲ: ದಿನೇಶ್ ಗುಂಡೂರಾವ್ - dinesh gundurao

Last Updated : May 7, 2024, 10:55 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.