ETV Bharat / state

ತುಮಕೂರು: ವಿಚ್ಛೇದನಕ್ಕೆ ಮುಂದಾಗಿದ್ದ 13 ಜೋಡಿಗಳು ಮತ್ತೆ ಒಂದಾದವು! - Family Court - FAMILY COURT

ತುಮಕೂರಿನಲ್ಲಿ ಇತ್ತೀಚೆಗೆ ನಡೆದ ಜಿಲ್ಲಾ ಕೌಟುಂಬಿಕ ನ್ಯಾಯಾಲಯದಲ್ಲಿ ವಿಚ್ಛೇದನಕ್ಕೆ ಮುಂದಾಗಿದ್ದ 13 ಜೋಡಿಗಳನ್ನು ನ್ಯಾಯಾಧೀಶರ ಸಮ್ಮುಖದಲ್ಲಿ ಮತ್ತೆ ಒಂದಾಗಿವೆ.

13 couples reunite through Tumakuru dist family court intervention
ನ್ಯಾಯಾಲಯದಲ್ಲಿ ಮತ್ತೆ ಒಂದಾದ ಜೋಡಿಗಳು (ETV Bharat)
author img

By ETV Bharat Karnataka Team

Published : Jul 16, 2024, 10:25 AM IST

ತುಮಕೂರು: ಜಿಲ್ಲಾ ಕೌಟುಂಬಿಕ ನ್ಯಾಯಾಲಯದಲ್ಲಿ ವಿವಾಹ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದ 13 ಜೋಡಿಗಳನ್ನು ಪುನಃ ಒಂದು ಮಾಡಿದ ವಿಶೇಷ ಪ್ರಸಂಗ ನಡೆಯಿತು. ಇತ್ತೀಚೆಗೆ ರಾಷ್ಟ್ರೀಯ ಲೋಕ್ ಅದಾಲತ್​​ನಲ್ಲಿ ಕೌಟುಂಬಿಕ ನ್ಯಾಯಾಲಯದಲ್ಲಿ ಬಾಕಿ ಇದ್ದ ಪ್ರಕರಣಗಳ ವಾದ-ವಿವಾದಗಳನ್ನು ಆಲಿಸಲಾಯಿತು. ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾದ ಬಿ.ಜಯಂತ್ ಕುಮಾರ್ ಅವರು ಎರಡೂ ಕಡೆಯ ವಕೀಲರನ್ನು ಸಂಪರ್ಕಿಸಿ ಅವರ ಸಮ್ಮುಖದಲ್ಲಿಯೇ ವಾದ-ವಿವಾದಗಳನ್ನು ಆಲಿಸಿದರು.

ಗಂಡ-ಹೆಂಡತಿ ಒಂದು ನಾಣ್ಯದ ಎರಡು ಮುಖಗಳಿದ್ದಂತೆ, ಚಿಕ್ಕ ವಿಚಾರಗಳಿಗೆ ಮನಸ್ತಾಪ ಮಾಡಿಕೊಳ್ಳಬಾರದು, ಮಕ್ಕಳ ಹಿತಕ್ಕಾಗಿ ಹಿರಿಯರನ್ನು ನೋಡಿಕೊಳ್ಳುವ ಜವಾಬ್ದಾರಿ ನಿಮ್ಮ ಮೇಲಿದೆ. ಅವರ ಮನಸ್ಸಿಗೆ ಘಾಸಿ ಮಾಡಬಾರದು ಎಂದು ಬುದ್ಧಿ ಹೇಳಿ ಪರಸ್ಪರರಿಗೆ ಹಾರ ಬದಲಾಯಿಸಿ ಸಿಹಿ ತಿನ್ನಿಸಿ ಒಂದು ಮಾಡಿ ಮನೆಗೆ ಕಳಿಸಿದರು.

13 couples reunite through Tumakuru dist family court intervention
ನ್ಯಾಯಾಲಯದಲ್ಲಿ ಮತ್ತೆ ಒಂದಾದ ಜೋಡಿಗಳು (ETV Bharat)

ಗಂಡ-ಹೆಂಡತಿ ಎರಡು ಕೈಗಳಿದ್ದಂತೆ, ಒಂದೇ ಕೈಯಿಂದ ಏನೂ ಕೆಲಸ ಮಾಡಲಾಗದು. ಎರಡೂ ಕೈ ಮಾತ್ರ ಇದ್ದರೆ ಚಪ್ಪಾಳೆ, ಇಬ್ಬರೂ ಒಬ್ಬರನ್ನೊಬ್ಬರು ನಂಬಬೇಕು. ಪರಸ್ಪರ ಪ್ರೀತಿ ವಿಶ್ವಾಸ ನಂಬಿಕೆಯಿಂದ ಜೀವನ ನಡೆಸಬೇಕು. ಆಗ ಮಾತ್ರ ಸಮಾಜದಲ್ಲಿ ಶಾಂತಿ ಸಾಧ್ಯ. ನೀವು ಸಹ ಅಭಿವೃದ್ಧಿ ಹೊಂದುತ್ತೀರಿ ಎಂದು ಪ್ರಧಾನ ಕೌಟುಂಬಿಕ ನ್ಯಾಯಾಲಯದ ನ್ಯಾಯಾಧೀಶರಾದ ಮುನಿರಾಜು ತಿಳಿ ಹೇಳಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮತ್ತು ಹಿರಿಯ ಸಿವಿಲ್ ನ್ಯಾಯಾಧೀಶರಾದ ನೂರುನ್ನೀಸ ಮಾತನಾಡಿ, ಮಕ್ಕಳ ಭವಿಷ್ಯದ ದೃಷ್ಟಿಯಿಂದ ತಂದೆ-ತಾಯಿ, ಅತ್ತೆ-ಮಾವನವರ ಹಿತದೃಷ್ಟಿಯಿಂದ ಇಬ್ಬರೂ ಒಂದಾಗಬೇಕು. ಗಂಡ-ಹೆಂಡತಿ ಜೊತೆಯಲ್ಲಿದ್ದರೆ ಅದಕ್ಕೆ ಬೆಲೆ, ಕುಟುಂಬ ಮುಖ್ಯ, ಪುನಃ ಜಗಳವಾಡಿ ನ್ಯಾಯಾಲಯಕ್ಕೆ ಅರ್ಜಿ ಹಾಕಿಕೊಂಡು ಬರಬೇಡಿ, ನೂರಾರು ಕಾಲ ಸಂತಸದಿಂದ ಜೀವನ ಸಾಗಿಸಿ ಎಂದು ಶುಭ ಹಾರೈಸಿದರು.

ಮಧುಗಿರಿ ನ್ಯಾಯಾಲಯದಲ್ಲಿ 2, ಪಾವಗಡದಲ್ಲಿ 1, ತಿಪಟೂರಿನಲ್ಲಿ 1, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಚೇರಿಯಲ್ಲಿ 1, ಕೌಟುಂಬಿಕ ನ್ಯಾಯಾಲಯದಲ್ಲಿ 13 ಜೋಡಿಗಳು ಪುನಃ ಒಂದಾಗಿ ಮನೆಗೆ ತೆರಳಿದರು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನೀಸ ಮಾಹಿತಿ ನೀಡಿದರು.

ಇದನ್ನೂ ಓದಿ: ಲೋಕ ಅದಾಲತ್‌ನಲ್ಲಿ ಹೊಸ ದಾಖಲೆ: 40 ಲಕ್ಷ ಪ್ರಕರಣಗಳ ಇತ್ಯರ್ಥ - Lok Adalat

ETV Bharat Logo

Copyright © 2025 Ushodaya Enterprises Pvt. Ltd., All Rights Reserved.